ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಫೋನಿಗೆ ಬಿಗ್ ಆಫರ್!..ಖರೀದಿಗೆ ಸೂಕ್ತ ಸಮಯ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯ A ಸರಣಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ 'ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G' ಸ್ಮಾರ್ಟ್‌ಫೋನ್ ಬೊಂಬಾಟ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಈಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದ್ದು, ಹೀಗಾಗಿ ಭಾರೀ ರಿಯಾಯಿತಿ ಬೆಲೆಗೆ ಗ್ರಾಹಕರು ಈ ಫೋನ್ ಖರೀದಿಸಬಹುದಾಗಿದೆ.
ಹೌದು, ಅಮೆಜಾನ್ ಆಯೋಜಿಸಿರುವ ಸಮ್ಮರ್ ಸೇಲ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಆಕರ್ಷಕ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM ಸ್ಟೋರೇಜ್‌ನ ವೇರಿಯಂಟ್ 41,720 ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಬ್ಯಾಂಕ್ ಆಫರ್ ಸಹ ಲಭ್ಯವಾಗಲಿದೆ.

ಇನ್ನು ಈ ಫೋನ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಬಲ ಯಾವುದು : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ನಾಲ್ಕು ವರ್ಷಗಳವರೆಗೆ ಆಂಡ್ರಾಯ್ಡ್ OS ಅಪ್‌ಗ್ರೇಡ್‌ಗಳು ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಕ್ಯಾಮೆರಾ ಸೆನ್ಸಾರ್ ಎಷ್ಟು : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ 25W ವೇಗದ ಚಾರ್ಜಿಂಗ್ ಬೆಂಬಲಿಸುವ 5,000 mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈಯನ್ನು ಬೆಂಬಲಿಸಲಿದೆ.
ಮೆಮೊರಿ ಮತ್ತು ಕಲರ್ ಆಯ್ಕೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಬೆಲೆ 8GB + 128GB ಮತ್ತು 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ ಬ್ಲೂ, ಗ್ರೇ ಹಾಗೂ ಮಿಂಟ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








