Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ 5G ಫೋನ್‌ ಅನ್ನು ಭಾರೀ ಡಿಸ್ಕೌಂಟ್‌ನಲ್ಲಿ ಖರೀದಿಸಬಹುದು!

ಇ ಕಾಮರ್ಸ್‌ ತಾಣಗಳ ದೊಡ್ಡಣ್ಣ ಎಂದೇ ಗುರುತಿಸಿಕೊಂಡಿರುವ ಅಮೆಜಾನ್‌ ಒಂದಿಲ್ಲೊಂದು ಆಫರ್‌ ಲಭ್ಯ ಮಾಡಿರುತ್ತದೆ. ಈ ನಿಟ್ಟಿನಲ್ಲಿ ಬಹುತೇಕ ಆನ್‌ಲೈನ್‌ ಶಾಪಿಂಗ್‌ ಪ್ರಿಯರು ಅಮೆಜಾನ್ ಪ್ಲಾಟ್‌ಫಾರ್ಮ್‌ ನತ್ತ ಮುಖ ಮಾಡುತ್ತಾರೆ. ಅದೇ ರೀತಿ ಅಮೆಜಾನ್ ತಾಣವು ಈಗ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್‌ (Amazon Fab Phones Fest) ಘೋಷಿಸಿದ್ದು, ಅದ್ರಲ್ಲಿ ಬಜೆಟ್‌ ದರದ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ವೊಂದಕ್ಕೆ ಭರ್ಜರಿ ಡಿಸ್ಕೌಂಟ್‌ ತಿಳಿಸಿದೆ.

ಅಮೆಜಾನ್ ಫ್ಯಾಬ್ ಫೋನ್ಸ್

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್‌ ಘೋಷಿಸಿರುವ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್‌ (Amazon Fab Phones Fest) ಇದೇ ನವೆಂಬರ್‌ 26 ರಿಂದ ಪ್ರಾರಂಭವಾಗಲಿದೆ. ಈ ಮಾರಾಟ ಮೇಳದಲ್ಲಿ ಕೆಲವು ಪ್ರಮುಖ ಫೋನ್‌ಗಳು ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯವಾಗಲಿದ್ದು, ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ 9,499ರೂ. ಗಳಿಗೆ ಲಭ್ಯವಾಗಲಿದ್ದು, ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ವೇರಿಯಂಟ್‌ 10999ರೂ. ಲಭ್ಯವಾಗಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ನವೆಂಬರ್ 29ರ

ಇನ್ನು ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್‌ (Amazon Fab Phones Fest) ಸೇಲ್‌ ಇದೇ ನವೆಂಬರ್ 29ರ ವರೆಗೂ ಚಾಲ್ತಿ ಇರಲಿದೆ. ಹಾಗಾದರೆ ಈ ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ M13 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಗ್ಯಾಲಕ್ಸಿ M13 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದ್ದು, ಗೊರಿಲ್ಲಾ ಗ್ಲಾಸ್‌ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ One UI 4 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಗ್ಯಾಲಕ್ಸಿ M13 5G ಬ್ಯಾಟರಿ ಮತ್ತು ಕ್ಯಾಮೆರಾ

ಗ್ಯಾಲಕ್ಸಿ M13 5G ಬ್ಯಾಟರಿ ಮತ್ತು ಕ್ಯಾಮೆರಾ

ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಗ್ಯಾಲಕ್ಸಿ M13 ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಗ್ಯಾಲಕ್ಸಿ M13 ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 480 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇದು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ ಒನ್‌ UI 4 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಗ್ಯಾಲಕ್ಸಿ M13 ಬ್ಯಾಟರಿ ಮತ್ತು ಕ್ಯಾಮೆರಾ

ಗ್ಯಾಲಕ್ಸಿ M13 ಬ್ಯಾಟರಿ ಮತ್ತು ಕ್ಯಾಮೆರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Amazon Fab Phones Fest: Samsung Galaxy M13 5G to get Big Price cut.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+