ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌: ಸ್ಮಾರ್ಟ್‌ಟಿವಿಗಳಿಗೆ 60% ತನಕ ಡಿಸ್ಕೌಂಟ್‌!

|

ಭಾರತದಲ್ಲಿ ಹಬ್ಬದ ಸೀಸನ್‌ ಪ್ರಯುಕ್ತ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ ನಡೆಸುತ್ತಿದೆ. ಈ ಸೇಲ್‌ನಲ್ಲಿ ಎಲೆಕ್ಟ್ರಾನಿಕ್ಸ್‌ ಪ್ರಾಡಕ್ಟ್‌ಗಳು ಸೇರಿದಂತೆ ಹಲವು ಸ್ಮಾರ್ಟ್‌ ಗ್ಯಾಜೆಟ್ಸ್‌ಗಳ ಮೇಲೆ ವಿಶೇಷ ಡಿಸ್ಕೌಂಟ್‌ಗಳನ್ನು ನೀಡುತ್ತಿದೆ. ಸ್ಮಾರ್ಟ್‌ಟಿವಿಗಳು, ಲ್ಯಾಪ್‌ಟಾಪ್‌ಗಳು, ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವವರಿಗೆ ಇದು ಬೆಸ್ಟ್‌ ಟೈಂ ಆಗಿದೆ. ನಿಮ್ಮ ಊಹೆಗೂ ಮೀರಿದ ಬೆಲೆಯಲ್ಲಿ ಸ್ಮಾರ್ಟ್‌ಟಿವಿಗಳನ್ನು ಮನೆಗೆ ತೆಗೆದುಕೊಂಡು ಬರುವುದಕ್ಕೆ ಉತ್ತಮ ಅವಕಾಶವಾಗಿದೆ.

ಅಮೆಜಾನ್‌

ಹೌದು, ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಸ್ಮಾರ್ಟ್‌ಟಿವಿಗಳ ಮೇಳೆ ಬಿಗ್‌ ಆಫರ್‌ ನೀಡಲಾಗ್ತಿದೆ. ಹೆಚ್ಚುವರಿಯಾಗಿ ಬ್ಯಾಂಕ್‌ ಮತ್ತು ಎಕ್ಸ್‌ಚೇಂಜ್‌ ಆಫರ್‌ ಅನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಎಸ್‌ಬಿಐ ಬ್ಯಾಂಕ್‌ ಕ್ರೆಡಿಟ್‌ ಮೂಲಕ ಖರೀದಿಸುವವರಿಗೆ 10% ಡಿಸ್ಕೌಂಟ್‌ ಕೂಡ ದೊರೆಯಲಿದೆ. ಹಾಗಾದ್ರೆ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಟಿವಿಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ ಸ್ಮಾರ್ಟ್ ಟಿವಿ

ರೆಡ್ಮಿ ಸ್ಮಾರ್ಟ್ ಟಿವಿ

ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ರೆಡ್ಮಿ ಸ್ಮಾರ್ಟ್‌ಟಿವಿ 24,999ರೂ.ಗಳಿಗೆ ಬದಲಾಗಿ 9,899ರೂ.ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಟಿವಿ 32 ಇಂಚಿನ HD ರೆಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,366x768 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 60Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಈ ಸ್ಮಾರ್ಟ್‌ಟಿವಿ ಡಾಲ್ಬಿ ಆಡಿಯೋ ಮತ್ತು DTS-HD ಟೆಕ್ನಾಲಜಿ ಒಳಗೊಂಡ 20W ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ.

LG ಸ್ಮಾರ್ಟ್‌ಟಿವಿ

LG ಸ್ಮಾರ್ಟ್‌ಟಿವಿ

LG ಕಂಪೆನಿಯ ಸ್ಮಾರ್ಟ್‌ಟಿವಿ ಅಮೆಜಾನ್‌ ಸೇಲ್‌ನಲ್ಲಿ ನಿಮಗೆ ಕೇವಲ 11,699ರೂ.ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಟಿವಿಯ ಮೂಲಬೆಲೆ 21,990ರೂ.ಆಗಿದೆ ಅನ್ನೊದನ್ನ ಗಮನಿಸಬೇಕು. ಇನ್ನು ಈ ಸ್ಮಾರ್ಟ್ ಟಿವಿ 32 ಇಂಚಿನ ಹೆಚ್‌ಡಿ ರೆಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಇದು ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ ಮತ್ತು ಹೆಚ್ಚಿನ ಸ್ಟ್ರೀಮಿಂಗ್ ಅಪ್ಲಿಕೇಶನ್‌ಗಳಿಗೆ ಪ್ರವೇಶದೊಂದಿಗೆ webOS ನಲ್ಲಿ ರನ್ ಆಗುತ್ತದೆ.

ಅಮೆಜಾನ್‌ ಬೇಸಿಕ್ಸ್‌ ಫೈರ್‌ ಟಿವಿ

ಅಮೆಜಾನ್‌ ಬೇಸಿಕ್ಸ್‌ ಫೈರ್‌ ಟಿವಿ

ಅಮಜಾನ್‌ಬೇಸಿಕ್ಸ್‌ ಫೈರ್‌ ಟಿವಿ ಅಮೆಜಾನ್‌ ಗ್ರೆಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ 59% ರಿಯಾಯಿತಿಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಟಿವಿ 27,999ರೂ.ಗಳಿಗೆ ಬದಲಾಗಿ 9,899ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಟಿವಿ 32 ಇಂಚಿನ A+ ಗ್ರೇಡ್ LED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ HD-ರೆಡಿ ರೆಸಲ್ಯೂಶನ್ ಮತ್ತು 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಡಿಸ್‌ಪ್ಲೇ ಮಿರರಿಂಗ್, ಪೇರೆಂಟಲ್ ಕಂಟ್ರೋಲ್, ಇನ್‌ಬಿಲ್ಟ್ ಅಲೆಕ್ಸಾದಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್ ಟಿವಿಯು ಡಾಲ್ಬಿ ಆಡಿಯೋ ಮತ್ತು ಡಿಟಿಎಸ್ ಟ್ರೂ ಸರೌಂಡ್ ಟೆಕ್ನಾಲಜಿಯನ್ನು ಹೊಂದಿದೆ.

ಸ್ಯಾಮ್‌ಸಂಗ್‌ AUE60 ಕ್ರಿಸ್ಟಲ್ 4K UHD ಸ್ಮಾರ್ಟ್ ಟಿವಿ

ಸ್ಯಾಮ್‌ಸಂಗ್‌ AUE60 ಕ್ರಿಸ್ಟಲ್ 4K UHD ಸ್ಮಾರ್ಟ್ ಟಿವಿ

ಸ್ಯಾಮ್‌ಸಂಗ್‌ AUE60 ಕ್ರಿಸ್ಟಲ್ 4K UHD ಸ್ಮಾರ್ಟ್ ಟಿವಿ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ 45% ಡಿಸ್ಕೌಂಟ್‌ ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಟಿವಿ 52,900ರೂ.ಗಳಿಗೆ ಬದಲಾಗಿ ಕೇವಲ 26,490ರೂ. ಬೆಲೆಯಲ್ಲಿ ಖರೀದಿಸುವುದಕ್ಕೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಟಿವಿಯು 43 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 3,840x2,160 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಇದು ಪ್ರೈಮ್ ವಿಡಿಯೋ, ಡಿಸ್ನಿ+ ಹಾಟ್‌ಸ್ಟಾರ್ ನಂತಹ ಸ್ಟ್ರೀಮಿಂಗ್ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ಸಹ ನೀಡಲಿದೆ.

ಒನ್‌ಪ್ಲಸ್‌ 43Y1S ಪ್ರೊ

ಒನ್‌ಪ್ಲಸ್‌ 43Y1S ಪ್ರೊ

ಒನ್‌ಪ್ಲಸ್‌ 43Y1S ಪ್ರೊ ಸ್ಮಾರ್ಟ್‌ಟಿವಿ ಅಮೆಜಾನ್‌ ಸೇಲ್‌ನಲ್ಲಿ 33% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಈ ಸ್ಮಾರ್ಟ್‌ಟಿವಿ 39,999ರೂ.ಗಳಿಗೆ ಬದಲಾಗಿ 26,999ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಟಿವಿ 43 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 3,840x2,160 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು ಡಾಲ್ಬಿ ಅಟ್ಮಾಸ್ ತಂತ್ರಜ್ಞಾನದಿಂದ ನಡೆಸಲ್ಪಡುವ 24W ಸ್ಟೀರಿಯೋ ಸ್ಪೀಕರ್‌ಗಳನ್ನು ಹೊಂದಿದೆ.

Best Mobiles in India

English summary
Amazon Great Indian Festival Sale: Discount Offers on Smart TVs

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X