Home
ಸುದ್ದಿಜಾಲ

ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ 149ರೂ. ಪ್ಲ್ಯಾನ್‌: ಯಾವುದು ಯೋಗ್ಯ?

ದೇಶದಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ರಿಯಲನ್ಸ್ ಜಿಯೋ, ಭಾರ್ತಿ ಏರ್‌ಟೆಲ್‌ ಮತ್ತು (ವೊಡಾಫೋನ್ ಐಡಿಯಾ) ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಆ ಪೈಕಿ ಭಿನ್ನ ಬೆಲೆಯಲ್ಲಿ ಪ್ರೀಪೇಯ್ಡ್‌ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳು ಒಳಗೊಂಡಿವೆ. ಆದರೆ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಪ್ರೀಪೇಯ್ಡ್‌ ಯೋಜನೆಗಳು ಹೆಚ್ಚು ಪ್ರಯೋಜನಗಳೊಂದಿಗೆ ಚಂದಾದಾರರ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 149ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ರೀಚಾರ್ಜ್‌ಗೆ ಮನಸ್ಸು ಮಾಡುತ್ತಾರೆ.

ಯೋಜನೆಯಲ್ಲಿ

ಹೌದು, ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು 149ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಹೊಂದಿವೆ. ಈ ಮೂರು ಟೆಲಿಕಾಂಗಳ ಈ ಅಗ್ಗದ ಮೊತ್ತದ ರೀಚಾರ್ಜ್‌ ಯೋಜನೆಯಲ್ಲಿ ಡೇಟಾ, ಆಕರ್ಷಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಕಂಪನಿಯ ಆಪ್‌ ಸೇವೆಗಳ ಸೌಲಭ್ಯಗಳು ಸಿಗಲಿವೆ. ಆದರೂ ಈ ಮೂರು ಕಂಪನಿಗಳ 149ರೂ.ಗಳ ಯೋಜನೆಯಲ್ಲಿ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ, ಏರ್‌ಟೆಲ್‌ ಮತ್ತು ವೊಡಾಫೋನ್ ಐಡಿಯಾ (ವಿ ಟೆಲಿಕಾಂ) 149ರೂ. ಪ್ಲ್ಯಾನಿನಲ್ಲಿ ಯಾವುದು ಅತ್ಯುತ್ತಮ ಎನಿಸಲಿದೆ? ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಲಾಯನ್ಸ್‌ ಜಿಯೋ 149ರೂ. ಪ್ರೀಪೇಯ್ಡ್‌ ಯೋಜನೆ

ರಿಲಾಯನ್ಸ್‌ ಜಿಯೋ 149ರೂ. ಪ್ರೀಪೇಯ್ಡ್‌ ಯೋಜನೆ

ರಿಲಾಯನ್ಸ್‌ ಜಿಯೋ 149ರೂ.ಗಳ ಆಲ್‌-ಇನ್-ಒನ್ ಪ್ರಿಪೇಯ್ಡ್ ಯೋಜನೆಯಲ್ಲಿ ಚಂದಾದಾರರಿಗೆ ಪ್ರತಿದಿನ 1 ಜಿಬಿ ಲಭ್ಯವಾಗುತ್ತದೆ. ಜಿಯೋದಿಂದ ಜಿಯೋ ಹೊರಹೋಗುವ ಕರೆಗಳು ಉಚಿತವಾಗಿರುತ್ತದೆ ಹಾಗೂ ಜಿಯೋದಿಂದ ಇತರೆ ನೆಟವರ್ಕ್‌ಗಳ ಕರೆಗಳಿಗೆ ಸಹ ಸಂಪೂರ್ಣ ಅನಿಯಮಿತ ಆಗಿವೆ. ಈ ಯೋಜನೆಯು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಅಲ್ಲದೆ, ಚಂದಾದಾರರಿಗೆ ದಿನಕ್ಕೆ 100 ಉಚಿತ ಎಸ್‌ಎಂಎಸ್ ಸೌಲಭ್ಯವನ್ನು ನೀಡುತ್ತದೆ.

ಭಾರ್ತಿ ಏರ್‌ಟೆಲ್ 149ರೂ. ಪ್ರೀಪೇಯ್ಡ್‌ ಯೋಜನೆ

ಭಾರ್ತಿ ಏರ್‌ಟೆಲ್ 149ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ನ 149ರೂ. ಪ್ರೀಪೇಡ್‌ ಪ್ಲ್ಯಾನ್‌ ಸಹ ದೀರ್ಘಾವಧಿಯ ವ್ಯಾಲಿಡಿಟಿ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದ್ದು, ಈ ಅವಧಿಯಲ್ಲಿ ಒಟ್ಟಾರೇ 2GB ಡೇಟಾ ಹಾಗೂ ಒಟ್ಟಾರೇ 300 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಹೆಚ್ಚುವರಿಯಾಗಿ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ. ಫ್ರೀ ಹೆಲೋ ಟ್ಯೂನ್ಸ್‌, ವಿಂಕ್ ಮ್ಯೂಸಿಕ್ ಸೇವೆಗಳು ಲಭ್ಯವಾಗಲಿವೆ.

ವಿ ಟೆಲಿಕಾಂ 149ರೂ. ಪ್ರಿಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 149ರೂ. ಪ್ರಿಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ 300 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 1GB ಡೇಟಾವನ್ನು ಪಡೆಯಬಹುದು. ಆದರೆ ಈ ಕೊಡುಗೆ ಪಡೆಯಲು ಗ್ರಾಹಕರು ಕಂಪನಿಯ ಅಧಿಕೃತ ಆಪ್‌ ಅಥವಾ ವೆಬ್‌ ಮೂಲಕ ರೀಚಾರ್ಜ್‌ ಮಾಡಿಸಬೇಕು.

ಮೂರು ಟೆಲಿಕಾಂಗಳಲ್ಲಿ ರೀಚಾರ್ಜ್‌ ಮಾಡಲು ಯಾವುದು ಉತ್ತಮ?

ಮೂರು ಟೆಲಿಕಾಂಗಳಲ್ಲಿ ರೀಚಾರ್ಜ್‌ ಮಾಡಲು ಯಾವುದು ಉತ್ತಮ?

149ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಜಿಯೋ, ವಿ ಟೆಲಿಕಾಂ ಹಾಗೂ ಏರ್‌ಟೆಲ್‌ ಟೆಲಿಕಾಂಗಳು ಆಕರ್ಷಕ ಪ್ರಯೋಜನ ನೀಡಿವೆ. ಈ ಮೂರು ಯೋಜನೆಗಳು ಡೇಟಾ ಪ್ರಯೋಜನ ಪಡೆದಿವೆ. ಆದರೆ ಜಿಯೋ ಟೆಲಿಕಾಂ ಪ್ರತಿದಿನ 1GB ಡೇಟಾ ಆಫರ್ ಹೊಂದಿವೆ. ವಿ ಟೆಲಿಕಾಂ ಮತ್ತು ಏರ್‌ಟೆಲ್‌ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 2GB ಡೇಟಾ ಜೊತೆಗೆ ಪ್ರಯೋಜನ ನೀಡುತ್ತವೆ. ಹೀಗಾಗಿ ಡೈಲಿ ಡೇಟಾ ಬಯಸುವ ಗ್ರಾಹಕರಿಗೆ ಜಿಯೋ ಉತ್ತಮ ಅನಿಸಲಿದೆ. ಇನ್ನು ವ್ಯಾಲಿಡಿಟಿ ನೋಡುವುದಾದರೇ ವಿ ಟೆಲಿಕಾಂ ಮತ್ತು ಏರ್‌ಟೆಲ್‌ ಟೆಲಿಕಾಂಗಳು 28 ದಿನಗಳ ವ್ಯಾಲಿಡಿಟಿ ಪಡೆದಿದ್ದು, ಜಿಯೋ ಬರೀ 24 ದಿನಗಳ ವ್ಯಾಲಿಡಿಟಿ ಪಡೆದಿದೆ.

Best Mobiles in India

English summary
Airtel VS Vi VS Jio Rs 149 Plan Compared: Which Is Best To Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+