Home
ಸುದ್ದಿಜಾಲ

ರೆಡ್ಮಿಯ ಈ ಸ್ಟೈಲಿಶ್‌ ಮೊಬೈಲ್‌ ಬೆಲೆಯಲ್ಲಿ ಸಖತ್ ಡಿಸ್ಕೌಂಟ್‌!

ಜನಪ್ರಿಯ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಅನೇಕರು ಮೊಬೈಲ್‌ ಖರೀದಿಸಲು ಇಷ್ಟಪಡುತ್ತಾರೆ. ಇನ್ನು ಈ ಸಂಸ್ಥೆಯು ಮೊಬೈಲ್‌ಗಳಿಗೆ ಒಂದಿಲ್ಲೊಂದು ಆಫರ್‌ ಲಭ್ಯ ಮಾಡಿರುತ್ತದೆ. ಸದ್ಯ ಶಿಯೋಮಿ ಸಂಸ್ಥೆಯ ಇತ್ತೀಚಿನ ರೆಡ್ಮಿ ನೋಟ್‌ 12 ಫೋನ್‌ ಭಾರೀ ಆಕರ್ಷಕ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ರೆಡ್ಮಿ ನೋಟ್‌ 12 ಫೋನ್‌ ಮೊಬೈಲ್‌ ಇದೀಗ ಶೇಕಡಾ 39% ಪರ್ಸೆಂಟ್‌ನಷ್ಟು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಈ ಮೊಬೈಲ್‌ ಅನ್ನು 6 GB RAM + 64 GB ವೇರಿಯಂಟ್‌ ಫೋನ್‌ ಅನ್ನು 11,499 ರೂ. ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು. ಹೆಚ್ಚುವರಿಯಾಗಿ ಅಮೆಜಾನ್‌ನಲ್ಲಿ ಬ್ಯಾಂಕ್‌ ಡಿಸ್ಕೌಂಟ್‌ ಸಹ ಗ್ರಾಹಕರಿಗೆ ಲಭ್ಯ ಸಿಗಲಿವೆ.

ರೆಡ್ಮಿಯ ಈ ಸ್ಟೈಲಿಶ್‌ ಮೊಬೈಲ್‌ ಬೆಲೆಯಲ್ಲಿ ಸಖತ್ ಡಿಸ್ಕೌಂಟ್‌!

ಇನ್ನು ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 685 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪ್ರಾಥಮಿಕ ಕ್ಯಾಮೆರಾ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ರೆಡ್ಮಿ ನೋಟ್‌ 12 ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ರೆಡ್ಮಿ ನೋಟ್‌ 12 - ಫೀಚರ್ಸ್‌ ಹೀಗಿವೆ

ರೆಡ್ಮಿ ನೋಟ್‌ 12 ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲವನ್ನು ಸಹ ಪಡೆದಿದೆ. ಇನ್ನು ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಲೇಯರ್ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 12 ಮೊಬೈಲ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 685 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6 GB RAM + 64 GB ಮತ್ತು 6 GB RAM + 128 GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಿದೆ.

ರೆಡ್ಮಿ ನೋಟ್‌ 12 ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆಯ ಸೌಲಬಭ್ಯ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 12 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಸೌಲಬ್ಯದ ಆಯ್ಕೆ ಹೊಂದಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಕೂಡಾ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಬೆಂಬಲದೊಂದಿಗೆ ಬರಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್ ಅನ್ನು ಹೊಂದಿದೆ.

ಇನ್ನು ರೆಡ್ಮಿ ಸಂಸ್ಥೆಯ ಈ ಮೊಬೈಲ್‌ 6 GB RAM + 64 GB ಮತ್ತು 6 GB RAM + 128 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಗ್ರಾಹಕರು ಈ ಫೋನ್‌ ಅನ್ನು ಅಮೆಜಾನ್‌ ತಾಣದಲ್ಲಿ ಆಫರ್‌ ದರದಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
Amazing price down on Redmi Note 12 in India. check out all the details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+