Home
ಸುದ್ದಿಜಾಲ

ಅಮೆಜಾನ್‌ನಿಂದ ಭರ್ಜರಿ ಆಫರ್‌!..ಈ ಅಗ್ಗದ ಫೋನಿಗೆ ಈಗ ಸಖತ್ ಡಿಸ್ಕೌಂಟ್‌!

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್ ಇದೀಗ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಆಯೋಜಿಸಿದೆ. ಈ ಮಾರಾಟ ಮೇಳದಲ್ಲಿ ಜನಪ್ರಿಯ ಫೋನ್‌ಗಳು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಟೆಕ್ನೋ ಸ್ಪಾರ್ಕ್‌ ಗೋ (2024) ಮೊಬೈಲ್‌ ಕೂಡಾ ಬೊಂಬಾಟ್‌ ಡಿಸ್ಕೌಂಟ್‌ ಬೆಲೆಯನ್ನು ಪಡೆದಿದೆ.

ಹೌದು, ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಟೆಕ್ನೋ ಸಂಸ್ಥೆಯ ಟೆಕ್ನೋ ಸ್ಪಾರ್ಕ್‌ ಗೋ (2024) ಮೊಬೈಲ್‌ ಶೇ. 11% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 64GB ROM ಸ್ಟೋರೇಜ್‌ ವೇರಿಯಂಟ್‌ 6,699ರೂ. ಗಳ ದರದಲ್ಲಿ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಲಭ್ಯ ಇರುವ ಇತರೆ ಆಫರ್‌ ಹಾಗೂ ಬ್ಯಾಂಕ್‌ ರಿಯಾಯಿತಿ ಪಡೆದುಕೊಂಡರೆ, ಇನ್ನಷ್ಟು ಅಗ್ಗದ ಬೆಲೆಗೆ ಫೋನ್‌ ಖರೀದಿಸಬಹುದು.

ಅಮೆಜಾನ್‌ನಿಂದ ಭರ್ಜರಿ ಆಫರ್‌!..ಈ ಅಗ್ಗದ ಫೋನಿಗೆ ಈಗ ಸಖತ್ ಡಿಸ್ಕೌಂಟ್‌!

ಈ ಮೊಬೈಲ್‌ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ ಪವರ್‌ ಒಳಗೊಂಡಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್‌ 13 ಗೋ ಎಡಿಷನ್‌ ಓಎಸ್‌ ಸಪೋರ್ಟ್‌ ಹೊಂದಿದೆ. ಅನ್ನು ಈ ಮೊಬೈಲ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಒಳಗೊಂಡಿದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್‌ ಗೋ (2024) ಮೊಬೈಲ್‌ನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಪಾರ್ಕ್‌ ಗೋ (2024) ಫೀಚರ್ಸ್‌ ಮಾಹಿತಿ

ಟೆಕ್ನೋ ಸಂಸ್ಥೆಯ ಈ ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಸಪೋರ್ಟ್‌ ಇದ್ದು, ಪಾಂಡ ಸ್ಕ್ರೀನ್‌ ಪ್ರೊಟೆಕ್ಷನ್ ಪಡೆದಿದೆ. ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಕಾರ್ಯ ನಿರ್ವಹಿಸುವ ಮತ್ತು ಅಧಿಸೂಚನೆಗಳನ್ನು ತೋರಿಸುವ ಡೈನಾಮಿಕ್ ಪೋರ್ಟ್ ಫೀಚರ್ಸ್‌ ಅನ್ನು ಒಳಗೊಂಡಿದೆ.

ಅಮೆಜಾನ್‌ನಿಂದ ಭರ್ಜರಿ ಆಫರ್‌!..ಈ ಅಗ್ಗದ ಫೋನಿಗೆ ಈಗ ಸಖತ್ ಡಿಸ್ಕೌಂಟ್‌!

ಟೆಕ್ನೋ ಸ್ಪಾರ್ಕ್‌ ಗೋ (2024) ಮೊಬೈಲ್‌ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ ಪವರ್‌ ಪಡೆದಿದ್ದು, ಆಂಡ್ರಾಯ್ಡ್‌ 13 (Go Edition) ಆಧಾರಿತ HiOS 13 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಅಲ್ಲದೇ ಇದು 8GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಪಡೆದಿದೆ.

ಇದರೊಂದಿಗೆ ಬಳಕೆದಾರರಿಗೆ ಬಳಕೆಯಾಗದ ಸಂಗ್ರಹಣೆಯನ್ನು ವರ್ಚುವಲ್ RAM ಆಗಿ ಬಳಸಿಕೊಳ್ಳಲು ಅನುಮತಿಸುತ್ತದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟೆಕ್ನೋ ಸ್ಪಾರ್ಕ್‌ ಗೋ (2024) ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಡ್ಯುಯಲ್ ಫ್ಲ್ಯಾಷ್ ಜೊತೆಗೆ AI ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಟೆಕ್ನೋ ಕಂಪನಿಯ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಇದು 10W ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದಿದೆ.

ಇನ್ನು ಮೊಬೈಲ್‌ ಬಯೋಮೆಟ್ರಿಕ್ ಅನ್‌ಲಾಕಿಂಗ್‌ಗಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಹಾಗೆಯೇ DTS ಸೌಂಡ್ ತಂತ್ರಜ್ಞಾನದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳ ಆಯ್ಕೆ ಪಡೆದಿದೆ.

ಅಂದಹಾಗೆ ಈ ಮೊಬೈಲ್‌ ಬೇಸ್ ಮಾಡೆಲ್‌ 3GB RAM + 64GB ಸ್ಟೋರೇಜ್, 8GB RAM + 64GB ಸ್ಟೋರೇಜ್‌ ಮತ್ತು 8GB RAM + 128GB ಸ್ಟೋರೇಜ್ ಮಾದರಿಗಳ ಆಯ್ಕೆ ಪಡೆದಿದೆ. ಅಲ್ಲದೇ ಇದು ಗ್ರಾವಿಟಿ ಬ್ಲಾಕ್ ಮತ್ತು ಮಿಸ್ಟರಿ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Amazon Great Republic Day Sale: TECNO Spark Go 2024 received big price drop. check out other details and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+