ರೆಡ್ಮಿ ನೋಟ್ 13 5G ಖರೀದಿಸಲು ಇದುವೇ ಬೆಸ್ಟ್ ಟೈಮ್; ಭರ್ಜರಿ ಬೆಲೆ ಇಳಿಕೆ!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಂದಾಗಿರುವ ಶಿಯೋಮಿ ಇದೀಗ ತನ್ನ ವೆಬ್‌ಸೈಟ್‌ನಲ್ಲಿ ಶಿಯೋಮಿ ಸೂಪರ್ ಸೇವರ್ ಸೇಲ್ ( Xiaomi Super Saver Sale ) ಸೇಲ್ ಅನ್ನು ಆಯೋಜಿಸಿದ್ದು, ಗ್ರಾಹಕರ ಗಮನ ಸೆಳೆದಿದೆ. ಈ ಮಾರಾಟದಲ್ಲಿ ಸಂಸ್ಥೆಯ ಕೆಲವು ಜನಪ್ರಿಯ ಮೊಬೈಲ್‌ಗಳು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿವೆ. ಆ ಲಿಸ್ಟ್‌ನಲ್ಲಿ ರೆಡ್ಮಿ ನೋಟ್ 13 5G (Redmi Note 13 5G) ಮೊಬೈಲ್ ಕೂಡಾ ಸಖತ್ ಬೆಲೆ ಇಳಿಕೆ ಪಡೆದಿದ್ದು, ಖರೀದಿದಾರರು ವಾವ್ ಎನ್ನುವಂತಾಗಿದೆ.
ಹೌದು, ಶಿಯೋಮಿಯು ತನ್ನ ವೆಬ್‌ಸೈಟ್‌ನಲ್ಲಿ ಶಿಯೋಮಿ ಸೂಪರ್ ಸೇವರ್ ಸೇಲ್ ( Xiaomi Super Saver Sale ) ಮಾರಾಟ ಆಯೋಜಿಸಿದ್ದು, ಈ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳು ಭಾರೀ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ರೆಡ್ಮಿ ನೋಟ್ 13 5G (Redmi Note 13 5G) ಮೊಬೈಲ್ ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ.

ಇನ್ನು ಈ ಫೋನಿನ 6 GB + 128 GB ವೇರಿಯಂಟ್ ಈಗ 16,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಅನ್ನು ಸ್ಟಾರ್ ಸ್ಯಾಂಡ್ ವೈಟ್, ಮಿಡ್ನೈಟ್ ಡಾರ್ಕ್ ಮತ್ತು ಟೈಮ್ ಬ್ಲೂ ಕಲರ್ ಆಯ್ಕೆ ಪಡೆದಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್ ಮುಂದೆ ನೋಡೋಣ ಬನ್ನಿರಿ.
ರೆಡ್ಮಿ ನೋಟ್ 13 5G - ಫೀಚರ್ಸ್
ರೆಡ್ಮಿ ನೋಟ್ 13 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 × 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದ್ದು, ಇದು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಇದೆ.
ರೆಡ್ಮಿ ನೋಟ್ 13 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 ಓಎಸ್ ಬೆಂಬಲ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM + 128 GB ಹಾಗೂ 8GB RAM+ 256 GB ಆಂತರೀಕ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಸಪೋರ್ಟ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.
ರೆಡ್ಮಿ ನೋಟ್ 13 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 100 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ ನೋಟ್ 13 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳು 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.


Click it and Unblock the Notifications








