Redmi 13C 5G ಖರೀದಿಸುವ ಗ್ರಾಹಕರಿಗೆ ಗುಡ್‌ನ್ಯೂಸ್; ಈ ಆಫರ್ ನಿಮಗಾಗಿ!
ಪ್ರಸ್ತುತ ಅಮೆಜಾನ್ ಪ್ಲಾಟ್‌ಫಾರ್ಮ್ ಈಗ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 (Amazon Great Indian Festival 2024) ಮಾರಾಟ ಲೈವ್ ಆಗಿದೆ. ಈ ಸೇಲ್ ಜನಪ್ರಿಯ ಮೊಬೈಲ್‌ಗಳು ಸಖತ್ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ರಿಯಾಯಿತಿ ದರದಲ್ಲಿ ಫೋನ್ ಖರೀದಿಸುವ ಗ್ರಾಹಕರನ್ನು ಸೆಳೆಯುತ್ತಿದೆ. ಅಮೆಜಾನ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ಸಂಸ್ಥೆಯ ರೆಡ್ಮಿ 13C 5G (Redmi 13C 5G) ಭರ್ಜರಿ ಆಫರ್ ಪಡೆದಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ರೆಡ್ಮಿ 13C 5G (Redmi 13C 5G) ಸ್ಮಾರ್ಟ್‌ಫೋನ್ ಶೇ. 28% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8GB + 128 GB ಸ್ಟೋರೇಜ್ ವೇರಿಯಂಟ್ 11,499ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್ ಕಾರ್ಡ್ ಮೂಲಕ ಖರೀದಿ ಮಾಡಿದರೆ, ಇನ್ನಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಬಹುದು.

ಅಂದಹಾಗೆ ರೆಡ್ಮಿ 13C 5G ಫೋನ್ 4G RAM + 128GB ವೇರಿಯಂಟ್ ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಹಾಗೂ 8GB + 256GB ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ 13C 5G ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 13C 5G - ಫೀಚರ್ಸ್ ಹೀಗಿವೆ
ರೆಡ್ಮಿ 13C 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ರೆಡ್ಮಿ 13C 5G ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ನೊಂದಿಗೆ ರನ್ ಆಗಲಿದೆ. ಹಾಗೆಯೇ 6GB RAM + 128GB ಹಾಗೂ 8GB RAM+ 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ರೆಡ್ಮಿ 13C 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ 13C 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ.


Click it and Unblock the Notifications








