ಅಮೆಜಾನ್ ಫ್ಯಾಬ್ ಫೋನ್ ಸೇಲ್: ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್!
ಆನ್‌ಲೈನ ಶಾಪಿಂಗ್ ಪ್ರಿಯರು ನಿರೀಕ್ಷೆಯಿಂದ ಎದುರು ನೋಡುತ್ತಿದ್ದ ಅಮೆಜಾನ್ ಫ್ಯಾಬ್ ಫೋನ್ ಫೆಸ್ಟ್ ಸೇಲ್ ಇದೀಗ ಅಮೆಜಾನ್‌ನಲ್ಲಿ ಶುರುವಾಗಿದೆ. ಈ ಸೇಲ್ ಮೇಳದಲ್ಲಿ ಹೈ ಎಂಡ್ ಮಾಡೆಲ್ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳಿಗೂ ವಿಶೇಷ ರಿಯಾಯಿತಿ ಘೋಷಿಸಲಾಗಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಸಹ ನೀಡಲಾಗಿದೆ.

ಹೌದು, ಇ-ಕಾಮರ್ಸ್ ದೈತ್ಯ ಅಮೆಜಾನ್ ತಾಣವು ನಾಲ್ಕು ದಿನಗಳ ಅಮೆಜಾನ್ ಫ್ಯಾಬ್ ಫೋನ್ ಫೆಸ್ಟ್ ಸೇಲ್ ಮೇಳ ಆಯೋಜಿಸಿದೆ. ಇಂದಿನಿಂದ ಶುರುವಾಗಿರುವ ಈ ಸೇಲ್ ಮೇಳವು ಇದೇ ಡಿ.25ರ ವರೆಗೂ ಚಾಲ್ತಿ ಇರಲಿದೆ. ಇನ್ನು ಈ ಫೆಸ್ಟ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಡಿಸ್ಕೌಂಟ್ ಸಿಗಲಿದೆ. ಹಾಗೆಯೇ ಎಕ್ಸ್‌ಚೇಂಜ್ ಡಿಸ್ಕೌಂಟ್, ನೋ-ಕಾಸ್ಟ್ EMI ಸೇರಿದಂತೆ ಇತರೆ ಸೌಲಭ್ಯಗಳು ಲಭ್ಯವಾಗಲಿವೆ. ಹಾಗಾದರೇ ಅಮೆಜಾನ್‌ನ ಈ ಸೇಲ್ ಮೇಳದಲ್ಲಿ ರಿಯಾಯಿತಿ ದರದಲ್ಲಿ ಲಭ್ಯ ಇರುವ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M51
ಅಮೆಜಾನ್‌ನ ಈ ಫ್ಯಾಬ್ ಸೇಲ್‌ನಲ್ಲಿ ಈ ಫೋನ್ 22,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿದ್ದು, 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಹೊಂದಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿದ್ದು, 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಪಡೆದಿದೆ. ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಸೇಲ್‌ನಲ್ಲಿ ಈ ಫೋನ್ 13,999ರೂ. ದರದಲ್ಲಿ ಕಾಣಿಸಿಕೊಂಡಿದೆ.

ಐಫೋನ್ 11
ಜನಪ್ರಿಯ ಐಫೋನ್ 11 ಫೋನ್ ಸೇಲ್‌ನಲ್ಲಿ 51,999ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಐಫೋನ್ 6.1 ಇಂಚಿನ ಡಿಸ್‌ಪ್ಲೇ ಮತ್ತು ಡ್ಯುಯಲ್ ಕ್ಯಾಮೆರಾ ಆಯ್ಕೆಯನ್ನು ಒಳಗೊಂಡಿದೆ. ವೇಗದ ಚಿಪ್‌ಸೆಟ್ ಬೆಂಬಲದೊಂದಿಗೆ A13 ಬಯೋನಿಕ್ ಪ್ರೊಸೆಸರ್ ಪಡೆದುಕೊಂಡಿದೆ. ಆಪಲ್ ಎಕ್ಸ್‌ಆರ್‌ಗಿಂತ ಇದರ ಬ್ಯಾಟರಿ ಲೈಫ್ ಅಧಿಕವಾಗಿದೆ. ಹಿಂಬದಿಯ ಎರಡು ಕ್ಯಾಮೆರಾಗಳು 12ಎಂಪಿ ಸೆನ್ಸಾರ್ ಬೆಂಬಲವನ್ನು ಪಡೆದಿದ್ದು, ಇದರೊಂದಿಗೆ ನೈಟ್‌ಮೋಡ್, 4K ವಿಡಿಯೊ, ಸ್ಲೋ ಮೋಶನ್ ಫೀಚರ್ಸ್‌ಗಳನ್ನು ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31
ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಇನ್‌ಫಿನಿಟಿ U ಡಿಸ್‌ಪ್ಲೇ ಹೊಂದಿದೆ. ಕ್ವಾಡ್ ಕ್ಯಾಮೆರಾ ರಚನೆ ಹೊಂದಿದ್ದು, ಕ್ರಮವಾಗಿ 64ಎಂಪಿ+8ಎಂಪಿ+5ಎಂಪಿ+5ಎಂಪಿ ಸೆನ್ಸಾರ್‌ನಲ್ಲಿವೆ. 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಈ ಫೋನ್ 16,499ರೂ.ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಸಿಕೊಂಡಿದೆ.


Click it and Unblock the Notifications