ಸ್ಯಾಮ್‌ಸಂಗ್ ಫೋನ್ ಖರೀದಿಸುವ ಪ್ಲ್ಯಾನ್ ಇದ್ರೆ, ಈ ಆಫರ್ ಒಮ್ಮೆ ಚೆಕ್ ಮಾಡಿ!
ಪ್ರಮುಖ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಆಯೋಜಿಸಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಇದೀಗ ಲೈವ್ ನಲ್ಲಿದೆ. ಈ ಸೇಲ್ ಮೇಳದಲ್ಲಿ ಇತ್ತೀಚಿಗೆ ಬಿಡುಗಡೆ ಆಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳು ಹಾಗೂ ಜನಪ್ರಿಯ ಫೋನ್‌ಗಳು ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M ಸರಣಿಯ ಫೋನ್‌ಗಳು ಅಧಿಕ ಡಿಸ್ಕೌಂಟ್‌ನೊಂದಿಗೆ ಗ್ರಾಹಕರನ್ನು ಸೆಳೆದಿವೆ.

ಹೌದು, ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಈಗಾಗಲೇ ಪ್ರಾರಂಭವಾಗಿದ್ದು, ಈ ಮಾರಾಟ ವೇಳವು ಸೆಪ್ಟೆಂಬರ್ 30 ರ ವರೆಗೂ ಚಾಲ್ತಿ ಇರಲಿದೆ. ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಈ ಮಾರಾಟ ಮೇಳವು ಅತ್ಯುತ್ತಮ ವೇದಿಕೆಯಾಗಿದ್ದು, ಗ್ಯಾಲಕ್ಸಿ M ಸರಣಿ ಫೋನ್‌ಗಳು ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ ಇವೆ. ಹಾಗಾದರೆ ಅಮೆಜಾನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿಯಲ್ಲಿ ಕಾಣಿಸಿಕೊಮಡಿರುವ ಗ್ಯಾಲಕ್ಸಿ M ಸರಣಿಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13
ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಫೋನ್ 4G ಮತ್ತು 5G ವೇರಿಯಂಟ್ ಮಾಡೆಲ್‌ಗಳು ಕ್ರಮವಾಗಿ 14,999 ರೂ ಮತ್ತು 16,999 ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈಗ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್‌ನಲ್ಲಿ ಕ್ರಮವಾಗಿ 8,499 ರೂ ಮತ್ತು 10,999 ರೂ. ಗಳ ಆಫರ್ ಬೆಲೆಗೆ ಲಭ್ಯ. ಇನ್ನು ಈ ಫೋನ್ 6.6 ಇಂಚಿನ ಫುಲ್ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದ್ದು, ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಮೂಲಕ RAM ಅನ್ನು 12GB ವರೆಗೆ ವಿಸ್ತರಿಸಬಹುದು. ಅಲ್ಲದೇ 6000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G
ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 19,999ರೂ. ಗಳ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ + ಇನ್ಫಿನಿಟಿ O ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ One UI 4.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಜೊತೆಗೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಹಾಗೆಯೇ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ 11,999 ರೂ. ಗಳಿಗೆ ಲಭ್ಯವಾಗಲಿದೆ. ಈ ಫೋನ್ 6.6 ಇಂಚಿನ ಫುಲ್ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಈ ಫೋನ್ ಆಕ್ಟಾ-ಕೋರ್ 5nm ಎಕ್ಸಿನೋಸ್ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ.


Click it and Unblock the Notifications








