ಅಮೆಜಾನ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್!
ಜನಪ್ರಿಯ ಅಮೆಜಾನ್ ಇ-ಕಾಮರ್ಸ್ ತಾಣವು ಒಂದಿಲ್ಲೊಂದು ವಿಶೇಷ ಸೇಲ್ ಮೂಲಕ ಗ್ರಾಹಕರನ್ನು ಸೆಳೆಯುತ್ತ ಸಾಗಿದೆ. ಇದೀಗ ಅಮೆಜಾನ್ ಪ್ಲಾಟ್‌ಫಾರ್ಮ್ 'ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್' ಆಯೋಜಿಸಿದೆ. ಈ ಸೇಲ್ ಮೇಳವು ಈಗ ಚಾಲ್ತಿ ಇದ್ದು, ಇದೇ ಆಗಷ್ಟ 9ರ ವರೆಗೂ ಇರಲಿದೆ. ಈ ವಿಶೇಷ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಸ್ಮಾರ್ಟ್ ವಾಚ್, ಸ್ಮಾರ್ಟ್ ಟಿವಿ ಸೇರಿದಂತೆ ಹಲವು ಗ್ಯಾಟ್ಜೆಟ್ಸ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಾಗಲಿದೆ. ಮುಖ್ಯವಾಗಿ ಇತ್ತೀಚಿಗೆ ಬಿಡುಗಡೆ ಆಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ರಿಯಾಯಿತಿಯನ್ನು ಪಡೆದಿವೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಆಯೋಜಿಸಿರುವ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ಇದೀಗ ಲೈವ್ ಆಗಿದೆ. ಐದು ದಿನಗಳ ಈ ಸೇಲ್ ಇದೇ ಆಗಷ್ಟ 9ರಂದು ಮುಕ್ತಾಯವಾಗಲಿದೆ. ಈ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಕಂಪನಿಯ ಉತ್ಪನ್ನಗಳಿಗೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ. ಅವುಗಳಲ್ಲಿ ಸ್ಮಾರ್ಟ್‌ಫೋನ್, ಸೌಂಡ್ ಬಾರ್, ಸ್ಮಾರ್ಟ್ ಟಿವಿ, ಇಯರ್‌ಬಡ್ಸ್ ಡಿವೈಸ್‌ಗಳು ಸೇರಿವೆ. ಹಾಗಾದರೇ ಅಮೆಜಾನ್ ಈ ವಿಶೇಷ ಸೇಲ್ ನಲ್ಲಿ ಭಾರೀ ರಿಯಾಯಿತಿ ಪಡೆದ ಸ್ಯಾಮ್‌ಸಂಗ್ ಉತ್ಪನ್ನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 11
ಸ್ಯಾಮ್‌ಸಂಗ್‌ನ ಬಜೆಟ್ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ 4,500 ರೂ.ಗಳ ಫ್ಲಾಟ್ ರಿಯಾಯಿತಿಯಲ್ಲಿ ಲಭ್ಯವಿದೆ. 14,999 ರೂ.ನಲ್ಲಿ ಆನ್ಲೈನ್ನಲ್ಲಿ ಪಟ್ಟಿ ಮಾಡಲಾಗಿದೆ. ಆದರೆ ಈ ಸೇಲ್‌ನಲ್ಲಿ 10,499ರೂ.ಗಳಿಗೆ ಈ ಸ್ಮಾರ್ಟ್‌ಫೋನ್ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಅನ್ನು ರನ್ ಮಾಡುತ್ತದೆ ಮತ್ತು ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಪ್ರೊಸೆಸರ್ ನಿಂದ ನಿಯಂತ್ರಿಸಲ್ಪಡುತ್ತದೆ. ಸ್ಮಾರ್ಟ್‌ಫೋನ್ 5000 mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20
ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ ನೋಟ್ 20 ಫೋನ್ ಅಮೆಜಾನ್ ಸೇಲ್‌ನಲ್ಲಿ 31% ರಿಯಾಯಿತಿ ಪಡೆದಿದ್ದು, 54,999ರೂ. ಬೆಲೆಯ ಹೊಂದಿರುವ ಈ ಫೊನ್ 31,001ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಅನ್ನು ರನ್ ಮಾಡುತ್ತದೆ ಮತ್ತು 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4300mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್
ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ Z ಫ್ಲಿಪ್ ಫೋನ್ ಅಮೆಜಾನ್ ಸೇಲ್‌ನಲ್ಲಿ 36% ರಿಯಾಯಿತಿ ಪಡೆದಿದ್ದು, 99,900 ರೂ. ಬೆಲೆಯ ಹೊಂದಿರುವ ಈ ಫೊನ್ 64,000ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಅನ್ನು ರನ್ ಮಾಡುತ್ತದೆ ಮತ್ತು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865+ ಪ್ರೊಸೆಸರ್ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 3300mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಅಮೆಜಾನ್ ಸೇಲ್‌ನಲ್ಲಿ 37% ರಿಯಾಯಿತಿ ಪಡೆದಿದ್ದು, 15,990 ರೂ. ಬೆಲೆಯ ಹೊಂದಿರುವ ಈ ಡಿವೈಸ್ 9,999 ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಡಿವೈಸ್ IPX2 ರೇಟಿಂಗ್ ಪಡೆದಿದ್ದು, ನೀರು ಮತ್ತು ಧೂಳು ನಿರೋಧಕ ರಚನೆಯನ್ನು ಪಡೆದಿದೆ. ಹಾಗೆಯೇ ಆರು ಗಂಟೆಗಳ ಮ್ಯೂಸಿಕ್ ಪ್ಲೇ ಬ್ಯಾಕ್ ಅನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್ ಟಿವಿ
ಅಮೆಜಾನ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ 43 ಇಂಚಿನ ಸ್ಮಾರ್ಟ್ ಟಿವಿಯು 45% ರಷ್ಟು ರಿಯಾಯಿತಿ ಪಡೆದಿದೆ. 77,900ರೂ. ಪ್ರೈಸ್ ಟ್ಯಾಗ್ ಹೊಂದಿರುವ ಈ ಸ್ಮಾರ್ಟ್ ಟಿವಿಯು ಡಿಸ್ಕೌಂಟ್ ನಂತರ 42,490ರೂ.ಗಳಿಗೆ ಲಭ್ಯ ಇದೆ. ಈ ಟಿವಿಯು 4K UHDಯನ್ನು ಹೊಂದಿದೆ.


Click it and Unblock the Notifications








