ಡಿಸ್ಕೌಂಟ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಇಲ್ಲಿವೆ ಬೆಸ್ಟ್‌ ಆಯ್ಕೆಗಳು!

|

ಭಾರತದಲ್ಲಿ ರಿಪಬ್ಲಿಕ್‌ ಡೇ ಸಂಭ್ರಮದ ಪ್ರಯುಕ್ತ ಇ-ಕಾಮರ್ಸ್‌ ಸೈಟ್‌ಗಳು ವಿಶೇಷ ಡಿಸ್ಕೌಂಟ್‌ ಸೇಲ್‌ಗಳನ್ನು ಹೊತ್ತು ತಂದಿವೆ. ಜನಪ್ರಿಯ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳಾದ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ರಿಪಬ್ಲಿಕ್‌ ಡೇ ಸೇಲ್‌ಗಳನ್ನು ಆಯೋಜಿಸಿವೆ. ಈ ಎರಡು ಸೇಲ್‌ಗಳು ಜನವರಿ 17ರಿಂದಲೇ ಲೈವ್‌ ಆಗಿವೆ. ಇನ್ನು ಅಮೆಜಾನ್‌ ತನ್ನ ಗ್ರೇಟ್‌ ರಿಪಬ್ಲಿಕ್‌ ಡೇ ಸೇಲ್‌ನಲ್ಲಿ ಎಲ್ಲಾ ಮಾದರಿಯ ಗ್ಯಾಜೆಟ್ಸ್‌ಗಳ ಮೇಲೆ ವಿಶೇಷ ಡಿಸ್ಕೌಂಟ್‌ ಅನ್ನು ನೀಡುತ್ತಿದೆ. ಹಾಗೆಯೇ ಫ್ಲಿಪ್‌ಕಾರ್ಟ್‌ ಕೂಡ ವಿಶೇಷ ಆಫರ್‌ ಅನ್ನು ನೀಡುತ್ತಿದೆ.

ಅಮೆಜಾನ್‌

ಹೌದು, ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ರಿಪಬ್ಲಿಕ್‌ ಡೇ ಸೇಲ್‌ ಅನ್ನು ನಡೆಸುತ್ತಿವೆ. ಈ ಸೇಲ್‌ನಲ್ಲಿ ವಿಶೇಷವಾಗಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಐಫೋನ್‌ನಿಂದ ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ ತನಕ ವಿಶೇಷವಾದ ರಿಯಾಯಿತಿಗಳನ್ನು ಪಡೆದುಕೊಂಡಿವೆ. ಹಾಗಾದ್ರೆ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಮತ್ತು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ನೀವು ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್ ಡೇಸ್‌ ಸೇಲ್‌

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್ ಡೇಸ್‌ ಸೇಲ್‌

ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ ಈಗಾಗಲೇ ಲೈವ್‌ ಆಗಿದ್ದು, ಇದೇ ಜನವರಿ 22ರ ತನಕ ಮುಂದುವರೆಯಲಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ದೊರೆಯಲಿದೆ. ಫ್ಲಿಪ್‌ಕಾರ್ಟ್‌ ಐಸಿಐಸಿಐ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಬಳಸಿ ಖರೀದಿಸಿದರೆ 750ರೂ.ಗಳ ಕ್ಯಾಶ್‌ಬ್ಯಾಕ್‌ ಆಫರ್‌ ನೀಡುತ್ತಿದೆ. ಜೊತೆಗೆ ಆಕ್ಸಿಸ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ 5% ತನಕ ಕ್ಯಾಶ್‌ ಬ್ಯಾಕ್‌ ಆಫರ್‌ ಪಡೆಯಬಹುದಾಗಿದೆ. ಇನ್ನು ಫ್ಲಿಪ್‌ಕಾರ್ಟ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್‌ ಪಡೆದುಕೊಂಡಿವೆ ಅನ್ನೊದನ್ನ ಕೆಲಗಿನ ಹಂತಗಳಲ್ಲಿ ತಿಳಿಯಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F12

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F12

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ 26% ಡಿಸ್ಕೌಂಟ್‌ ಪಡೆದುಕೊಂಡಿದೆ. 12,999ರೂ ಮೂಲಬೆಲೆಯ ಈ ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 9,499 ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ರಿಯಲ್‌ಮಿ 8i ಸ್ಮಾರ್ಟ್‌ಫೋನ್‌

ರಿಯಲ್‌ಮಿ 8i ಸ್ಮಾರ್ಟ್‌ಫೋನ್‌

ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 12% ರಿಯಾಯಿಯಿ ಪಡೆದುಕೊಂಡಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ 15,999ರೂ. ಬದಲಿಗೆ 13,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G96 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಹೊಂದಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 2MP ಸೆನ್ಸಾರ್‌ ಹೊಂದಿದೆ. ಇದು 16MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 50A

ರಿಯಲ್‌ಮಿ ನಾರ್ಜೊ 50A

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಬಿಗ್‌ ಸೇವಿಂಗ್ಸ್‌ ಡೇ ಸೇಲ್‌ನಲ್ಲಿ 10% ರಿಯಾಯಿತಿ ಪಡೆದಿದೆ. ಇದರಿಂದ 13,999ರೂ.ಮೂಲಬೆಲೆಯ ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 12,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11. ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 53 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.

ವಿವೋ X70ಪ್ರೊ ಸ್ಮಾರ್ಟ್‌ಫೋನ್‌

ವಿವೋ X70ಪ್ರೊ ಸ್ಮಾರ್ಟ್‌ಫೋನ್‌

ಫ್ಲಿಪ್‌ಕಾರ್ಟ್‌ನಲ್ಲಿ ವಿವೋ X70ಪ್ರೊ ಸ್ಮಾರ್ಟ್‌ಫೋನ್‌ ಕಾಸ್ಮಿಕ್‌ ಬ್ಲಾಕ್‌ 8GB RAM ಆಯ್ಕೆಯು 9% ಡಿಸ್ಕೌಂಟ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೂಲಬೆಲೆ 54,990ರೂ.ಆಗಿದ್ದು, ನಿಮಗೆ 49,990ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬೆಂಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಅಲ್ಟ್ರಾ-ಸೆನ್ಸಿಂಗ್ ಗಿಂಬಲ್ ಕ್ಯಾಮೆರಾವನ್ನು ಒಳಗೊಂಡಿದೆ.

ಅಮೆಜಾನ್‌ ಗ್ರೇಟ್‌ ರಿಪಬ್ಲಿಕ್‌ ಡೇ ಸೇಲ್‌

ಅಮೆಜಾನ್‌ ಗ್ರೇಟ್‌ ರಿಪಬ್ಲಿಕ್‌ ಡೇ ಸೇಲ್‌

ಅಮೆಜಾನ್‌ ಗ್ರೇಟ್‌ ರಿಪಬ್ಲಿಕ್‌ ಡೇ ಸೇಲ್‌ ಅನೇಕ ಆಫರ್‌ಗಳನ್ನು ಹೊತ್ತು ತಂದಿದೆ. ಎಂದಿನಂತೆ ಸ್ಮಾರ್ಟ್‌ಫೋನ್‌ ಖರೀದಿದಾರರಿಗೆ ಈ ಸೇಲ್‌ ವಿಶೇಷ ಡಿಸ್ಕೌಂಟ್‌ಗಳನ್ನು ನೀಡುತ್ತಿದೆ. ಬ್ಯಾಂಕ್‌ ಕ್ರೇಡಿಟ್‌ ಕಾರ್ಡ್‌ ಆಫರ್‌, ಎಕ್ಸ್‌ಚೇಂಜ್‌ ಆಫರ್‌, ನೋ ಕಾಸ್ಟ್‌ ಇಎಂಐ ಆಫರ್‌ ಅನ್ನು ಪಡೆದುಕೊಳ್ಳಬಹುದಾಗಿದೆ. ಅಮೆಜಾನ್‌ ಸೇಲ್‌ನಲ್ಲಿ ವಿಶೇಷ ಡಿಸ್ಕೌಂಟ್‌ ಪಡೆದಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಕೆಳಗಿನ ಹಂತಗಳಲ್ಲಿ ತಿಳಿಯಿರಿ.

ಐಫೋನ್‌ 12

ಐಫೋನ್‌ 12

ಅಮೆಜಾನ್‌ನಲ್ಲಿ ಐಫೋನ್‌12 18% ಡಿಸ್ಕೌಂಟ್‌ ಪಡೆದಿದೆ. ಇದರಿಂದ 65,900ರೂ. ಬೆಲೆಯ ಐಫೋನ್‌ 12 ನಿಮಗೆ ಕೇವಲ 53,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಆಪಲ್‌ ಐಫೋನ್ 12 OLED ಡಿಸ್‌ಪ್ಲೇ ಹೊಂದಿದೆ. ಇದು A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದ್ದು, 5G ನೆಟ್‌ವರ್ಕ್‌ ಅನ್ನು ಬೆಂಬಲಿಸಲಿದೆ. ಇನ್ನು ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ಇದರಲ್ಲಿ ನೈಟ್‌ ಮೋಡ್‌ ಆಯ್ಕೆ ಕೂಡ ನೀಡಲಾಗಿದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 27% ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ ಅನ್ನು ನೀವು ಇದೀಗ 12,959ರೂ. ಬದಲಿಗೆ 9,499ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ.ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ.ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒನ್‌ಪ್ಲಸ್ 9R 5G

ಒನ್‌ಪ್ಲಸ್ 9R 5G

ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 8% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ 39,999ರೂ. ಬದಲಿಗೆ 36,999 ರೂ.ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ಲಾಟ್‌ ಪ್ಲೂಯಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್‌, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವಾರ್ಪ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

Most Read Articles
Best Mobiles in India

English summary
best deals from the Amazon Great Republic Day Sale and Flipkart Big Saving Days Sale.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X