Home
ಸುದ್ದಿಜಾಲ

ಹಬ್ಬದ ಪ್ರಯುಕ್ತ OnePlus ಸಂಸ್ಥೆಯ ಈ ಜನಪ್ರಿಯ ಮೊಬೈಲ್‌ ಬೆಲೆಯಲ್ಲಿ ಇಳಿಕೆ!

ಗಣೇಶ ಹಬ್ಬದ ಸಂದರ್ಭದಲ್ಲಿ ನೀವೇನಾದರೂ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಪ್ಲ್ಯಾನ್‌ ಮಾಡಿದ್ದೀರಾ? ಹೌದು ಎಂದಾದರೆ, ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಿಮಗೆ ಉತ್ತಮ ಪ್ಲಾಟ್‌ಫಾರ್ಮ್ ಎನ್ನಬಹುದಾಗಿದೆ. ಏಕೆಂದರೆ ಸದ್ಯ ಅಮೆಜಾನ್‌ ತಾಣದಲ್ಲಿ ಎಲೆಕ್ಟ್ರಾನಿಕ್ಸ್ ಫೆಸ್ಟಿವಲ್ ಸೇಲ್ 2024 (Amazon Electronics Festival Sale 2024) ಮಾರಾಟ ಪ್ರಾರಂಭ ಆಗಿದ್ದು, ಆಯ್ದ ಜನಪ್ರಿಯ ಸ್ಮಾರ್ಟ್‌ಫೊನ್‌ಗಳು ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಎಲೆಕ್ಟ್ರಾನಿಕ್ಸ್ ಫೆಸ್ಟಿವಲ್ ಸೇಲ್ 2024 (Amazon Electronics Festival Sale 2024) ಸೇಲ್‌ ಶುರುವಾಗಿದೆ. ಈ ಮಾರಾಟದಲ್ಲಿ ಒನ್‌ಪ್ಲಸ್‌ 11R 5G (OnePlus 11R 5G) ಸ್ಮಾರ್ಟ್‌ಫೋನ್‌ ಶೇ. 28% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 28,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಅಂದಹಾಗೆ ಈ ಮಾರಾಟವು ಇದೇ ಸೆಪ್ಟೆಂಬರ್ 10 ರ ವರೆಗೆ ಇರಲಿದೆ.

ಹಬ್ಬದ ಪ್ರಯುಕ್ತ OnePlus ಸಂಸ್ಥೆಯ ಈ ಜನಪ್ರಿಯ ಮೊಬೈಲ್‌ ಬೆಲೆಯಲ್ಲಿ ಇಳಿಕೆ!

ಅಂದಹಾಗೆ ಒನ್‌ಪ್ಲಸ್‌ 11R 5G ಫೋನ್‌ ಸ್ನಾಪ್‌ಡ್ರಾಗನ್ 8+ ಜೆನ್‌ 1 5G SoC ಪ್ರೊಸೆಸರ್‌ ಬಲ ಪಡೆದುಕೊಂಡಿದ್ದು, ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಒನ್‌ಪ್ಲಸ್‌ 11R 5G ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒನ್‌ಪ್ಲಸ್‌ 11R 5G - ಫೀಚರ್ಸ್‌

ಒನ್‌ಪ್ಲಸ್‌ 11R 5G ಮೊಬೈಲ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2772 x 1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸಪೋರ್ಟ್ ಇದೆ.

ಒನ್‌ಪ್ಲಸ್‌ 11R 5G ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ ಜೆನ್‌ 1 5G SoC ಪ್ರೊಸೆಸರ್‌ ಕಾರ್ಯವೈಖರಿ ಅನ್ನು ಪಡೆದುಕೊಂಡಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಬೆಂಬಲದಲ್ಲಿ ಕಾರ್ಯ ಮಾಡಲಿದೆ. ಇದಲ್ಲದೇ ಈ ಫೋನ್‌ 8GB RAM + 256 GB ಹಾಗೂ 16GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳನ್ನು ಸಹ ಪಡೆದುಕೊಂಡಿದೆ.

ಒನ್‌ಪ್ಲಸ್‌ 11R 5G ಮೊಬೈಲ್‌ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ಆಗಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 4cm ಮ್ಯಾಕ್ರೋ ಲೆನ್ಸ್‌ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್‌ 11R 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 5G, 4G, Wi-Fi, ಬ್ಲೂಟೂತ್ 5.3 ಕೂಡಾ ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ ಉತ್ತಮ ಡಿಸ್ಚಾರ್ಜ್ ಮತ್ತು ಸುರಕ್ಷಿತ ರೀಬೂಟ್ ಸೌಲಭ್ಯಗಳ ಆಯ್ಕೆ ಕೂಡಾ ಹೊಂದಿದೆ.

Best Mobiles in India

English summary
Amazon Electronics Festival Sale: OnePlus 11R 5G Huge Price Cut. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+