ಸ್ಮಾರ್ಟ್‌ಫೋನ್ ಖರೀದಿಸುವವರೇ ಸ್ವಲ್ಪ ತಾಳಿ! ಅಮೆಜಾನ್‌ನಲ್ಲಿ ಸಿಗಲಿದೆ ಬೊಂಬಾಟ್ ಆಫರ್!
ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಗ್ರೇಟ್ ಸಮ್ಮರ್ ಸೇಲ್ ಅನ್ನು ಘೋಷಣೆ ಮಾಡಿದೆ. ಈ ಸೇಲ್ ಇದೇ ಮೇ 4 ರಿಂದ ಪ್ರಾರಂಭವಾಗಲಿದ್ದು, ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಬಿಗ್ ಆಫರ್ ನೀಡುವುದಾಗಿ ಹೇಳಿದೆ. ಇನ್ನು ಈ ಸೇಲ್‌ಸಮಯದಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಮೇಲೆ ಊಹಿಸಲಾಗದ ಡಿಸ್ಕೌಂಟ್ ದೊರೆಯುವುದು ಪಕ್ಕಾ ಆಗಿದೆ.
ಹೌದು, ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್ ಪ್ರಿಯರಿಗೆ ಭರ್ಜರಿ ಆಫರ್ ಸಿಗಲಿದೆ. ಈ ಸಮಯದಲ್ಲಿ ಅಮೆಜಾನ್ ರಿಯಲ್‌ಮಿ, ಸ್ಯಾಮ್‌ಸಂಗ್, ಆಪಲ್, ಐಕ್ಯೂ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿ ಲಭ್ಯವಾಗಲಿದೆ. ಹಾಗಾದ್ರೆ ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ದರದಲ್ಲಿ ದೊರೆಯಲಿವೆ? ಯಾವ ಸ್ಮಾರ್ಟ್‌ಫೋನ್‌ಗಳಿಗೆ ಎಷ್ಟು ಡಿಸ್ಕೌಂಟ್ ಲಭ್ಯ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒನ್‌ಪ್ಲಸ್ 10R
ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್ ಕೂಡ ಅಮೆಜಾನ್ ಸಮ್ಮರ್ ಸೇಲ್‌ನಲ್ಲಿ ಆಫರ್‌ನಲ್ಲಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಇದು 1080 x 2412 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8100 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುವ ಈ ಫೋನ್ ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ಕಂಟ್ರೋಲ್ ಆಗಲಿದೆ. ಇದರ ಜೊತೆಗೆ ಮಾಲಿ G610 MC6 GPU ಅನ್ನು ಫೋನ್ ಬಳಕೆಯನ್ನು ಇನ್ನಷ್ಟು ಸುಧಾರಣೆ ಮಾಡಿದೆ.
ರೆಡ್ಮಿ ನೋಟ್ 12 5G
ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್ ವಿಶೇಷ ರಿಯಾಯಿತಿ ನೀಡುವುದಾಗಿ ಘೋಷಣೆ ಮಾಡಿದೆ. ಈ ಸ್ಮರ್ಟ್‌ಫೋನ್ ಅಮೆಜಾನ್‌ನಲ್ಲಿ 15,249ರೂ. ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 50 ಪ್ರೊ
ರಿಯಲ್‌ಮಿ ನಾರ್ಜೊ 50 ಪ್ರೊ ಸ್ಮಾರ್ಟ್‌ಫೋನ್ 20,000ರೂ.ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಫೋನ್ 6.4 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 5G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಒಳಗೊಂಡಿದೆ. 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್ 5,000mAh ಬ್ಯಾಟರಿ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 33W ಡಾರ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಐಕ್ಯೂ ನಿಯೋ 6
ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್ ಅಮೆಜಾನ್ ಸಮ್ಮರ್ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಬೆಸ್ಟ್ ಆಯ್ಕೆಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಅನ್ನು ನೀವು 23,999ರೂ. ಬೆಲೆಗೆ ಖರೀದಿಸಬಹುದಾಗಿದೆ. ಇದು 6.62-ಇಂಚಿನ ಫುಲ್ ಹೆಚ್‌ಡಿ ಪ್ಲಸ್ E4 ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನ ಹೊಂದಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್ GW1P ಸೆನ್ಸಾರ್ ಅನ್ನು ಹೊಂದಿದೆ.

ಶಿಯೋಮಿ 12 ಪ್ರೊ
ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್ ಕೂಡ ವಿಶೇಷ ರಿಯಾಯಿತಿಯಲ್ಲಿ ದೊರೆಯಲಿದೆ ಅಂತಾ ಅಮೆಜಾನ್ ಘೋಷಣೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.73 ಇಂಚಿನ WQHD+ Samsung E5 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ.
ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 256GB ಹಾಗೂ 12GB RAM + 256GB ಇಂಟರ್ ಸ್ಟೋರೇಜ್ ಹೊಂದಿದೆ.


Click it and Unblock the Notifications








