Home
ಸುದ್ದಿಜಾಲ

ಈ ಅಗ್ಗದ 5G ಫೋನಿಗೆ ಈಗ ಸಖತ್‌ ಡಿಸ್ಕೌಂಟ್‌; ಆಫರ್‌ ಬೆಲೆ ತಿಳಿದ್ರೆ, ವಾವ್‌ ಅಂತೀರಾ!

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ತಾಣವು ಇದೀಗ ಅಮೆಜಾನ್‌ ಗ್ರೇಟ್‌ ಸಮ್ಮರ್ ಸೇಲ್‌ ಮಾರಾಟ ಮೇಳವನ್ನು ಶುರು ಮಾಡಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಇನ್ನು ಈ ಸ್ಪೆಷಲ್‌ ಮಾರಾಟ ಮೇಳವು ಇದೇ ಮೇ 7 ರ ವರೆಗೂ ಲೈವ್‌ ಇರಲಿದೆ. ಸೇಲ್‌ನಲ್ಲಿ ಮೊಬೈಲ್‌ಗಳಿಗೆ ಬೊಂಬಾಟ್‌ ರಿಯಾಯಿತಿ ಲಭ್ಯ ಇದ್ದು, ಪೊಕೊ M6 5G ಸ್ಮಾರ್ಟ್‌ಫೋನ್‌ ಸಹ ಬೆಸ್ಟ್‌ ಆಫರ್‌ ಪಡೆದಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಈಗ ಗ್ರೇಟ್‌ ಸಮ್ಮರ್ ಸೇಲ್‌ ಲೈವ್ ಇದ್ದು ಈ ಮಾರಾಟದಲ್ಲಿ ಪೊಕೊ M6 5G ಮೊಬೈಲ್‌ ಶೇ 29% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 4GB RAM + 128GB ವೇರಿಯಂಟ್‌ 9,249ರೂ. ಗಳ ಡಿಸ್ಕೌಂಟ್‌ ದರದಲ್ಲಿ ಖರೀದಿಸಬಹುದಾಗಿದೆ. ಹಾಗೆಯೇ ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್‌ ಕೊಡುಗೆ ಪಡೆದುಕೊಂಡರೆ, ಇನ್ನಷ್ಟು ಡಿಸ್ಕೌಂಟ್‌ನಲ್ಲಿ ಈ ಫೋನ್‌ ಖರೀದಿಸಬಹುದು.

ಈ ಅಗ್ಗದ 5G ಫೋನಿಗೆ ಈಗ ಸಖತ್‌ ಡಿಸ್ಕೌಂಟ್‌; ಬೆಲೆ ತಿಳಿದ್ರೆ, ವಾವ್‌ ಅಂತೀರಾ

ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಇದಲ್ಲದೇ ಈ ಮೊಬೈಲ್‌ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಒಳಗೊಂಡಿದೆ. ಹಾಗಾದರೇ ಪೊಕೊ M6 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ M6 5G ಮೊಬೈಲ್‌ ಫೀಚರ್ಸ್‌

ಪೊಕೊ M6 5G ಮೊಬೈಲ್‌ 6.74 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಸಪೋರ್ಟ್ ಮಾಡಲಿದ್ದು, 600nits ಗರಿಷ್ಠ ಬ್ರೈಟ್‌ನೆಸ್‌ ಒದಗಿಸಲಿದೆ. ಇನ್ನು ಡಿಸ್‌ಪ್ಲೇ 180Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಬೆಂಬಲ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಒಳಗೊಂಡಿದೆ.

ಪೊಕೊ M6 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಆಧಾರಿತ MIUI 14 ನಲ್ಲಿ ಕೆಲಸ ಮಾಡುತ್ತದೆ. ಇದರ ಜೊತೆಗೆ 4GB RAM ಮತ್ತು 128GB, 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಇದೆ.

ಪೊಕೊ M6 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಇನ್ನು ಕ್ಯಾಮೆರಾ ಜೊತೆಗೆ PDAF ಮತ್ತು LED ಫ್ಲ್ಯಾಷ್ ಅನ್ನು ಆಯ್ಕೆ ಕೂಡಾ ಲಭ್ಯ. ಇನ್ನು ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಪೊಕೊ M6 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಅನ್ನು ಹೊಂದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 5, ಡ್ಯುಯಲ್ ಸಿಮ್, 5G, ಬ್ಲೂಟೂತ್ 5.3, ಮತ್ತು GPS ಸಪೋರ್ಟ್‌ ಒಳಗೊಂಡಿದೆ.

ಪೊಕೊ M6 5G ಫೋನ್‌ 4GB RAM + 128GB, 6GB RAM + 128GB ಹಾಗೂ 8GB RAM + 256GB ಸ್ಟೋರೇಜ್‌ ಆಯ್ಕೆಯಲ್ಲಿ ಗ್ರಾಹಕರು ಖರೀದಿಸಬಹುದು. ಇನ್ನು ಈ ಮೊಬೈಲ್‌ ಓರಿಯನ್ ಬ್ಲೂ ಮತ್ತು ಗ್ಯಾಲಕ್ಟಿಕ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಸಿಗಲಿದ್ದು, ಖರೀದಿದಾದರು ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಕೊಳ್ಳಬಹುದು.

Best Mobiles in India

English summary
Amazon Great Summer Sale: Biggest Price Cut on POCO M6 5G Phone. check out offer, price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+