Home
ಸುದ್ದಿಜಾಲ

ಅಮೆಜಾನ್‌ನಲ್ಲಿ ಈ ಒನ್‌ಪ್ಲಸ್‌ ಫೋನಿಗೆ ಸಖತ್ ಡಿಸ್ಕೌಂಟ್‌; ಗ್ರಾಹಕರು ಖುಷಿ!

ಅಮೆಜಾನ್‌ (Amazon) ಆನ್‌ಲೈನ್‌ ಶಾಪಿಂಗ್‌ ಪ್ರಿಯರ ಫೆವರೇಟ್‌ ತಾಣ ಎನಿಸಿಕೊಂಡಿದೆ. ತನ್ನ ಗ್ರಾಹಕರಿಗಾಗಿ ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿಯೂ ಬೊಂಬಾಟ್‌ ಸೇಲ್‌ಗಳನ್ನು ನಡೆಸುತ್ತಾ ಸಾಗಿದೆ. ಸದ್ಯ ಇದೀಗ ಅಮೆಜಾನ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ ಅನ್ನು ಘೋಷಿಸಿದ್ದು, ಗ್ರಾಹಕರ ಗಮನ ಸೆಳೆದಿದೆ. ಈ ಮಾರಾಟ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲೇ ಅಮೆಜಾನ್ ಕಿಕ್‌ಸ್ಟಾರ್ಟರ್ ಡೀಲ್ಸ್‌ (kickstarter deals) ಶುರು ಮಾಡಿದೆ.

ಹೌದು, ಅಮೆಜಾನ್ ಕಿಕ್‌ಸ್ಟಾರ್ಟರ್ ಡೀಲ್ಸ್‌ (kickstarter deals) ನಲ್ಲಿ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳು ಸಖತ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿವೆ. ಅವುಗಳ ಪೈಕಿ ಶಿಯೋಮಿ, ಒನ್‌ಪ್ಲಸ್‌, ಸ್ಯಾಮ್‌ಸಂಗ್‌, ಐಕ್ಯೂ, ಒಪ್ಪೋ, ರಿಯಲ್‌ಮಿ ಮತ್ತು ಹಲವು ಜನಪ್ರಿಯ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್‌ ದೊರೆಯುತ್ತಿದೆ. ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 11R ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯ ಇದೆ. ಹಾಗಾದ್ರೆ ಅಮೆಜಾನ್‌ ಕಿಕ್‌ ಸ್ಟಾರ್ಟ್‌ರ್‌ನಲ್ಲಿ ಏನೆಲ್ಲಾ ಆಫರ್‌ಗಳು ದೊರೆಯುತ್ತಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಅಮೆಜಾನ್‌ನಲ್ಲಿ ಈ ಒನ್‌ಪ್ಲಸ್‌ ಫೋನಿಗೆ ಸಖತ್ ಡಿಸ್ಕೌಂಟ್‌; ಗ್ರಾಹಕರು ಖುಷಿ!

ಒನ್‌ಪ್ಲಸ್‌ 11R 5G ಡಿಸ್‌ಪ್ಲೇ ಮಾಹಿತಿ
ಒನ್‌ಪ್ಲಸ್‌ 11R 5G ಮೊಬೈಲ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2772 x 1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸಪೋರ್ಟ್ ಇದೆ.

ಒನ್‌ಪ್ಲಸ್‌ 11R 5G ಪ್ರೊಸೆಸರ್‌ ಪವರ್
ಒನ್‌ಪ್ಲಸ್‌ 11R 5G ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ ಜೆನ್‌ 1 5G SoC ಪ್ರೊಸೆಸರ್‌ ಕಾರ್ಯವೈಖರಿ ಅನ್ನು ಪಡೆದುಕೊಂಡಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಬೆಂಬಲದಲ್ಲಿ ಕಾರ್ಯ ಮಾಡಲಿದೆ. ಇದಲ್ಲದೇ ಈ ಫೋನ್‌ 8 GB RAM + 256 GB ಹಾಗೂ 16 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳನ್ನು ಸಹ ಪಡೆದುಕೊಂಡಿದೆ.

ಒನ್‌ಪ್ಲಸ್‌ 11R 5G ಕ್ಯಾಮೆರಾ ಸೆಟ್‌ಅಪ್‌
ಒನ್‌ಪ್ಲಸ್‌ 11R 5G ಮೊಬೈಲ್‌ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX 890 ಸೆನ್ಸಾರ್‌ ಆಗಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 4cm ಮ್ಯಾಕ್ರೋ ಲೆನ್ಸ್‌ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್‌ 11R 5G ಬ್ಯಾಟರಿ ಹಾಗೂ ಇತರೆ
ಒನ್‌ಪ್ಲಸ್‌ 11R 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 5G, 4G, Wi-Fi, ಬ್ಲೂಟೂತ್ 5.3 ಕೂಡಾ ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ ಉತ್ತಮ ಡಿಸ್ಚಾರ್ಜ್ ಮತ್ತು ಸುರಕ್ಷಿತ ರೀಬೂಟ್ ಸೌಲಭ್ಯಗಳ ಆಯ್ಕೆ ಕೂಡಾ ಹೊಂದಿದೆ.

Best Mobiles in India

English summary
Amazon Early kickstarter deals: big deal on OnePlus 11R 5G. check details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+