ಶಿಯೋಮಿಯ ಈ ಫೋನ್ ಬೆಲೆಯಲ್ಲಿ ಈಗ ಸಖತ್ ಇಳಿಕೆ!..ಆಫರ್‌ಗೆ ಗ್ರಾಹಕರು ಫಿದಾ!
ಶಿಯೋಮಿ ಸಂಸ್ಥೆಯು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಭಿನ್ನ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಶಿಯೋಮಿ 11X ಪ್ರೊ ಫೋನ್ ಹೈ ಎಂಡ್ ಮಾದರಿಯ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಆದರೆ ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಈ ಮೊಬೈಲ್ ಬೊಂಬಾಟ್ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ.
ಹೌದು, ಜನಪ್ರಿಯ ಅಮೆಜಾನ್ ಸಂಸ್ಥೆಯು ಆಯೋಜಿಸಿರುವ ಅಮೆಜಾನ್ ಗ್ರೇಟ್ ಫ್ರಿಡಂ ಸೇಲ್ ನಲ್ಲಿ ಶಿಯೋಮಿ 11X ಪ್ರೊ ಫೋನ್ 17% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 8GB RAM + 128GB ವೇರಿಯಂಟ್ ಬೆಲೆಯು 47,999ರೂ. ಆಗಿದ್ದು, ಆಫರ್‌ನಲ್ಲಿ ಗ್ರಾಹಕರು 39,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಇನ್ನು ಶಿಯೋಮಿ 11X ಪ್ರೊ ಮೊಬೈಲ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್, 108 ಮೆಗಾಪಿಕ್ಸಲ್ ಸೆನ್ಸಾರ್ ಕ್ಯಾಮೆರಾ, ಫಾಸ್ಟ್ ಚಾರ್ಜಿಂಗ್ ಗಳಂತಹ ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿದೆ. ಜೊತೆಗೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಇನ್ನುಳಿದಂತೆ ಈ ಶಿಯೋಮಿ 11X ಪ್ರೊ ಮೊಬೈಲ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 11X ಪ್ರೊ ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ ಹೇಗಿದೆ : ಶಿಯೋಮಿ 11X ಪ್ರೊ ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್, 360Hz ಟಚ್ ಸ್ಯಾಂಪ್ಲಿಂಗ್ ರೇಟ್, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿವೆ. ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಪಡೆದಿದೆ.
ಶಿಯೋಮಿ 11X ಪ್ರೊ ಯಾವ ಪ್ರೊಸೆಸರ್ ಬಲ ಇದೆ : ಶಿಯೋಮಿ 11X ಪ್ರೊ ಮೊಬೈಲ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಇದಲ್ಲದೇ ಈ ಮೊಬೈಲ್ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಅನ್ನು ಒಳಗೊಂಡಿದೆ.
ಶಿಯೋಮಿ 11X ಪ್ರೊ ಕ್ಯಾಮೆರಾ ಸೆನ್ಸಾರ್ ಎಷ್ಟಿದೆ : ಶಿಯೋಮಿ 11X ಪ್ರೊ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್, ತೃತೀಯ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಪಡೆದಿದೆ. ಇನ್ನು ಈ ಫೋನ್ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಶಿಯೋಮಿ 11X ಪ್ರೊ ಬ್ಯಾಟರಿ ಬ್ಯಾಕ್‌ಅಪ್ ಮತ್ತು ಕನೆಕ್ಟಿವಿಟಿ ಸೌಲಭ್ಯ : ಶಿಯೋಮಿ 11X ಪ್ರೊ ಮೊಬೈಲ್ 4,520mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಈ ಫೋನ್ ಡಾಲ್ಬಿ ಅಟ್ಮೋಸ್ ಸಪೋರ್ಟ್‌ನೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ವೈ-ಫೈ 6, ಜಿಪಿಎಸ್, ಎಜಿಪಿಎಸ್, ನ್ಯಾವಿಕ್ ಬೆಂಬಲ, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಪೋರ್ಟ್ ಮಾಡುತ್ತದೆ.
ಶಿಯೋಮಿ 11X ಪ್ರೊ ಮೆಮೊರಿ ಹಾಗೂ ಕಲರ್ : ಶಿಯೋಮಿ 11X ಪ್ರೊ ಮೊಬೈಲ್ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಬಣ್ಣಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications