Just In
- 15 min ago
ನೀವು ಡಯಟ್ ಮಾಡ್ತಾ ಇದ್ದೀರಾ?..ಹಾಗಿದ್ರೆ ಈ ಸ್ಮಾರ್ಟ್ ಸಾಧನಗಳ ಬಗ್ಗೆ ನೋಡಿ!
- 1 hr ago
ಸದ್ಯದಲ್ಲೇ ವಾಟ್ಸಾಪ್ ಸ್ಟೇಟಸ್ ವೀಕ್ಷಿಸುವುದಕ್ಕೆ ಲಭ್ಯವಾಗಲಿದೆ ಹೊಸ ಆಯ್ಕೆ!
- 3 hrs ago
ಸರ್ಕಾರದಿಂದ ಹೊಸ 'ಫೇಸ್ ರಿಕಗ್ನಿಷನ್ ಸಿಸ್ಟಮ್'; ಮಾರುವೇಷದಲ್ಲಿದ್ದರೂ ಪತ್ತೆ ಮಾಡುತ್ತೆ!
- 14 hrs ago
ಹಾನರ್ ಪ್ಯಾಡ್ 8 ಟ್ಯಾಬ್ಲೆಟ್ ಬಿಡುಗಡೆ!..7,250mAh ಬ್ಯಾಟರಿ!
Don't Miss
- Lifestyle
ಅಕಾಲಿಕ ಬಿಳಿಕೂದಲಿಗೂ, ಹೃದ್ರೋಗಕ್ಕೂ ಸಂಬಂಧವಿದೆಯೇ? ಸಂಶೋಧನೆ ಹೇಳೋದೇನು?
- News
ಮುಂಗಾರು: ಡೆಹ್ರಾಡೂನ್ನಲ್ಲಿ ಮೇಘಸ್ಫೋಟ, ಪೂರ್ವ ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ
- Sports
Maharaja Trophy: ಪ್ಲೇಆಫ್ ಆರಂಭಕ್ಕೆ 6 ಪಂದ್ಯಗಳಷ್ಟೇ ಬಾಕಿ; ಅಂಕಪಟ್ಟಿಯಲ್ಲಿ ಬೆಂಗಳೂರು ಟಾಪ್!
- Movies
ಹೊಸ ಮನೆ ಪೂಜೆ ಮುಗಿಸಿದ ರಣ್ವೀರ್-ದೀಪಿಕಾ: ಬೆಲೆ ಎಷ್ಟು ಗೊತ್ತೆ?
- Finance
ಆಗಸ್ಟ್ 20: ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ?
- Automobiles
ಭಾರತದ ಮೊದಲ ಮತ್ತು ವಿಶಿಷ್ಟ ವಿದ್ಯುತ್ಚಾಲಿತ ಡಬಲ್ ಡೆಕ್ಕರ್ ಬಸ್ ಅನಾವರಣ
- Travel
ಪುಷ್ಪ’ ಶೂಟಿಂಗ್ ಇಲ್ಲೆ ನಡೆದಿದ್ದು; ಈ ಸುಂದರವಾದ ಸ್ಥಳ ಹೇಗಿದೆ ಗೊತ್ತಾ?
- Education
Digital Marketing Courses In India : ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್ ಬಗ್ಗೆ ಸಂಪೂರ್ಣ ಮಾಹಿತಿ
ಈ ಹೊಸ ಒನ್ಪ್ಲಸ್ ಫೋನ್ಗೆ ಭರ್ಜರಿ ಡಿಸ್ಕೌಂಟ್!..ಖರೀದಿಸಲು ಇನ್ನೇಕೆ ತಡ?
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಇದೀಗ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್ ಆಯೋಜಿಸಿದೆ. ಈ ಸೇಲ್ನಲ್ಲಿ ಆಯ್ದ ಕೆಲವು ಸ್ಮಾರ್ಟ್ಫೋನ್, ಲ್ಯಾಪ್ಟಾಪ್ ಹಾಗೂ ಇತರೆ ಗ್ಯಾಡ್ಜೆಟ್ಸ್ಗಳು ಬೊಂಬಾಟ್ ರಿಯಾಯಿತಿಯಲ್ಲಿ ಕಾಣಿಸಿಕೊಳ್ಳುತ್ತವೆ ಎಂದು ಆನ್ಲೈನ್ ಶಾಪಿಂಗ್ ಪ್ರಿಯರಿಗೆ ತಿಳಿದಿದೆ ಇದೆ. ಆದರೆ ಇತ್ತೀಚಿನ ಬಿಡುಗಡೆ ಆಗಿರುವ ಈ ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ ದೊಡ್ಡ ಡಿಸ್ಕೌಂಟ್ನಲ್ಲಿ ಕಾಣಿಸಿಕೊಂಡಿದೆ.

ಹೌದು, ಒನ್ಪ್ಲಸ್ ಸಂಸ್ಥೆಯ ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್ ನಲ್ಲಿ ಭರ್ಜರಿ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಕಳೆದ ಏಪ್ರಿಲ್ನಲ್ಲಿ ಭಾರತದಲ್ಲಿ ಈ ಫೋನ್ ಬಿಡುಗಡೆ ಮಾಡಲಾಯಿತು. ರೇಟಿಂಗ್ ಹಾಗೂ ರಿವ್ಯೂವ್ಗಳಿಂದಲೂ ಈ ಫೋನ್ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಅಮೆಜಾನ್ನ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್ ನಲ್ಲಿ ಈ ಫೋನ್ 17,999 ರೂ. ಆಫರ್ ಬೆಲೆಯಲ್ಲಿ ಲಭ್ಯ.

ಅಂದಹಾಗೇ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ಸದ್ಯ ಚಾಲ್ತಿ ಇದ್ದು, ಈ ಸೇಲ್ ಇದೇ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಅಮೆಜಾನ್ ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ ಮೇಲೆ ಫ್ಲಾಟ್ 1,000 ರೂ. ಬೆಲೆ ಕಡಿತವನ್ನು ನೀಡುತ್ತಿದೆ. SBI ಕ್ರೆಡಿಟ್ ಕಾರ್ಡ್ನೊಂದಿಗೆ 1,000 ರೂ. ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಜೊತೆಗೆ EMI ಸೌಲಭ್ಯದೊಂದಿಗೆ, 1,250ರೂ. ರಿಯಾಯಿತಿಯನ್ನು ಪಡೆಯಬಹುದು. ಇನ್ನುಳಿದಂತೆ ಈ ಫೋನಿನ ಆಫರ್ ಮಾಹಿತಿ ಹಾಗೂ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಫರ್ ಮಾಹಿತಿ:
- 1,000 ರೂ ಬೆಲೆ ಕಡಿತ
- ಎಸ್ಬಿಐ ಕ್ರೆಡಿಟ್ ಕಾರ್ಡ್ ವಹಿವಾಟುಗಳೊಂದಿಗೆ ರೂ 1,000 ತ್ವರಿತ ರಿಯಾಯಿತಿ (ಇಎಂಐ ಅಲ್ಲದ)
- SBI ಕ್ರೆಡಿಟ್ ಕಾರ್ಡ್ ವಹಿವಾಟುಗಳೊಂದಿಗೆ (EMI) ರೂ 1,250 ತ್ವರಿತ ರಿಯಾಯಿತಿ
- ಆಯ್ದ ಕಾರ್ಡ್ಗಳಲ್ಲಿ ಯಾವುದೇ ವೆಚ್ಚದ EMI, 6 ತಿಂಗಳವರೆಗೆ
- ಪ್ರೈಮ್ ಸದಸ್ಯರಿಗೆ ಅಮೆಜಾನ್ ಪೇ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ನೊಂದಿಗೆ 5% ಕ್ಯಾಶ್ಬ್ಯಾಕ್

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್ಡಿ+ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇಯು 202ppi ಪಿಕ್ಸೆಲ್ ಸಾಂದ್ರತೆ ಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಗೇಮಿಂಗ್ ಗಾಗಿ 240Hz ರೀಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಪವರ ಯಾವುದು?
ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ ಕ್ವಾಲ್ಕಮ್ ಸ್ನ್ಯಾಪ್ಡ್ರಾಗ್ನ್ 695 SoC ಪ್ರೊಸೆಸರ್ ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್ಬಿ ಟೈಪ್-ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ ಬಿಡುಗಡೆ ಸಮಯದಲ್ಲಿ 6GB RAM + 128GB ಸ್ಟೋರೇಜ್ ಬೇಸ್ ಮಾಡೆಲ್ಗೆ 19,999 ರೂ. ಬೆಲೆಯಲ್ಲಿ ಕಾಣಿಸಿಕೊಂಡಿತು. ಆದರೆ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 21,999ರೂ.ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಬ್ಲ್ಯಾಕ್ ಹಾಗೂ ಬ್ಲೂ ಬಣ್ಣ ಆಯ್ಕೆಗಳಲ್ಲಿ ಲಭ್ಯ.

ಒನ್ಪ್ಲಸ್ ನಾರ್ಡ್ N20 SE ಸ್ಮಾರ್ಟ್ಫೋನ್ ಫೀಚರ್ಸ್
ಒನ್ಪ್ಲಸ್ ನಾರ್ಡ್ N20 SE ಸ್ಮಾರ್ಟ್ಫೋನ್ 6.56 ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಸ್ಮಾರ್ಟ್ಫೋನ್ ಮೀಡಿಯಾಟೆಕ್ ಹಿಲಿಯೋ G35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಿದೆ ಎನ್ನಲಾಗಿದೆ.

ಇನ್ನು ಒನ್ಪ್ಲಸ್ ನಾರ್ಡ್ N20 SE ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಕ್ಯಾಮೆರಾ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್ ಟು ಫೋಕಸ್ ಅನ್ನು ಒಳಗೊಂಡಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್ವೂಕ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086