ಈ ಜನಪ್ರಿಯ ರೆಡ್ಮಿ ಮೊಬೈಲ್ ಬೆಲೆಯಲ್ಲಿ ದಿಢೀರ್ ಕುಸಿತ; ಗ್ರಾಹಕರಿಗೆ ಅಚ್ಚರಿ!
ದಿಗ್ಗಜ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್ ಮೊಬೈಲ್‌ಗಳಿಗೆ ಒಂದಿಲ್ಲೊಂದು ಆಫರ್ ಘೋಷಿಸುತ್ತಾ ಸಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಇದೀಗ ಕೆಲವು ಮೊಬೈಲ್‌ಗಳು ಆಕರ್ಷಕ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ರೆಡ್ಮಿ ನೋಟ್ 13 ಪ್ರೊ (Redmi Note 13 Pro) ಮೊಬೈಲ್ ಗ್ರಾಹಕರು ಹಿಂತಿರುಗಿ ನೋಡುವಂತಹ ಬೊಂಬಾಟ್ ರಿಯಾಯಿತಿ ಪಡೆದಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್ ಜನಪ್ರಿಯ ರೆಡ್ಮಿ ನೋಟ್ 13 ಪ್ರೊ (Redmi Note 13 Pro) ಫೋನ್ ಶೇ. 20% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 8GB RAM + 128GB ವೇರಿಯಂಟ್ 22,999ರೂ. ಗಳ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಗ್ರಾಹಕರು ಬ್ಯಾಂಕ್, ಎಕ್ಸ್‌ಚೇಂಜ್ ಮತ್ತು ಇತರೆ ಆಫರ್ ಸಹ ಖರೀದಿಸಬಹುದಾಗಿದೆ.

ಅಂದಹಾಗೆ ಇದು ಸ್ನ್ಯಾಪ್‌ಡ್ರಾಗನ್ 7s Gen 2 ಪ್ರೊಸೆಸರ್ ಪವರ್ ಪಡೆದಿದ್ದು, ಇದರ ಮೊದಲ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 5100 mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್ ಪಡೆದುಕೊಂಡಿದೆ. ಹಾಗಾದರೇ ರೆಡ್ಮಿ ನೋಟ್ 13 ಪ್ರೊ ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ರೆಡ್ಮಿ ನೋಟ್ 13 ಪ್ರೊ 5G - ಫೀಚರ್ಸ್ ಮಾಹಿತಿ
ರೆಡ್ಮಿ ನೋಟ್ 13 ಪ್ರೊ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, ಇದು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಹ ಹೊಂದಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಆಯ್ಕೆ ಒಳಗೊಂಡಿದೆ.
ರೆಡ್ಮಿ ನೋಟ್ 13 ಪ್ರೊ ಮೊಬೈಲ್ ಸ್ನ್ಯಾಪ್‌ಡ್ರಾಗನ್ 7s Gen 2 ಪ್ರೊಸೆಸರ್ ಸಾಮರ್ಥ್ಯ ಬಲವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಅದೇ ರೀತಿ 6GB RAM + 128 GB ಹಾಗೂ 8GB RAM+ 256 GB ಆಂತರೀಕ ಸ್ಟೋರೇಜ್ ವೇರಿಯಂಟ್ ಕೂಡಾ ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ ಹೆಚ್ಚುವರಿ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒದಗಿಸಲಾಗಿದೆ.
ರೆಡ್ಮಿ ನೋಟ್ 13 ಪ್ರೊ ಫೋನ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದ್ದು, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಅಲ್ಲದೇ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ರೆಡ್ಮಿ ನೋಟ್ 13 ಪ್ರೊ ಫೋನ್ 5100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಅನ್ನು ಇದು ಸಪೋರ್ಟ್ ಮಾಡುತ್ತದೆ.


Click it and Unblock the Notifications








