ಈ ಹೈ ಎಂಡ್ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಉಳಿತಾಯ ಪಕ್ಕಾ!
ಟೆಕ್ನೋ ಮೊಬೈಲ್ ಸಂಸ್ಥೆಯು ಇತ್ತೀಚಿಗೆ ಹೊಸದಾಗಿ 'ಟೆಕ್ನೋ ಫ್ಯಾಂಟಮ್ X2 5G' ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಫೋನ್ ಈಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ಭರ್ಜರಿ ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ.
ಹೌದು, ಅಮೆಜಾನ್ ಆಯೋಜಿಸಿರುವ ಸಮ್ಮರ್ ಸೇಲ್ ನಲ್ಲಿ ಟೆಕ್ನೋ ತನ್ನ ಟೆಕ್ನೋ ಫ್ಯಾಂಟಮ್ X2 5G (Tecno Phantom X2 5G) ಸ್ಮಾರ್ಟ್‌ಫೋನ್ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 256 GB ಸ್ಟೋರೇಜ್‌ನ ವೇರಿಯಂಟ್ 49,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಆಫರ್ ಸಹ ಲಭ್ಯವಾಗಲಿವೆ.

ಈ ಸ್ಮಾರ್ಟ್‌ಫೋನ್ 5,160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ಪವರ್ ಅನ್ನು ಸಹ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ರಚನೆ : ಟೆಕ್ನೋ ಫ್ಯಾಂಟಮ್ X2 5G ಸ್ಮಾರ್ಟ್‌ಫೋನ್ 6.8 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 93.3% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120 Hz ರಿಫ್ರೆಶ್ ರೇಟ್ ಬೆಂಬಲವನ್ನು ಒಳಗೊಂಡಿದೆ. ಇದು ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.
ಪ್ರೊಸೆಸರ್ ಪವರ್ ಯಾವುದು : ಟೆಕ್ನೋ ಫ್ಯಾಂಟಮ್ X2 5G ಸ್ಮಾರ್ಟ್‌ಫೋನ್ 4nm ಮೀಡಿಯಾಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಜೊತೆಗೆ ಮಾಲಿ-G710 MC10 GPU ಸಪೋರ್ಟ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ HiOS 12.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8 GB RAM ಮತ್ತು 256 GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್ ಹೇಗಿದೆ : ಟೆಕ್ನೋ ಫ್ಯಾಂಟಮ್ X2 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ , ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಟೆಕ್ನೋ ಫ್ಯಾಂಟಮ್ X2 5G ಸ್ಮಾರ್ಟ್‌ಫೋನ್ 5,160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 45W ವೇಗದ ಚಾರ್ಜಿಂಗ್‌ನೊಂದಿಗೆ ಬರುತ್ತದೆ. ಇದರಿಂದ ಫೋನ್ ಅನ್ನು ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್ ಮಾಡಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 2.4G, 5G & Wi-Fi 6, ಬ್ಲೂಟೂತ್ 5.3, GPS, OTG, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ದಿಕ್ಸೂಚಿ, ಆರು ಆಕ್ಸಿಸ್ ಗೈರೋ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications







