ರಿಯಲ್‌ಮಿ ನಾರ್ಜೋ 50A ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭಾರೀ ಇಳಿಕೆ!
ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಹಲವು ಬೊಂಬಾಟ್ ರಿಯಾಯಿತಿ ಕೊಡುಗೆಗಳ ಮೂಲಕ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಇ ಕಾಮರ್ಸ್ ದೈತ್ಯ ಅಮೆಜಾನ್ ಆನ್‌ಲೈನ್ ಶಾಪಿಂಗ್ ಪ್ರಿಯರ ಮನ ಗೆಲ್ಲಲು ಇದೀಗ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ (Amazon Fab Phones Fest) ಘೋಷಿಸಿದೆ. ಈ ಮಾರಾಟ ಮೇಳದಲ್ಲಿ ಅಮೆಜಾನ್ ರಿಯಲ್‌ಮಿ ಸಂಸ್ಥೆಯ ಸ್ಮಾರ್ಟ್‌ಫೋನ್ ಒಂದಕ್ಕೆ ಭರ್ಜರಿ ಆಫರ್ ಲಭ್ಯ ಮಾಡಿದೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಘೋಷಿಸಿರುವ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ (Amazon Fab Phones Fest) ಇದೇ ನವೆಂಬರ್ 26 ರಿಂದ ಪ್ರಾರಂಭವಾಗಲಿದೆ. ಈ ಮಾರಾಟ ಮೇಳದಲ್ಲಿ ಕೆಲವು ಪ್ರಮುಖ ಫೋನ್‌ಗಳು ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯವಾಗಲಿದ್ದು, ಆ ಪೈಕಿ ರಿಯಲ್‌ಮಿ ನಾರ್ಜೋ 50A (Realme Narzo 50A) ಸ್ಮಾರ್ಟ್‌ಫೋನ್ 9449ರೂ. ಗಳಿಗೆ ಲಭ್ಯವಾಗಲಿದ್ದು, ಹಾಗೆಯೇ ರಿಯಲ್‌ಮಿ ನಾರ್ಜೊ 50i ಫೋನ್ 6,749ರೂ. ಗಳಿಗೆ ಖರೀದಿಸಬಹುದಾಗಿದೆ.

ಇನ್ನು ಸದ್ಯ ಚಾಲ್ತಿಯಲ್ಲಿ ಇರುವ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ (Amazon Fab Phones Fest) ಸೇಲ್ ಇದೇ ನವೆಂಬರ್ 29ರ ವರೆಗೂ ಚಾಲ್ತಿ ಇರಲಿದೆ.ರಿಯಲ್‌ಮಿ ನಾರ್ಜೋ 50A ಫೋನ್ ಆಕ್ಸಿಜನ್ ಬ್ಲೂ ಮತ್ತು ಆಕ್ಸಿಜನ್ ಗ್ರೀನ್ ಕಲರ್ ಆಯ್ಕೆ ಪಡೆದಿದ್ದು, ರಿಯಲ್‌ಮಿ ನಾರ್ಜೋ 50i ಫೋನ್ ಮಿಂಟ್ ಗ್ರೀನ್ ಕಾರ್ಬನ್ ಕಪ್ಪು ಬಣ್ಣದ ಆಯ್ಕೆ ಹೊಂದಿದೆ.ಹಾಗಾದರೆ ರಿಯಲ್‌ಮಿ ನಾರ್ಜೋ 50A ಮತ್ತು ರಿಯಲ್‌ಮಿ ನಾರ್ಜೊ 50i ಫೋನ್‌ಗಳ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ 50A ಫೀಚರ್ಸ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11. ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 50i ಫೀಚರ್ಸ್
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಫೋನ್ 8 ಮೆಗಾಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








