ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೆಸ್ಟ್‌ ಸೇಲ್‌ನಲ್ಲಿ ಈ ಫೋನ್‌ಗಳಿಗೆ ಬಿಗ್‌ ಆಫರ್!

|

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ಪಾಲಿಗೆ ಅಮೆಜಾನ್‌ ನೆಚ್ಚಿನ ತಾಣವಾಗಿದೆ. ಅಮೆಜಾನ್‌ ಕೂಡ ಆನ್‌ಲೈನ್‌ ಶಾಪಿಂಗ್‌ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ವಿಶೇಷ ದಿನಗಳಲ್ಲಿ ಡಿಸ್ಕೌಂಟ್‌ ಮೇಳಗಳನ್ನು ಕೂಡ ನಡೆಸುತ್ತದೆ. ಸದ್ಯ ಇದೀಗ ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೇಸ್ಟ್‌ ಲೈವ್‌ ಆಗಿದೆ. ಈ ಸೇಲ್‌ ಸಮಯದಲ್ಲಿ ಗ್ರಾಹಕರು ಹೆಚ್ಚು ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳ ಮೇಲೆ ಶೇಕಡಾ 40 ರಷ್ಟು ರಿಯಾಯಿತಿ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗಲಿದೆ.

ಅಮೆಜಾನ್‌

ಹೌದು, ಅಮೆಜಾನ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಫ್ಯಾಬ್‌ ಫೋನ್ಸ್‌ ಫೇಸ್ಟ್‌ ಸೇಲ್‌ ನಡೆಸುತ್ತಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಬಿಗ್‌ ಡಿಸ್ಕೌಂಟ್‌ ಅನ್ನು ನೀಡಲಾಗ್ತಿದೆ. ಅದರಲ್ಲೂ ಟೆಕ್ನೋ, ಶೀಯೋಮಿ, ಸ್ಯಾಮ್‌ಸಂಗ್‌, ಆಪಲ್‌, ರಿಯಲ್‌ಮಿ ಸೇರಿದಂತೆ ಹಲವು ಜನಪ್ರಿಯ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳಿಗೆ ಡಿಸ್ಕೌಂಟ್‌ ದೊರೆಯುತ್ತಿದೆ. ಈ ಸೇಲ್‌ ಈಗಾಗಲೇ ಲೈವ್‌ ಆಗಿದ್ದು, ಇದೇ ಜೂನ್ 30 ರವರೆಗೆ ನಡೆಯಲಿದೆ. ಈ ಸಮಯದಲ್ಲಿ ಆಯ್ದ ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳೊಂದಿಗೆ ನೋ ಕಾಸ್ಟ್‌ ಇಎಂಐ ಆಫರ್‌ ಕೂಡ ಲಭ್ಯವಿದೆ.

ಅಮೆಜಾನ್‌

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್‌ನಲ್ಲಿ ಗ್ರಾಹಕರು ಹಲವು ರಿಯಾಯಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಅಮೆಜಾನ್‌ ತನ್ನ ಗ್ರಾಹಕರಿಗೆ SBI ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿಸಿದರೆ 10% ಡಿಸ್ಕೌಂಟ್‌ ನೀಡುವುದಾಗಿ ಹೇಳಿದೆ. ಅಲ್ಲದೆ ಅಮೆಜಾನ್‌ ಪ್ರೈಮ್‌ ಸದಸ್ಯರು 20,000ರೂ.ವರೆಗಿನ ಸೇವಿಂಗ್ಸ್‌ ಅನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಅಡ್ವಾಂಟೇಜ್ ಜಸ್ಟ್ ಫಾರ್ ಪ್ರೈಮ್, ಇದರಲ್ಲಿ 6-ತಿಂಗಳ ಉಚಿತ ಸ್ಕ್ರೀನ್ ರಿಪ್ಲೇಸ್‌ಮೆಂಟ್ ಮತ್ತು ಹೆಚ್ಚುವರಿ 3 ತಿಂಗಳ ನೋ ಕಾಸ್ಟ್ ಇಎಂಐ ಕೂಡ ಲಭ್ಯವಾಗಲಿದೆ. ಹಾಗಾದ್ರೆ ಈ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಫೋನ್ 13

ಐಫೋನ್ 13

ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೇಸ್ಟ್‌ ಸೇಲ್‌ನಲ್ಲಿ ಐಫೋನ್ 13 12% ರಿಯಾಯಿತಿಯನ್ನು ಪಡೆದುಕೊಂಡಿದೆ. ಇದರಿಂದ ಐಫೋನ್ 13 ಅನ್ನು ನೀವು ಕೇವಲ 69,900ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಹೊಂದಿದ್ದು, 1200 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ.

ಟೆಕ್ನೋ ಸ್ಪಾರ್ಕ್‌ 8 ಪ್ರೊ

ಟೆಕ್ನೋ ಸ್ಪಾರ್ಕ್‌ 8 ಪ್ರೊ

ಟೆಕ್ನೋ ಸ್ಪಾರ್ಕ್‌ 8 ಪ್ರೊ ಅಮೆಜಾನ್‌ ಸೇಲ್‌ನಲ್ಲಿ 28% ರಿಯಾಯಿತಿ ಪಡೆದಿದೆ. ಇದರಿಂದ ಈ ಫೋನ್‌ ನಿಮಗೆ 9,699ರೂ.ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಟೆಕ್ನೋ ಪಾಪ್‌ 5 LTE

ಟೆಕ್ನೋ ಪಾಪ್‌ 5 LTE

ಟೆಕ್ನೋ ಪಾಪ್‌ 5 LTE ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಸೇಲ್‌ನಲ್ಲಿ 27% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ಅನ್ನು 6,599ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.52 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಡಾಟ್‌ ನಾಚ್‌ ವಿನ್ಯಾಸವನ್ನು ಹೊಂದಿದೆ. ಇದು ಕಿಡ್ಸ್ ಮೋಡ್, ಸಾಮಾಜಿಕ, ಟರ್ಬೊ, ಡಾರ್ಕ್ ಥೀಮ್‌ಗಳು, ಪೇರೆಂಟ್‌ ಕಂಟ್ರೋಲ್‌, ಡಿಜಿಟಲ್ ಯೋಗಕ್ಷೇಮ, ಗೆಸ್ಚರ್ ಕಾಲ್ ಪಿಕ್ಕರ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ.

ರೆಡ್ಮಿ 9A ಸ್ಪೋರ್ಟ್

ರೆಡ್ಮಿ 9A ಸ್ಪೋರ್ಟ್

ರೆಡ್ಮಿ 9A ಸ್ಪೋರ್ಟ್ ಸ್ಮಾರ್ಟ್‌ಫೋನ್‌ ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೆಸ್ಟ್‌ ಸೇಲ್‌ನಲ್ಲಿ ಕೇವಲ 6,899ರೂ.ಗಳಿಗೆ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಫೋನ್‌ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಫೋನ್ 5,000mAh ಬ್ಯಾಟರಿಯನ್ನ ಬ್ಯಾಕ್‌ಅಪ್‌ ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೇಸ್ಟ್‌ ಸೇಲ್‌ನಲ್ಲಿ ಕೇವಲ 14,999ರೂ.ಗಳಿಗೆ ಲಭ್ಯವಾಗಲಿದೆ. ಈ ಫೋನ್‌ 6.6 ಇಂಚಿನ ಫುಲ್‌ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮಿ 11 ಲೈಟ್‌ NE 5G

ಮಿ 11 ಲೈಟ್‌ NE 5G

ಮಿ 11 ಲೈಟ್‌ NE 5G ಸ್ಮಾರ್ಟ್‌ಫೋನ್‌ ರಿಯಾಯಿತಿ ದರದಲ್ಲಿ ಕೇವಲ 24,999ರೂ.ಗಳಿಗೆ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

Read more about:
English summary
Amazon Fab Phones Fest sale is now live. As per the e-commerce website, customers can get up to 40 percent off on top selling smartphones during the sale.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X