Home
ಸುದ್ದಿಜಾಲ

ವಿವೋದ ಈ ಸ್ಮಾರ್ಟ್‌ಫೋನ್‌ಗೆ ಈಗ ಭರ್ಜರಿ ಡಿಸ್ಕೌಂಟ್‌; ಈ ಆಫರ್‌ ಬಿಡಬೇಡಿ!

ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಇದೀಗ ಅಮೆಜಾನ್‌ ಗ್ರೇಟ್‌ ಸಮ್ಮರ್ ಸೇಲ್‌ ಮೇಳವನ್ನು ಆಯೋಜಿಸಿದೆ. ಈ ಮೇಳವು ಇದೇ ಮೇ 7 ರ ವರೆಗೂ ಲೈವ್ ಆಗಿರಲಿದೆ. ಈ ಮಾರಾಟ ಮೇಳದಲ್ಲಿ ಆಯ್ದ ಮೊಬೈಲ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯ ಮಾಡಲಾಗಿದ್ದು, ಹೊಸ ಫೋನ್‌ ಖರೀದಿಸುವ ಗ್ರಾಹಕರಿಗೆ ಹಬ್ಬದ ವಾತಾವರಣ ಎನಿಸಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಗ್ರೇಟ್‌ ಸಮ್ಮರ್ ಸೇಲ್‌ ಚಾಲ್ತಿ ಇದ್ದು ಈ ಸೇಲ್‌ನಲ್ಲಿ ವಿವೋ ಸಂಸ್ಥೆಯು ವಿವೋ Y16 ಸ್ಮಾರ್ಟ್‌ಫೋನ್‌ ಶೇ. 44% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 8,999ರೂ. ಗಳಿಗೆ ಲಭ್ಯ ಇದ್ದು, ಆದರೆ ಲಭ್ಯ ಇರುವ ಬ್ಯಾಂಕ್‌ ಕೊಡುಗೆ ಸಹ ಪಡೆದರೆ, ಈ ಫೋನ್‌ ಅನ್ನು 8249ರೂ. ಗಳಿಗೆ ಖರೀದಿಸಲು ಅವಕಾಶ ಇದೆ.

ವಿವೋದ ಈ ಸ್ಮಾರ್ಟ್‌ಫೋನ್‌ಗೆ ಈಗ ಭರ್ಜರಿ ಡಿಸ್ಕೌಂಟ್‌; ಈ ಆಫರ್‌ ಬಿಡಬೇಡಿ!

ಅಂದಹಾಗೆ ಈ ಮೊಬೈಲ್‌ ಮೀಡಿಯಾ ಟೆಕ್‌ ಹೆಲಿಯೋ P35 SoC ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಜೊತೆಗೆ 10W ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಹಾಗಾದರೇ ವಿವೋ ಸಂಸ್ಥೆಯು ಈ ವಿವೋ Y16 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ Y16 ಮೊಬೈಲ್‌ ಫೀಚರ್ಸ್‌
ವಿವೋ Y16 ಮೊಬೈಲ್‌ 6.51 ಇಂಚಿನ IPS LCD HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 82.5% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ವಿವೋ Y16 ಮೊಬೈಲ್‌ ಮೀಡಿಯಾ ಟೆಕ್‌ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಸಪೋರ್ಟ್‌ ಜೊತೆಗೆ ರನ್‌ ಆಗಲಿದೆ. ಹಾಗೆಯೇ 4 GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲವನ್ನು ಹೊಂದಿದ್ದು, ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ವಿವೋ Y16 ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇನ್ನು ಈ ಕ್ಯಾಮೆರಾ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್-ಲ್ಯಾಪ್ಸ್ ಫೀಚರ್ಸ್‌ಗಳನ್ನು ಒಳಗೊಂಡಿದೆ.

ವಿವೋ Y16 ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಮತ್ತು ಸ್ಕ್ರಾಚ್-ರೆಸಿಸ್ಟೆಂಟ್ ರಿಯರ್‌ ಪ್ಯಾನಲ್‌ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ವಿವೋ Y16 ಮೊಬೈಲ್‌ 4 GB RAM ಮತ್ತು 128 GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್‌ ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Amazon Great Summer Sale: Vivo Y16 available at biggest price drop. know more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+