ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್: ಸ್ಮಾರ್ಟ್‌ಫೋನ್‌ ಖರೀದಿಗೆ ಇದುವೇ ಸೂಕ್ತ ಸಮಯ!

|

ಇ-ಕಾಮರ್ಸ್‌ ದೈತ್ಯ ಎನಿಸಿಕೊಂಡಿರುವ ಅಮೆಜಾನ್‌ ಆನ್‌ಲೈನ್‌ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಇರುತ್ತದೆ. ವಿಶೇಷ ದಿನಗಳಲ್ಲಿ ಹಬ್ಬ ಹರಿದಿನಗಳಲ್ಲಿ ಸ್ಮಾರ್ಟ್‌ಫೋನ್‌, ಸ್ಮಾರ್ಟ್‌ಟಿವಿ ಸೇರಿದಂತೆ ಎಲ್ಲಾ ಮಾದರಿಯ ಪ್ರಾಡಕ್ಟ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ನೀಡುತ್ತಲೇ ಬಂದಿದೆ. ಸದ್ಯ ಇದೀಗ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್‌ ಅನ್ನು ಆಯೋಜಿಸಿದೆ. ಈ ಸೇಲ್‌ ಇಂದಿನಿಂದ ಭಾರತದಲ್ಲಿ ಲೈವ್ ಆಗಿದ್ದು ಮಾರ್ಚ್ 25 ರಂದು ಕೊನೆಗೊಳ್ಳಲಿದೆ.

ಅಮೆಜಾನ್‌

ಹೌದು, ಅಮೆಜಾನ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೆಸ್ಟ್‌ ಸೇಲ್‌ ಅನ್ನು ಆಯೋಜಿಸಿದೆ. ಈ ಸೇಲ್‌ ಇದೇ ಮಾರ್ಚ್‌ 25 ರಂದು ಎಂಡ್‌ ಆಗಲಿದೆ. ಇನ್ನು ಮುಂಬರುವ ಒನ್‌ಪ್ಲಸ್ 9 ಸರಣಿ (ಮಾರ್ಚ್ 23) ಮತ್ತು ವಿವೋ X 60 ಸರಣಿ (ಮಾರ್ಚ್ 25) ಸಹ ಇದೇ ಸೇಲ್‌ನಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ಗಳು ಮತ್ತು ಪರಿಕರಗಳ ಮೇಲೆ 40% ರಿಯಾಯಿತಿ ದೊರೆಯಲಿದೆ. ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳಿಗೆ ಅಮೆಜಾನ್ ತ್ವರಿತ 10% ರಿಯಾಯಿತಿ ಸಹ ನೀಡುತ್ತದೆ. ಇನ್ನುಳಿದಂತೆ ಈ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ರಿಯಾಯಿತಿ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 9 ಪ್ರೊ

ರೆಡ್ಮಿ ನೋಟ್ 9 ಪ್ರೊ

ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೆಸ್ಟ್‌ ಸೇಲ್‌ನಲ್ಲಿ 13,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆಯಾದ ರೆಡ್‌ಮಿ ನೋಟ್ 9 ಪ್ರೊ ಈಗ 12,999 ರೂಗಳಿಗೆ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್‌ ಅನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM +64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31

ಸ್ಯಾಮ್‌ಸಂಗ್‌ ಸಂಸ್ಥೆಯ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್ ಆಯ್ಕೆಯ ಮೂಲ ಬೆಲೆ 16,999 ರೂ. ಆಗಿದ್ದು, ಇದೀಗ ಆಫರ್‌ನಲ್ಲಿ 16,499 ರೂಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಇನ್‌ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಸ್ಯಾಮ್‌ಸಂಗ್‌ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸ್ಯಾಮ್‌ಸಂಗ್ ISOCELL ಬ್ರೈಟ್‌ GW1 ಸೆನ್ಸಾರ್‌ ಜೊತೆಗೆ f/ 1.8 ಲೆನ್ಸ್ ಅನ್ನು ಒಳಗೊಂಡಿದೆ.

ರೆಡ್ಮಿ 9 ಪವರ್

ರೆಡ್ಮಿ 9 ಪವರ್

ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್‌ ಮೂಲ ಬೆಲೆ 10,999 ರೂ. ಆಗಿದ್ದು, ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೆಸ್ಟ್‌ ಸೇಲ್‌ನಲ್ಲಿ 10,499 ರೂ.ಗಳಿಗೆ ಮಾರಾಟವಾಗಲಿದ್ದು, 500 ರೂ.ಗಳ ರಿಯಾಯಿತಿಯನ್ನು ಪಡೆಯಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

ಮಿ 10T 5G

ಮಿ 10T 5G

ಶಿಯೋಮಿಯ ಮಿ 10T 5G ಸ್ಮಾರ್ಟ್‌ಫೋನ್‌ ಆರಂಭಿಕ 34,999 ರೂ. ಆಗಿದ್ದು, ಅಮೆಜಾನ್‌ನಲ್ಲಿ 32,999ರೂ ಗಳಿಗೆ ಖರೀದಿಸಬಹುದಾಗಿದೆ. ಈ ಮೂಲಕ 2,000 ರೂ.ಗಳ ರಿಯಾಯಿತಿ ದೊರೆಯಲಿದೆ. ಇನ್ನು ಶಿಯೋಮಿ ಮಿ 10 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನ ಹೊಂದಿದೆ. ಜೊತೆಗೆ ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿದೆ. ಶಿಯೋಮಿ ಮಿ 10 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108ಎಂಪಿ ಸೆನ್ಸಾರ್‌ನಲ್ಲಿದೆ.

ಗ್ಯಾಲಕ್ಸಿ S20 FE

ಗ್ಯಾಲಕ್ಸಿ S20 FE

ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 49,999 ರೂ.ಗಳ ಮೂಲ ಬೆಲೆಯಲ್ಲಿ ಬಿಡುಗಡೆ ಆಗಿತ್ತು. ಆದರೆ ಇದೀಗ ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್‌ನಲ್ಲಿ 44,999 ರೂ.ಗಳ ದರದಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್ ಒಳಗೊಂಡಿರುವ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಆಕ್ಟಾ ಕೋರ್‌ ಎಕ್ಸಿನೋಸ್‌ 990 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು ಭಾರತದಲ್ಲಿ 8GB RAM + 128GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದೆ.

Best Mobiles in India

English summary
Amazon Fab Phones Fest sale is now live in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X