Home
ಸುದ್ದಿಜಾಲ

ವಿವೋದ ಈ ವೇಗದ ಪ್ರೊಸೆಸರ್‌ ಸೌಲಭ್ಯದ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಜನಪ್ರಿಯ ಆನ್‌ಲೈನ್‌ ಶಾಪಿಂಗ್‌ ಪ್ಲಾಟ್‌ಫಾರ್ಮ್‌ ಫ್ಲಿಪ್‌ಕಾರ್ಟ್‌ನಲ್ಲಿ ಒಂದಿಲ್ಲೊಂದು ಮಾರಾಟ ಮೇಳಗಳು ಚಾಲ್ತಿ ಇರುತ್ತವೆ. ಯಾವುದೇ ಸೇಲ್‌ ಇಲ್ಲದಿದ್ದರೂ ಕೆಲವು ಆಯ್ದ ಮೊಬೈಲ್‌ಗಳಿಗೆ ರಿಯಾಯಿತಿ ಲಭ್ಯ ಇರುತ್ತದೆ. ಫ್ಲಿಪ್‌ಕಾರ್ಟ್‌ನಲ್ಲಿ ಅಗ್ಗದ ದರದ ಫೋನ್‌ಗಳಿಂದ ದುಬಾರಿ ಬೆಲೆಯ ಕೆಲವು ಮೊಬೈಲ್‌ಗಳಿಗೂ ಸ್ಪೆಷಲ್‌ ಕೊಡುಗೆ ಲಭ್ಯ ಇರುತ್ತದೆ. ಸದ್ಯ ವಿವೋ T2 ಪ್ರೊ 5G (vivo T2 Pro 5G) ಫೋನ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಖರೀದಿದಾರರು OMG ಎನ್ನುವಂತಾಗಿದೆ. ಅಂದಹಾಗೆ ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 7200 ಪ್ರೊಸೆಸರ್‌ ಪಡೆದುಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ವಿವೋ ಸಂಸ್ಥೆಯ ವಿವೋ T2 ಪ್ರೊ 5G ಫೋನ್‌ ಶೇ. 14% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 22,999ರೂ. ಗಳ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಲು ಅವಕಾಶ ಸಿಗಲಿದೆ.

ವಿವೋದ ಈ ವೇಗದ ಪ್ರೊಸೆಸರ್‌ ಸೌಲಭ್ಯದ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

3D ಕರ್ವ್ಡ್‌ ಡಿಸ್‌ಪ್ಲೇ ಸೌಲಭ್ಯದ ಈ ಮೊಬೈಲ್‌ 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಹಾಗೆಯೇ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇನ್ನು ಈ ಫೋನ್‌ ಗೋಲ್ಡ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ವಿವೋ T2 ಪ್ರೊ 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T2 ಪ್ರೊ 5G - ಫೀಚರ್ಸ್‌

ವಿವೋ T2 ಪ್ರೊ 5G ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಮಾದರಿಯ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, 2400 × 1080 ಪಿಕ್ಸಲ್‌ ರೆಸಲ್ಯೂಶನ್‌ ಆಯ್ಕೆ ಹೊಂದಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಮತ್ತು 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಅನ್ನು ಇದು ಪಡೆದುಕೊಂಡಿದ್ದು, ಪ್ರತಿ ಇಂಚಿನ ಪಿಕ್ಸಲ್‌ ಸಾಂದ್ರತೆಯು 388 ppi ಆಗಿದೆ.

ವಿವೋ T2 ಪ್ರೊ 5G ಮೊಬೈಲ್‌ ಪ್ರೊಸೆಸರ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 7200 ಚಿಪ್‌ಸೆಟ್ ಪ್ರೊಸೆಸರ್‌ ಮೂಲಕ ಕಾರ್ಯ ನಿರ್ವಹಿಸಲಿದೆ. ಇದರ ಜೊತೆಗೆ ಆಂಡ್ರಾಯ್ಡ್ 13 ಅನ್ನು ಆಧರಿಸಿ ಫನ್‌ಟಚ್‌ ಓಎಸ್ 13 ಸಪೋರ್ಟ್‌ ಕೂಡಾ ಹೊಂದಿದೆ. ಇದರ ಜೊತೆಗೆ ಈ ಫೋನ್ 8GB + 128GB ಮತ್ತು 8GB + 256 GB ಸ್ಟೋರೇಜ್‌ನ ಎರಡು ಮಾಡೆಲ್‌ಗಳಲ್ಲಿ ಲಭ್ಯ ಇದೆ.

ವಿವೋ T2 ಪ್ರೊ 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಎರಡನೇ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಮೊಬೈಲ್‌ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ವಿವೋ T2 ಪ್ರೊ 5G ಮೊಬೈಲ್‌ 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 66W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ ಆಯ್ಕೆ ಸಹ ಒಳಗೊಂಡಿದ್ದು, ಬಳಕೆದಾರರಿಗೆ ವಿಶೇಷ ಭದ್ರತಾ ಫೀಚರ್ಸ್‌ ಅನ್ನು ಒದಗಿಸಲಿದೆ.

ವಿವೋ T2 ಪ್ರೊ 5G ಮೊಬೈಲ್‌ 8GB RAM ಮತ್ತು 128GB ಸ್ಟೋರೇಜ್‌ ಮತ್ತು 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಪಡೆದಿದೆ. ಇದು ಗೋಲ್ಡ್‌ ಹಾಗೂ ಬ್ಲ್ಯಾಕ್‌ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Amazing Price drop on Vivo T2 Pro 5G mobile in India. check offer price and other Details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+