ಒನ್‌ಪ್ಲಸ್‌ನ ಈ 5G ಫೋನ್‌ಗೆ ಭರ್ಜರಿ ಡಿಸ್ಕೌಂಟ್!..ಆಫರ್ ಬೆಲೆ ಎಷ್ಟು?
ಒನ್‌ಪ್ಲಸ್ ಮೊಬೈಲ್ ಸಂಸ್ಥೆ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ 'ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G' ಸ್ಮಾರ್ಟ್‌ಫೋನ್ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಈಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದ್ದು, ಹೀಗಾಗಿ ಭಾರೀ ರಿಯಾಯಿತಿ ಬೆಲೆಗೆ ಗ್ರಾಹಕರು ಈ ಫೋನ್ ಖರೀದಿಸಬಹುದಾಗಿದೆ.
ಹೌದು, ಅಮೆಜಾನ್ ಆಯೋಜಿಸಿರುವ ಸಮ್ಮರ್ ಸೇಲ್ ನಲ್ಲಿ ಟೆಕ್ನೋ ತನ್ನ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G (OnePlus Nord CE 2 Lite 5G) ಸ್ಮಾರ್ಟ್‌ಫೋನ್ ಆಕರ್ಷಕ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 128GB ಸ್ಟೋರೇಜ್‌ನ ವೇರಿಯಂಟ್ 18,499ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಖರೀದಿಸಬಹುದಾಗಿದೆ. ಇತರೆ ಕೊಡುಗೆ ಸೇರಿ 16,999ರೂ. ಗಳಿಗೆ ಪಡೆಯಬಹುದು. ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 202ppi ಪಿಕ್ಸೆಲ್ ಸಾಂದ್ರತೆ ಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಗೇಮಿಂಗ್ ಗಾಗಿ 240Hz ರೀಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಪವರ ಯಾವುದು : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
ಮೆಮೊರಿ ಮತ್ತು ಕಲರ್ ಆಯ್ಕೆ : ಭಾರತದಲ್ಲಿ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಹಾಗೂ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆ ಪಡೆದಿವೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಹಾಗೂ ಬ್ಲೂ ಬಣ್ಣ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








