Home
ಸುದ್ದಿಜಾಲ

ಹೊಸ ಫೋನ್‌ ಅನ್ನು ಡಿಸ್ಕೌಂಟ್‌ನಲ್ಲಿ ಖರೀದಿಸಲು ಇದುವೇ ಬೊಂಬಾಟ್‌ ಆಫರ್‌!

ವಿಶೇಷ ದಿನಗಳು ಹಾಗೂ ಹಬ್ಬಗಳು ಬಂದರೆ ಪ್ರಮುಖ ಇ ಕಾಮರ್ಸ್‌ಗಳು ಬೊಂಬಾಟ್‌ ಆಫರ್‌ಗಳನ್ನು ಘೋಷಿಸುತ್ತವೆ. ಸದ್ಯ ಜನಪ್ರಿಯ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ 'ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಸೇಲ್‌' (Amazon Great Indian Festival 2023) ಆಯೋಜಿಸಿದೆ. ಈ ಮಾರಾಟದಲ್ಲಿ ಇತ್ತೀಚಿನ ಹೊಸ ಫೋನ್‌ಗಳಿಗೂ ಸಖತ್‌ ಡಿಸ್ಕೌಂಟ್‌ ತಿಳಿಸಿದೆ.

ಹೌದು, ಅಮೆಜಾನ್‌ ಘೋಷಿಸಿರುವ 'ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಸೇಲ್‌' (Amazon Great Indian Festival 2023) ಇದೇ ಅಕ್ಟೋಬರ್ 8 ರಿಂದ ಪ್ರಾರಂಭವಾಗಲಿದ್ದು, ಒನ್‌ಪ್ಲಸ್‌, ಶಿಯೋಮಿ, ಸ್ಯಾಮ್‌ಸಂಗ್, ಐಕ್ಯೂ, ಟೆಕ್ನೋ ಸೇರಿದಂತೆ ಇತರೆ ಮೊಬೈಲ್‌ ಕಂಪನಿಗಳ ಕೆಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌ ಲಭ್ಯ ಮಾಡಿದೆ.

ಹೊಸ ಫೋನ್‌ ಅನ್ನು ಡಿಸ್ಕೌಂಟ್‌ನಲ್ಲಿ ಖರೀದಿಸಲು ಇದುವೇ ಬೊಂಬಾಟ್‌ ಆಫರ್‌!

ಪ್ರಸಕ್ತ ದಸರಾ ಹಾಗೂ ದೀಪಾವಳಿ ಹಬ್ಬದ ಸಂದರ್ಭದಲ್ಲಿ ನೀವೇನಾದರೂ ಹೊಸದೊಂದು ಸ್ಮಾರ್ಟ್‌ಫೋನ್‌ ಖರೀದಿಸುವ ಯೋಚನೆ ಮಾಡಿದ್ರೆ, ಈ ಅಮೆಜಾನ್‌ ಆಫರ್‌ ಒಮ್ಮೆ ಚೆಕ್‌ ಮಾಡಿ. ಹಾಗಾದರೆ, ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಸೇಲ್‌ನಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿರುವ ಕೆಲವು ಹೊಸ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಫೋನ್‌
ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್‌ನಲ್ಲಿ ಕೆಲಸ ಮಾಡಲಿದೆ.

ಹಾಗೆಯೇ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಮೊಬೈಲ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 6 GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ.

ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್‌ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು 25W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೋ 60 5G ಫೋನ್‌
ರಿಯಲ್‌ಮಿ ನಾರ್ಜೋ 60 5G ಮೊಬೈಲ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ HD+ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ನೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಇದರ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಹೊಂದಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
amazon great indian festival sale: best deals on these new smartphones. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+