Home
ಸುದ್ದಿಜಾಲ

ಅಮೆಜಾನ್‌ ಸೇಲ್‌ ಡಿಸ್ಕೌಂಟ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಲು ಇದುವೇ ಲಾಸ್ಟ್‌ ಚಾನ್ಸ್‌!

ಅಮೆಜಾನ್ ತಾಣ ಭಾರತದಲ್ಲಿ ಹಬ್ಬದ ಸೀಸನ್‌ ಪ್ರಯುಕ್ತ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ ನಡೆಸುತ್ತಿದೆ. ಈ ಸೇಲ್‌ನಲ್ಲಿ ಈಗಾಗಾಲೇ ಹಲವು ಗ್ಯಾಜೆಟ್ಸ್‌ಗಳ ಮೇಲೆ ಭರ್ಜರಿ ಆಫರ್‌ ನೀಡಲಾಗ್ತಿದ್ದು, ದೀಪಾವಳಿ ಸಂಭ್ರಮಕ್ಕೆ ಇನ್ನಷ್ಟು ಮೆರಗು ನೀಡಿದೆ. ದೀಪಾವಳಿಗೆ ಇನ್ನು ಕೆಲವು ದಿನಗಳಷ್ಟೇ ಬಾಕಿಇದ್ದು, ಅಮೆಜಾನ್‌ ಸೇಲ್‌ನಲ್ಲಿ ಇನ್ನಷ್ಟು ಬಿಗ್‌ ಆಫರ್‌ಗಳನ ಸುರಿಮಳೆಯನ್ನು ಕಾಣಬಹುದಾಗಿದೆ. ಹಬ್ಬದ ಸಂಭ್ರಮದಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸೋರಿಗೆ ಇದು ಸೂಕ್ತ ಸಮಯವಾಗಿದೆ.

ಅಮೆಜಾನ್‌

ಹೌದು, ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಇದೀಗ ಫೈನಲ್‌ ಡೇಸ್‌ ಸೇಲ್‌ ನಡೆಯುತ್ತಿದೆ. ಇಷ್ಟು ದಿನ ಅಮೆಜಾನ್‌ ಸೇಲ್‌ನಲ್ಲಿ ಆಫರ್‌ ತಪ್ಪಿಸಿಕೊಂಡವರಿಗೆ ಇದು ಕೊನೆಯ ಅವಕಾಶವಾಗಿದೆ. ಫೈನಲ್‌ ಡೇಸ್‌ ಸೇಲ್‌ ಮೂಲಕ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ಗೆ ತೆರೆ ಬೀಳಲಿದೆ. ಇನ್ನು ಕೂಡ ಆಫರ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದು ಬಯಸುವವರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಹಾಗಾದ್ರೆ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಫೈನಲ್‌ ಡೇಸ್‌ ಸೇಲ್‌ನಲ್ಲಿ ಡಿಸ್ಕೌಂಟ್‌ ಪಡೆದುಕೊಂಡಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ ಕೇವಲ 21,999ರೂ. ಬೆಲೆಗೆ ಮಾರಾಟವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಐಕ್ಯೂ 9ಪ್ರೊ 5G

ಐಕ್ಯೂ 9ಪ್ರೊ 5G

ಐಕ್ಯೂ 9 ಪ್ರೊ 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಫೈನಲ್‌ ಡೇಸ್‌ ಸೇಲ್‌ ಪ್ರಯುಕ್ತ 20% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ 74,990ರೂ. ಬದಲಿಗೆ 57,990ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದರಲ್ಲಿ ಬ್ಯಾಂಕ್ ಆಫರ್‌ಗಳು ಕೂಡ ಸೇರಿವೆ. ಇನ್ನು ಸ್ಮಾರ್ಟ್‌ಫೋನ್‌ 6.78 ಇಂಚಿನ LTPO2 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 ಜನ್ 1 ಮೊಬೈಲ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ರೆಡ್ಮಿ K50i 5G

ರೆಡ್ಮಿ K50i 5G

ರೆಡ್ಮಿ K50i 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ 24,999ರೂ. ಬೆಲೆಗೆ ಖರೀದಿಗೆ ಲಭ್ಯವಿದೆ. ಇದರಲ್ಲಿ ಬ್ಯಾಂಕ್‌ ಆಫರ್‌ಗಳು ಕೂಡ ಒಳಗೊಂಡಿವೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 8100 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 67W ಟರ್ಬೊ ಚಾರ್ಜ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಶಿಯೋಮಿ 12 ಪ್ರೊ 5G

ಶಿಯೋಮಿ 12 ಪ್ರೊ 5G

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ ಬ್ಯಾಂಕ್‌ ಆಫರ್‌ಗಳ ಮೂಲಕ ಕೇವಲ 54,999ರೂ. ಬೆಲೆಯಲ್ಲಿ ಮಾರಾಟವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ 6.73 ಇಂಚಿನ WQHD+ 120Hz ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌ ಪಡೆದುಕೊಂಡಿದೆ. ಜೊತೆಗೆ 4600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು,120W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.

ಒನ್‌ಪ್ಲಸ್‌ 10R 5G

ಒನ್‌ಪ್ಲಸ್‌ 10R 5G

ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ 32,999ರೂ. ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ 120Hz IRIS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಹೈಪರ್ ಟಚ್ ಮೋಡ್, ರೀಡಿಂಗ್ ಮೋಡ್, ನೈಟ್ ಮೋಡ್ ಮತ್ತು ಐ ಕಂಫರ್ಟ್ ಮೋಡ್‌ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 8100 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

Best Mobiles in India

English summary
Amazon Great Indian Festival Finale Days sale: Top deals on smartphones
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+