Redmi ಸಂಸ್ಥೆಯ ಈ ಅಗ್ಗದ 5G ಮೊಬೈಲ್ ಈಗ ಇನ್ನಷ್ಟು ಸಸ್ತಾ ಬೆಲೆಗೆ ಲಭ್ಯ!
ಪ್ರಮುಖ ಇ ಕಾಮರ್ಸ್ ಅಮೆಜಾನ್ (Amazon) ಪ್ಲಾಟ್‌ಫಾರ್ಮ್ ನಲ್ಲಿ ಆಯ್ದ ಕೆಲವು ಮೊಬೈಲ್‌ಗಳು ಸಖತ್ ರಿಯಾಯಿತಿ ಪಡೆದಿವೆ. ಫ್ಲಿಪ್‌ಕಾರ್ಟ್‌ನ ಈ ಸ್ಪೆಷಲ್ ಸೇಲ್‌ನಲ್ಲಿ ಡಿಸ್ಕೌಂಟ್ ಪಡೆದ ಫೋನ್‌ಗಳ ಪೈಕಿ ಜನಪ್ರಿಯ ಮೊಬೈಲ್‌ಗಳ ಜೊತೆಗೆ ಕೆಲವು ಹೊಸ ಮೊಬೈಲ್‌ಗಳು ಕೂಡಾ ಸೇರಿವೆ. ಅವುಗಳ ಪೈಕಿ ಶಿಯೋಮಿ ಸಂಸ್ಥೆಯ ರೆಡ್ಮಿ 13C 5G (Redmi 13C 5G) ಮೊಬೈಲ್ ಪಡೆದಿರುವ ಡಿಸ್ಕೌಂಟ್ ನೋಡಿದ್ರೆ, ಗ್ರಾಹಕರುಗೆ ಅಚ್ಚರಿ ಎನಿಸುವಂತೆ ಇದೆ.
ಹೌದು, ಅಮೆಜಾನ್ ಇ ಕಾಮರ್ಸ್ (Amazon)ತಾಣದಲ್ಲಿ ಸದ್ಯ ರೆಡ್ಮಿ 13C 5G (Redmi 13C 5G) ಫೋನ್ ಶೇ. 36% ರಷ್ಟು ಆಫರ್ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಫೋನಿನ 4 GB RAM + 128 GB ವೇರಿಯಂಟ್ 8,999ರೂ. ಗಳ ಆಕರ್ಷಕ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಎಕ್ಸ್‌ಚೇಂಜ್ ಆಫರ್ ಸಹ ಪಡೆದುಕೊಂಡರೆ, ಈ ಫೋನ್ ಅನ್ನು ಇನ್ನಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಬಹುದು.

ಇನ್ನು ರೆಡ್ಮಿ 13C 5G ಫೋನ್ 4G RAM + 128GB ವೇರಿಯಂಟ್, 6GB + 128GB ಸ್ಟೋರೇಜ್ ವೇರಿಯಂಟ್ ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ 13C 5G ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 13C 5G ಫೋನಿನ ಫೀಚರ್ಸ್
ರೆಡ್ಮಿ 13 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು 90Hzರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ರೆಡ್ಮಿ 13 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ನೊಂದಿಗೆ ರನ್ ಆಗಲಿದೆ. ಹಾಗೆಯೇ 6GB RAM + 128 GB ಹಾಗೂ 8GB RAM+ 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ರೆಡ್ಮಿ 13 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ 13 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ.


Click it and Unblock the Notifications








