Home
ಸುದ್ದಿಜಾಲ

ವಿವೋ Y200 5G ಫೋನ್‌ ಖರೀದಿಸಲು ಇದು ಬೆಸ್ಟ್‌ ಟೈಮ್‌!..ಆಫರ್‌ ಏನಿದೆ ಗೊತ್ತಾ?

ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿರುವ ವಿವೋ ಸಂಸ್ಥೆಯು ತನ್ನ Y ಸರಣಿಗೆ ಇತ್ತೀಚಿಗೆ ಕೆಲವು ಹೊಸ ಫೋನ್‌ ಸೇರ್ಪಡೆ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ ವಿವೋ Y200 5G ಮೊಬೈಲ್‌ ಇದೀಗ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಬೊಂಬಾಟ್‌ ಡಿಸ್ಕೌಂಟ್‌ ಹೊಂದಿದ್ದು, ಮೊಬೈಲ್‌ ಪ್ರಿಯರು ವಾವ್‌ ಎನ್ನುವಂತೆ ಮಾಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ವಿವೋ Y200 5G ಫೋನ್‌ ಶೇ. 21% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಈ ಫೋನಿನ 8 GB RAM + 128 GB ವೇರಿಯಂಟ್‌ ಮೊಬೈಲ್‌ ಅನ್ನು 21,999ರೂ. ಗಳ ಆಫರ್‌ ದರದಲ್ಲಿ ಖರೀದಿ ಮಾಡಬಹುದು. ಅಲ್ಲದೇ ಇದರೊಂದಿಗೆ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ರಿಯಾಯಿತಿ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯ.

ವಿವೋ Y200 5G ಫೋನ್‌ ಖರೀದಿಸಲು ಇದು ಬೆಸ್ಟ್‌ ಟೈಮ್‌!..ಆಫರ್‌ ಏನಿದೆ ಗೊತ್ತಾ?

ಇನ್ನು ವಿವೋ Y200 5G ಫೋನ್‌ ಸ್ನಾಪ್‌ಡ್ರಾಗನ್ 4 ಜೆನ್‌ 1 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಈ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇನ್ನುಳಿದಂತೆ ವಿವೋ Y200 5G ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ Y200 5G ಫೀಚರ್ಸ್‌ ಹೀಗಿವೆ

ವಿವೋ Y200 5G ಮೊಬೈಲ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್‌ ಹಾಗೂ 800 nits ಬ್ರೈಟ್ನೆಸ್‌ ಅನ್ನು ಸಪೋರ್ಟ್ ಪಡೆದಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 394 PPI ಪಿಕ್ಸಲ್‌ ಸಾಂದ್ರತೆ ಅನ್ನು ಪಡೆದುಕೊಂಡಿದೆ.

ವಿವೋ Y200 5G ಫೋನ್‌ ಖರೀದಿಸಲು ಇದು ಬೆಸ್ಟ್‌ ಟೈಮ್‌!..ಆಫರ್‌ ಏನಿದೆ ಗೊತ್ತಾ?

ಈ ಮೊಬೈಲ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 ಜೆನ್‌ 1 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿರುವ ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಆಧಾರಿತ ಫನ್‌ಟಚ್‌ OS 13 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 8GB RAM + 128GB ಆಂತರೀಕ ಸ್ಟೋರೇಜ್‌ ಅನ್ನು ಹೊಂದಿದ್ದು, ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ.

ವಿವೋದ ಈ ಹೊಸ ಮೊಬೈಲ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ವಿವೋ Y200 5G ಫೋನ್‌ ಖರೀದಿಸಲು ಇದು ಬೆಸ್ಟ್‌ ಟೈಮ್‌!..ಆಫರ್‌ ಏನಿದೆ ಗೊತ್ತಾ?

ವಿವೋ ಕಂಪನಿಯ ಈ ಫೋನ್ 44W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ನೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್ ಸಿ, ಜಿಪಿಎಸ್ ಮತ್ತು ಒಟಿಜಿ ಆಯ್ಕೆಗಳನ್ನು ಕಾಣಬಹುದಾಗಿದೆ.

ವಿವೋ Y200 5G ಮೊಬೈಲ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಪಡೆದಿದೆ. ಇನ್ನು ಗ್ರಾಹಕರು ಈ ಮೊಬೈಲ್‌ ಗೋಲ್ಡ್‌ ಹಾಗೂ ಗ್ರೀನ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
Amazing Price Drop on Vivo Y200 5G on flipkart. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+