ಏರ್ಟೆಲ್ VS ಜಿಯೋ VS ವಿ ಟೆಲಿಕಾಂ: 399ರೂ. ರೀಚಾರ್ಜ್‌ಗೆ ಯಾವುದು ಅತ್ಯುತ್ತಮ?
ದೇಶದ ಟೆಲಿಕಾಂ ವಲಯದಲ್ಲಿ ರಿಲಾಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಕಂಪನಿಗಳು ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಅತ್ಯುತ್ತಮ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಕೂಡಿವೆ. ಆದರೆ ಅಗ್ಗದ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗ್ರಾಹಕರನ್ನು ಆಕರ್ಷಿಸಿವೆ. ಸಾಮಾನ್ಯವಾಗಿ ಹೆಚ್ಚಿನ ಬಳಕೆದಾರರು 399ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮನಸ್ಸು ಮಾಡುತ್ತಾರೆ.

ಹೌದು, ಏರ್‌ಟೆಲ್, ಜಿಯೋ, ವಿ ಟೆಲಿಕಾಂಗಳು 399ರೂ. ಬೆಲೆಯ ಪ್ರೀಪೇಯ್ಡ್ ಯೋಜನೆಯನ್ನು ಒಳಗೊಂಡಿವೆ. ಈ ಮೂರು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ದೀರ್ಘಾವಧಿಯ ವ್ಯಾಲಿಡಿಟಿ, ಅನಿಯಮಿತ ವಾಯಿಸ್ ಕರೆ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಲಭ್ಯವಾಗುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಚಂದಾದಾರಿಕೆಯು ಆಯ್ಕೆಗಳು ಇವೆ. ಅದಾಗ್ಯೂ ಈ ಮೂರು ಟೆಲಿಕಾಂನ ಯೋಜನೆಗಳಲ್ಲಿ ಕೆಲವು ಭಿನ್ನತೆಗಳು ಇವೆ. ಮೂರು ಟೆಲಿಕಾಂಗಳಲ್ಲಿ ರೀಚಾರ್ಜ್‌ಗೆ ಯಾವುದು ಉತ್ತಮ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ 399ರೂ. ಪ್ಲ್ಯಾನಿನಲ್ಲಿ ಒಟ್ಟಾರೇ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಭಾರ್ತಿ ಏರ್‌ಟೆಲ್ 399ರೂ ಪ್ರಿಪೇಯ್ಡ್ ಯೋಜನೆ
ಏರ್‌ಟೆಲ್ ಟೆಲಿಕಾಂನ 399ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ದೈನಂದಿನ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ ಏರ್ಟೆಲ್ ಎಕ್ಸ್‌ಸ್ಟ್ರೀಮ್ ಮತ್ತು ವಿಂಕ್ ಮ್ಯೂಸಿಕ್‌ಗೆ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ. ಹಾಗೆಯೇ ಫಾಸ್ಟ್‌ಟ್ಯಾಗ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸೌಲಭ್ಯ ಸಹ ಲಭ್ಯವಾಗಲಿದೆ.

ವೊಡಾಫೋನ್ ಐಡಿಯಾ 399ರೂ ಪ್ರಿಪೇಯ್ಡ್ ಯೋಜನೆ
ವೊಡಾಫೋನ್ ಐಡಿಯಾ ಟೆಲಿಕಾಂನ 399ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ದೈನಂದಿನ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ ಜೀ5 ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ. ಹಾಗೆಯೇ ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಲಭ್ಯವಾಗಲಿದೆ.

ಜಿಯೋ 399ರೂ. ಪ್ರಿಪೇಯ್ಡ್ ಯೋಜನೆ
ಜಿಯೋ ಟೆಲಿಕಾಂನ 399ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ದೈನಂದಿನ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಮೂವಿಸ್, ಜಿಯೋ ನ್ಯೂಸ್ ಹಾಗೂ ಇತರೆ ಸೇವೆಗಳು ಸಿಗಲಿವೆ.

ಬಿಎಸ್‌ಎನ್‌ಎಲ್ 399ರೂ. ಪ್ರಿಪೇಯ್ಡ್ ಯೋಜನೆ
ಬಿಎಸ್‌ಎನ್‌ಎಲ್ ಈ ಪ್ರಿಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 1GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಯಾವುದೇ ನೆಟವರ್ಕ್‌ಗೆ ಪ್ರತಿದಿನ 250 ನಿಮಿಷಗಳ ವಾಯಿಸ್ ಕರೆಯ ಸೌಲಭ್ಯ ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 80 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ನಿಗದಿತ 1 ಜಿಬಿ ದೈನಂದಿನ ಡೇಟಾ ಬಳಕೆಯಾದ ಬಳಿಕ 80 ಕೆಬಿಪಿಎಸ್ ವೇಗದಲ್ಲಿ ಡೇಟಾ ಮುಂದುವರೆಯಲಿದೆ. ಜೊತೆಗೆ ಗ್ರಾಹಕರಿಗೆ ಉಚಿತ ಬಿಎಸ್‌ಎನ್‌ಎಲ್ ಟ್ಯೂನ್ಸ್ ಲಭ್ಯವಿದೆ.

ಏರ್‌ಟೆಲ್ 401ರೂ. ಪ್ರೀಪೇಯ್ಡ್ ಯೋಜನೆ ಸೌಲಭ್ಯಗಳು
ಏರ್‌ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಿರುವುದಿಲ್ಲ.


Click it and Unblock the Notifications








