ಅಮೆಜಾನ್ ಸೇಲ್: ಈ ಅಗ್ಗದ ಫೋನ್‌ಗಳು ಇನ್ನಷ್ಟು ಕಡಿಮೆ ಬೆಲೆಗೆ ಸಿಗಲಿವೆ!
ಜನಪ್ರಿಯ ಇ-ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ವಿಶೇಷ ಸೇಲ್ ಆಯೋಜಿಸುತ್ತಲೇ ಸಾಗಿದೆ. ಭಾರೀ ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಮುಖ್ಯವಾಗಿ ಸ್ಮಾರ್ಟ್ ಗ್ಯಾಡ್ಜೆಟ್ಸ್‌ಗಳಿಗೆ ಸ್ಪೆಷಲ್ ರಿಯಾಯಿತಿ ಸೇಲ್ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಸದ್ಯದ ಸಾಲು ಸಾಲು ಹಬ್ಬಗಳ ಪ್ರಯುಕ್ತ ಅಮೆಜಾನ್ ಇದೀಗ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್ 2021 ಸೇಲ್ ಅನ್ನು ಘೋಷಿಸಿದೆ. ಈ ಹಬ್ಬದ ಸೇಲ್‌ನಲ್ಲಿ ಆಯ್ದ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ರಿಯಾಯಿತಿಗಳನ್ನು ತಿಳಿಸಿದೆ.

ಹೌದು, ಅಮೆಜಾನ್ ಆಯೋಜಿಸಿರುವ ಗ್ರೇಟ್ ಇಂಡಿಯನ್ ಸೇಲ್ 2021 ಅನ್ನು ಘೋಷಿಸಿದೆ. ಈ ಸೇಲ್ ಇದೇ ಅಕ್ಟೋಬರ್ 3ರಂದು ಶುರುವಾಗಲಿದ್ದು, ಭರ್ಜರಿ ಆಫರ್‌ಗಳು ಇರಲಿದೆ ಎಂದು ತಿಳಿಸಿದೆ. ಇನ್ನು ಈ ಗ್ರೇಟ್ ಇಂಡಿಯನ್ ಸೇಲ್ 2021 ಮಾರಾಟವು ಜನಪ್ರಿಯ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಿಗೆ ದೊಡ್ಡ ರಿಯಾಯಿತಿಯನ್ನು ನೀಡುತ್ತದೆ. ಅದರೊಂದಿಗೆ ಕೆಲವು ಅಗ್ಗದ ಫೋನ್‌ಗಳು ಇನ್ನಷ್ಟು ಅಗ್ಗದ ಬೆಲೆಗೆ ಲಭ್ಯವಾಗಲಿವೆ.
ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ರೆಡ್ಮಿ, ರಿಯಲ್‌ಮಿ ಕಂಪನಿಯ ಆಯ್ದ ಕೆಲವು ಅಗ್ಗದ ಪ್ರೈಸ್‌ನ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ದೊರೆಯಲಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದಲೂ ಇನ್‌ಸ್ಟಂಟ್ ರಿಯಾಯಿತಿ ಸಿಗಲಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಬೆಸ್ಟ್ ಡಿಸ್ಕೌಂಟ್ ದರದಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 9A ಫೋನ್
ರೆಡ್ಮಿ 9A ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 19.5:9 ಅನುಪಾತವನ್ನು ಪಡೆದಿದೆ. ರೆಡ್ಮಿ 9A ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 2GB RAM + 32GB ಮತ್ತು 3GB RAM + 32GB ವೇರಿಯಂಟ್‌ನ ಎರಡು ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ರೆಡ್ಮಿ 9A ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರ ಬೇಸ್ ವೇರಿಯಂಟ್ ಬೆಲೆ 6,999ರೂ.ಗಳಿಗೆ ಕಾಣಿಸಿಕೊಂಡಿದೆ.
ರಿಯಲ್‌ಮಿ C11 (2021)
ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್‌ಡ್ರಾಪ್-ಸ್ಟೈಲ್ ನಾಚ್ ವಿನ್ಯಾಸವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 60Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಇದು ಮೈಸ್ಮಾರ್ಟ್ ಪ್ರೈಸ್ ಯುನಿಸಾಕ್ ಎಸ್ಸಿ 9863 SoC ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಬೇಸ್ ವೇರಿಯಂಟ್ 7,299ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ರೆಡ್ಮಿ 9 ಪ್ರೈಮ್ ಫೋನ್
ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 19.5: 9 ರಚನೆಯ ಅನುಪಾತವನ್ನು ಹೊಂದಿದ್ದು, 394 pp ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಜೊತೆಗೆ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. 3D ಯುನಿಬಾಡಿ ವಿನ್ಯಾಸವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದನ್ನು ಮಾಲಿ-ಜಿ 52 ಜಿಪಿಯು ಬೆಂಬಲಿಸುತ್ತದೆ. ಹಾಗೇಯೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಬೇಸ್ ವೇರಿಯಂಟ್ ಫೋನ್ 10,499ರೂ. ಆಗಿದೆ.
ರೆಡ್ಮಿ 9 ಫೋನ್
ರೆಡ್ಮಿ 9 ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ಮಾದರಿಯಲ್ಲಿದ್ದು, ಸುತ್ತಲೂ ತೆಳುವಾದ ಅಂಚನ್ನು ಹೊಂದಿದೆ. ರೆಡ್ಮಿ 9 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ಅ ನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB ಮತ್ತು 3GB RAM ಹಾಗೂ 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಆರಂಭಿಕ ವೇರಿಯಂಟ್ ದರವು 9.499ರೂ. ಆಗಿದೆ.


Click it and Unblock the Notifications