Home
ಸುದ್ದಿಜಾಲ

67W ಫಾಸ್ಟ್‌ ಚಾರ್ಜಿಂಗ್‌ ಇರುವ ಈ ಫೋನಿನ ಬೆಲೆಯಲ್ಲಿ ಜಬರ್ದಸ್ತ್‌ ಇಳಿಕೆ!

ಜನಪ್ರಿಯ ಅಮೆಜಾನ್‌ ಇ ಕಾಮರ್ಸ್ ವೆಬ್‌ಸೈಟ್‌ ಆಯ್ದ ಮೊಬೈಲ್‌ಗಳಿಗೆ ಒಂದಿಲ್ಲೊಂದು ಡಿಸ್ಕೌಂಟ್‌ ಘೋಷಿಸುತ್ತಲೇ ಸಾಗಿದೆ. ಅವುಗಳ ಪೈಕಿ ಸದ್ಯ ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ (realme NARZO 70 Pro 5G) ಮೊಬೈಲ್‌ ಸಖತ್‌ ರಿಯಾಯಿತಿ ಪಡೆದಿದ್ದು, ಮೊಬೈಲ್‌ ಪ್ರಿಯರು ಖುಷಿ ಪಡುವಂತೆ ಮಾಡಿದೆ. ಹಾಗೆಯೇ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಹೌದು, ಅಮೆಜಾನ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 70 ಪ್ರೊ 5G (realme NARZO 70 Pro 5G) ಫೋನ್‌ ಶೇ. 35% ರಷ್ಟು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್ ಈಗ ಆಫರ್‌ನಲ್ಲಿ 12,998ರೂ. ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಹಾಗೆಯೇ ಬ್ಯಾಂಕ್‌ ಆಫರ್‌ ಮತ್ತು ನೋ ಕಾಸ್ಟ್‌ ಇಎಮ್‌ಐ ಕೂಡಾ ಗ್ರಾಹಕರಿಗೆ ಲಭ್ಯ ಆಗಲಿದೆ.

67W ಫಾಸ್ಟ್‌ ಚಾರ್ಜಿಂಗ್‌ ಇರುವ ಈ ಫೋನಿನ ಬೆಲೆಯಲ್ಲಿ ಜಬರ್ದಸ್ತ್‌ ಇಳಿಕೆ!

ಇನ್ನು ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯದ ಆಯ್ಕೆ ಪಡೆದಿದೆ. ಇದಲ್ಲದೇ ಈ ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗಾದರೆ ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ 70 ಪ್ರೊ 5G - ಫೀಚರ್ಸ್‌ ಮಾಹಿತಿ

ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇ 2,000 nits ಬ್ರೈಟ್ನೆಸ್‌ ಸೌಲಭ್ಯ ಪಡೆದಿದ್ದು, 120 Hz ರಿಫ್ರೆಶ್ ರೇಟ್‌ ಸಪೋರ್ಟ್‌ನೊಂದಿಗೆ ಕಾರ್ಯ ಮಾಡಲಿದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಸಪೋರ್ಟ್‌ ಜೊತೆಗೆ ಕಾರ್ಯ ಮಾಡಲಿದೆ. ಅಲ್ಲದೇ ಈ ಫೋನ್‌ 8GB + 128 GB ವೇರಿಯಂಟ್‌ ಹಾಗೂ 8 GB + 256 GB ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಈ ಫೋನಿನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೋನಿ IMX 890 ಸೆನ್ಸಾರ್‌ ಆಗಿದ್ದು, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಇದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 67W SUPERVOOC ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಇನ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಆಯ್ಕೆ ಕೂಡಾ ಇದೆ.

Best Mobiles in India

English summary
Amazing Price Cut on realme NARZO 70 5G in India. Price, Specifications and more Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+