Just In
- 26 min ago
ಟ್ರಾಯ್ನ ಈ ಉಪಯುಕ್ತ ಸೇವೆಗೆ ಜಿಯೋ ಮತ್ತು ಏರ್ಟೆಲ್ನಿಂದ ಭಾರಿ ವಿರೋಧ! ಕಾರಣ ಏನು?
- 1 hr ago
2023ರಲ್ಲಿ ಈ ಸ್ಮಾರ್ಟ್‌ಫೋನ್ ಸೌಂಡ್ ಮಾಡೋದು ಪಕ್ಕಾ! ಏನೆಲ್ಲಾ ನಿರೀಕ್ಷೆ?
- 2 hrs ago
ಈ ಡಿವೈಸ್ಗಳನ್ನು ನೋಡಿದ್ರೆ, ನೀವು ಖಂಡಿತಾ ಹುಬ್ಬೇರಿಸ್ತೀರಾ!..ಬೆಲೆಯೂ ಕಡಿಮೆ!
- 4 hrs ago
ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್! ಇನ್ಮುಂದೆ ಈ ಕೆಲಸ ಇನ್ನು ಸುಲಭ!
Don't Miss
- News
Hampi Utsav 2023: ಹಂಪಿ ಉತ್ಸವದ ಲಾಂಛನ ಬಿಡುಗಡೆ, ಹೀಗಿದೆ ಐತಿಹಾಸಿಕ ನಗರಿಯ ಉತ್ಸವದ ಲೋಗೋ
- Automobiles
ಜಾಗತಿಕವಾಗಿ ಮಿಂಚಿದ ಟೆಸ್ಲಾ ಕಾರು ಹೊಂದಿರುವ ಭಾರತೀಯ ಸೆಲಬ್ರಿಟಿಗಳು...
- Lifestyle
ಸತ್ತು ಸ್ವರ್ಗಕ್ಕೆ ಹೋಗಿ ಮತ್ತೆ ಬದುಕಿ ಬಂದ ಪೆರ್ರಿ ಎಂಬ ವ್ಯಕ್ತಿಯ ಕತೆ, ಅಚ್ಚರಿಯಾದರೂ ಇದು ಸತ್ಯ
- Sports
IND vs NZ: ಮೊದಲ ODI ಪಂದ್ಯ ಗೆದ್ದರೂ ಶೇ.60ರಷ್ಟು ದಂಡ ಕಟ್ಟಿದ ರೋಹಿತ್ ಶರ್ಮಾ ಪಡೆ
- Movies
Puttakkana Makkalu: ಆಟೋ ಮಾರಿದ ಪುಟ್ಟಕ್ಕ; ಮಕ್ಕಳಿಂದ ಮುಚ್ಚಿಟ್ಟ ಗುಟ್ಟು ರಟ್ಟಾಗಿಬಿಡುತ್ತಾ?
- Finance
Jeevan Azad: 25,000 ರೂ ಹೂಡಿಕೆ ಮಾಡಿ 5 ಲಕ್ಷ ರೂ ಪಡೆಯಿರಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಮೆಜಾನ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ ಡಿಸ್ಕೌಂಟ್!..ಭಾರೀ ಉಳಿತಾಯ!
ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಇದೀಗ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ (Amazon Great Republic Day 2023) ಸೇಲ್ ಅನ್ನು ಪ್ರಾರಂಭಿಸಿದೆ. ಈ ವಿಶೇಷ ಮಾರಾಟ ಮೇಳದಲ್ಲಿ ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳ ಆಯ್ದ ಸ್ಮಾರ್ಟ್‌ಫೋನ್‌ಗಳು ಭಾರೀ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯವಾಗಲಿವೆ. ಇದರೊಂದಿಗೆ ಕೆಲವು ಬ್ಯಾಂಕ್‌ಗಳಿಂದ ಗ್ರಾಹಕರಿಗೆ ಮತ್ತಷ್ಟು ರಿಯಾಯಿತಿ ಸಹ ದೊರೆಯುತ್ತವೆ.

ಹೌದು, ಬಹುನಿರೀಕ್ಷಿತ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಮಾರಾಟ ಚಾಲ್ತಿ ಇದೆ. ಈ ಸೇಲ್‌ನಲ್ಲಿ ರೆಡ್ಮಿ, ಶಿಯೋಮಿ, ಸ್ಯಾಮ್‌ಸಂಗ್, ಪೊಕೊ, ಐಫೋನ್ ಸೇರಿದಂತೆ ಇತರೆ ಫೋನ್‌ಗಳು ಸಹ ಆಕರ್ಷಕ ರಿಯಾಯಿತಿ ಪಡೆದಿವೆ. ಗಣರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿರುವ ಈ ಮಾರಾಟವು ಇದೇ ಜನವರಿ 20 ರವರೆಗೆ ಚಾಲ್ತಿ ಇರಲಿದೆ. ಹಾಗಾದರೆ ಈ ಮಾರಾಟ ಮೇಳದಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಆಫರ್‌ನಲ್ಲಿ 14,999ರೂ. ಗಳಿಗೆ ಖರೀದಿಗೆ ಲಭ್ಯ.

ಒಪ್ಪೊ A31 ಸ್ಮಾರ್ಟ್‌ಫೋನ್
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಹಾಗೆಯೇ ಇದು 4GB + 64 GB ವೇರಿಯಂಟ್ ಮತ್ತು 6GB + 128 GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆ ಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12 ಎಂಪಿ ಸೆನ್ಸಾರ್‌ನಲ್ಲಿದೆ. ಈ ಸ್ಮಾರ್ಟ್‌ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒದಗಿಸಲಿದೆ. ಸೇಲ್‌ನಲ್ಲಿ 12,490ರೂ. ಗಳಿಗೆ ಖರೀದಿಸಬಹುದು.
ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. ಕೊಡುಗೆಯಲ್ಲಿ 25,999ರೂ. ಗೆ ಲಭ್ಯ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್ ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಆಫರ್ ಬೆಲೆ 13,499ರೂ. ಆಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470