ಫ್ಲಿಪ್ ಮಾದರಿಯ ಈ ಆಕರ್ಷಕ ಫೋನಿನ ಬೆಲೆಯಲ್ಲಿ ಈಗ ಭಾರೀ ಇಳಿಕೆ!
ಇ ಕಾಮರ್ಸ್ ದೈತ್ಯ ತಾಣ ಅಮೆಜಾನ್ ಇದೀಗ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಆಯೋಜಿಸಿ ಗ್ರಾಹಕರ ಗಮನ ಸೆಳೆದಿದೆ. ಈ ಮಾರಾಟ ಮೇಳದಲ್ಲಿ ಕೆಲವು ಆಯ್ದ ಮೊಬೈಲ್‌ಗಳು ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಮಡಚುವ ಮಾದರಿಯ ಮೊಟೊರೊಲಾ ರೇಜರ್ 40 ಅಲ್ಟ್ರಾ ಸಹ ಗ್ರಾಹಕರು ಹುಬ್ಬೇರಿಸಿ ನೋಡುವಂತಹ ರಿಯಾಯಿತಿ ಪಡೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೊಟೊರೊಲಾ ರೇಜರ್ 40 ಅಲ್ಟ್ರಾ ಮೊಬೈಲ್ ಶೇ. 42% ರಷ್ಟು ನೇರ ರಿಯಾಯಿತಿ ಹೊಂದಿದೆ. ಈ ಫೋನಿನ 8GB RAM + 256GB ಸ್ಟೋರೇಜ್ ವೇರಿಯಂಟ್ 69,999ರೂ. ಗಳ ಬೆಲೆಯಲ್ಲಿ ಲಭ್ಯ. ಹಾಗೆಯೇ ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಬ್ಯಾಂಕ್ ಡಿಸ್ಕೌಂಟ್ ಪಡೆದುಕೊಂಡರೆ, ಇನ್ನಷ್ಟು ಆಫರ್ ಬೆಲೆಗೆ ಫೋನ್ ಖರೀದಿಸಲು ಅವಕಾಶ ಇದೆ.

ಈ ಮೊಬೈಲ್ ಸ್ನಾಪ್‌ಡ್ರಾಗನ್ 8+ ಜೆನ್ 1 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಹಾಗೆಯೇ 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ 3800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ ರೇಜರ್ 40 ಅಲ್ಟ್ರಾಮೊಬೈಲ್‌ನ ಇತರೆ ಫೀಚರ್ಸ್ ಯಾವುವು ಎಂಬುದನ್ನು ತಿಳಿಯೋಣ ಬನ್ನಿರಿ.

ಮೊಟೊರೊಲಾ ರೇಜರ್ 40 ಅಲ್ಟ್ರಾ - ಫೀಚರ್ಸ್
ಮೊಟೊರೊಲಾ ಸಂಸ್ಥೆಯ ಈ ಫೋನ್ ಫೋಲ್ಡಬಲ್ ಮಾದರಿಯ ಡಿಸ್‌ಪ್ಲೇ ಹೊಂದಿದ್ದು, ಇದರ ಮೇನ್ ಡಿಸ್‌ಪ್ಲೇ 6.9 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದೆ. ಇದರ ಡಿಸ್‌ಪ್ಲೇಯು 165Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿದ್ದು, HDR10+ ಹಾಗೂ 1400 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದುಕೊಂಡಿದೆ.
ಇನ್ನು ಇದರ ಕವರ್ ಡಿಸ್‌ಪ್ಲೇ 3.6 ಇಂಚಿನ ಕ್ವಿಕ್‌ವ್ಯೂ poOLED ಡಿಸ್‌ಪ್ಲೇ ಹೊಂದಿದ್ದು, ಈ ಸ್ಕ್ರೀನ್ 1000 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್ 1 SoC ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದೆ. ಈ ಫೋನ್ 8GB RAM ಮತ್ತು 256GB ಹಾಗೂ 12GB RAM ಮತ್ತು 512GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಪಡೆದುಕೊಂಡಿದೆ.

ಇನ್ನು ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 12 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ದ್ವಿತೀಯ ಕ್ಯಾಮೆರಾ 13 ಮೆಗಾ ಪಿಕ್ಸಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಪಡೆದಿದ್ದು, ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಇದು 3800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಲಭ್ಯ.
ಮೊಟೊರೊಲಾ ರೇಜರ್ 40 - ಫೀಚರ್ಸ್
ಮೊಟೊರೊಲಾ ರೇಜರ್ 40 ಫೋನ್ 6.9 ಇಂಚಿನ ಮೇನ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಮೊಬೈಲ್ ಕವರ್ ಡಿಸ್‌ಪ್ಲೇ 1.5 ಇಂಚಿನ ರಚನೆ ಪಡೆದಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, ಎರಡು ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಜೊತೆಗೆ ಈ ಫೋನ್ 4200 mAh ಸಾಮರ್ಥ್ಯದ ಬ್ಯಾಟರಿ ಶಕ್ತಿ ಇದೆ.


Click it and Unblock the Notifications








