ರೆಡ್ಮಿ ಮೊಬೈಲ್ ಖರೀದಿಸುವ ಗ್ರಾಹಕರೇ ಗಮನಿಸಿ!..ಈ ಫೋನಿಗೆ ಭರ್ಜರಿ ಡಿಸ್ಕೌಂಟ್!
ಬಜೆಟ್ ಬೆಲೆಯಲ್ಲಿ ಹೊಸ ರೆಡ್ಮಿ ಮೊಬೈಲ್ ಖರೀದಿಸುವ ಗ್ರಾಹಕರೇ ಇಲ್ಲಿ ಗಮನಿಸಿ. ಅಮೆಜಾನ್ ಆಯೋಜಿಸಿರುವ ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ರೆಡ್ಮಿ 10A ಸ್ಮಾರ್ಟ್‌ಫೋನ್ ಬೊಂಬಾಟ್ ಡಿಸ್ಕೌಂಟ್ ಪಡೆದಿದೆ. ಈ ಮೂಲಕ ಅಗ್ಗದ ಪ್ರೈಸ್ ಟ್ಯಾಗ್ ವಿಭಾಗದಲ್ಲಿ ರೆಡ್ಮಿ 10A ಸ್ಮಾರ್ಟ್‌ಫೋನ್ ಮತ್ತಷ್ಟು ಆಕರ್ಷಕ ಎನಿಸಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಇದೇ ಮೇ 4 ರಿಂದ ಗ್ರೇಟ್ ಸಮ್ಮರ್ ಸೇಲ್ ಪ್ರಾರಂಭ. ಈ ಮಾರಾಟದಲ್ಲಿ ರೆಡ್ಮಿ 10A ಸ್ಮಾರ್ಟ್‌ಫೋನ್ 8,599 ರೂ. ಗಳ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯವಾಗಲಿದೆ. ಕೆಲವು ಆಯ್ದ ಬ್ಯಾಂಕ್ ಕೊಡುಗೆಯಿಂದಾಗಿ ಈ ಫೋನ್ 7,849ರೂ. ಗಳಿಗೆ ಖರೀದಿಸಬಹುದಾಗಿದೆ.

ರೆಡ್ಮಿ 10A ಸ್ಮಾರ್ಟ್‌ಫೋನ್ 4GB RAM + 64 GB ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್ ಪವರ್ ಪಡೆದಿದೆ. ಹಾಗೆಯೇ ಇದು ಬ್ಲ್ಯಾಕ್, ಬ್ಲೂ ಹಾಗೂ ಗ್ರೇ ಬಣ್ಣಗಳ ಆಯ್ಕೆ ಪಡೆದಿದೆ. ಹಾಗಾದರೆ ರೆಡ್ಮಿ 10A ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ರೆಡ್ಮಿ 10A ಸ್ಮಾರ್ಟ್‌ಫೋನ್ 720×1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ವಿನ್ಯಾಸವನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು : ರೆಡ್ಮಿ 10A ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಆಧಾರಿತ MIUI 12.5 ಕಸ್ಟಮ್ ಸ್ಕಿನ್ ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM + 32GB ಮತ್ತು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ.
ಕ್ಯಾಮೆರಾ ಸೆನ್ಸಾರ್ ವಿಶೇಷ : ರೆಡ್ಮಿ 10A ಸ್ಮಾರ್ಟ್‌ಫೋನ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ LED ಫ್ಲ್ಯಾಷ್‌ನೊಂದಿಗೆ ಸಂಯೋಜಿಸಲ್ಪಟ್ಟಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ : ರೆಡ್ಮಿ 10A ಸ್ಮಾರ್ಟ್‌ಫೋನ್ 10W ಚಾರ್ಜಿಂಗ್ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 b/g/n, ಬ್ಲೂಟೂತ್ 5, ಮತ್ತು GPS ಹಾಗೂ ಮೈಕ್ರೋ-ಯುಎಸ್‌ಬಿ ಪೋರ್ಟ್ ಜೊತೆಗೆ 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.
ಕಲರ್ ಹಾಗೂ ಮೆಮೊರಿ : ಭಾರತದಲ್ಲಿ ರೆಡ್ಮಿ 10A ಸ್ಮಾರ್ಟ್‌ಫೋನ್ 3 GB RAM + 32 GB ಸ್ಟೋರೇಜ್ ಮತ್ತು 4 GB + 64 GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ ಚಾರ್ಕೋಲ್ ಬ್ಲ್ಯಾಕ್, ಸೀ ಬ್ಲೂ ಮತ್ತು ಸ್ಲೇಟ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








