Home
ಸುದ್ದಿಜಾಲ

ಅಮೆಜಾನ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟಿವಿಗಳ ಮೇಲೆ ಬಿಗ್‌ ಡಿಸ್ಕೌಂಟ್‌!

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಆನ್‌ಲೈನ್‌ ಗ್ರಾಹಕರ ನೆಚ್ಚಿನ ತಾಣ ಎನಿಸಿಕೊಂಡಿದೆ. ಆನ್‌ಲೈನ್‌ ಗ್ರಾಹಕರಿಗೆ ವಿಶೇಷ ಡಿಸ್ಕೌಂಟ್‌ ಸೇಲ್‌ಗಳನ್ನು ನಡೆಸುತ್ತಾ ಬಂದಿದೆ. ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಅನೇಕ ಗ್ಯಾಜೆಟ್ಸ್‌ಗಳ ಮೇಲೆ ಆಫರ್‌ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತಲೇ ಬಂದಿದೆ. ಸದ್ಯ ಇದೀಗ ಅಮೆಜಾನ್‌ ಮೊಬೈಲ್‌ ಮತ್ತು ಟಿವಿ ಸೇವಿಂಗ್ಸ್‌ ಡೇಸ್‌ ಸೇಲ್‌ ಮೂಲಕ ಮತ್ತೆ ಬಂದಿದೆ. ಅಮೆಜಾನ್‌ ಮೊಬೈಲ್‌ ಮತ್ತು ಟಿವಿ ಸೇವಿಂಗ್ಸ್‌ ಡೇಸ್‌ ಸೇಲ್‌ ಇದೀಗ ಲೈವ್‌ ಆಗಿದ್ದು ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ನೀಡುತ್ತಿದೆ.

ಅಮೆಜಾನ್‌

ಹೌದು, ಅಮೆಜಾನ್‌ ಮೊಬೈಲ್‌ ಮತ್ತು ಟಿವಿ ಸೇವಿಂಗ್ಸ್‌ ಡೇಸ್‌ ಸೇಲ್‌ ಮೂಲಕ ಮರಳಿ ಬಂದಿದೆ. ಈ ಸೇಲ್‌ನಲ್ಲಿ ಗ್ರಾಹಕರು ಸ್ಮಾರ್ಟ್‌ಫೋನ್‌ಗಳು ಮತ್ತು ಟಿವಿಗಳ ಮೇಲೆ ವಿಶೇಷ ಆಫರ್‌ ಅನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಸ್ಯಾಮ್‌ಸಂಗ್‌, ಒನ್‌ಪ್ಲಸ್‌, ಶಿಯೋಮಿ, ರಿಯಲ್‌ಮಿ, ಒಪ್ಪೋ ಮತ್ತು ಟೆಕ್ನೋ ಸೇರಿದಂತೆ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳ ಮೇಲೆ ವಿಶೇಷ ರಿಯಾಯಿತಿ ದೊರೆಯಲಿದೆ. ಜೊತೆಗೆ ಅನೇಕ ಸ್ಮಾರ್ಟ್‌ಟಿವಿಗಳ ಮೇಲೆ ಗ್ರಾಹಕರು 40% ತನಕ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಅಮೆಜಾನ್‌ ಮೊಬೈಲ್‌ ಮತ್ತು ಟಿವಿ ಸೇವಿಂಗ್ಸ್‌ ಡೇಸ್‌ ಸೇಲ್‌ನಲ್ಲಿ ಏನೆಲ್ಲಾ ರಿಯಾಯಿತಿ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್‌

ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್‌

ಅಮೆಜಾನ್ ಮೊಬೈಲ್ ಮತ್ತು ಟಿವಿ ಸೇವಿಂಗ್ಸ್ ಡೇಸ್ ಸೇಲ್‌ನಲ್ಲಿ ರೆಡ್ಮಿ ನೋಟ್‌ 11T 5G 19,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಮಿ 11X ಫೋನ್‌ 25,999ರೂ.ಗೆ ಲಭ್ಯವಿದೆ. ಈ ಫೋನ್‌ ಮೇಲೆ 6,000ರೂ.ಗಳ ತನಕ ಡಿಸ್ಕೌಂಟ್‌ ಸಿಗಲಿದೆ. ಜೊತೆಗೆ ಹೆಚ್ಚುವರಿಯಾಗಿ ಎಕ್ಸ್‌ಚೇಂಜ್‌ ಆಫರ್‌ನಲ್ಲಿ 3,000ರೂ. ರಿಯಾಯಿತಿ ಲಭ್ಯವಾಗಲಿದೆ. ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಫೋನ್‌ ಆಫರ್‌ನಲ್ಲಿ ಕೇವಲ 22,999ರೂ.ಗಳಿಗೆ ದೊರೆಯಲಿದೆ. ಜೊತೆಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ ರಿಯಾಯಿತಿ ದರದಲ್ಲಿ 20,999ರೂ.ಗಳಿಗೆ ಲಭ್ಯವಾಗಲಿದೆ.

ಇದಲ್ಲದೆ ಐಕ್ಯೂ Z5 ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 21,990ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಐಕ್ಯೂ 7 ಸ್ಮಾರ್ಟ್‌ಫೋನ್‌ ಬೆಲೆ 27,990ರೂ ಆಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಬ್ಯಾಂಕ್‌ ಆಫರ್‌ ಮತ್ತು ಅಮೆಜಾನ್‌ ವೋಚರ್‌ ಮೂಲಕ 2,000.ರೂ ಕ್ಯಾಶ್‌ಬ್ಯಾಕ್‌ ನೀಡಲಿವೆ. ಇನ್ನು ಒಪ್ಪೋ A15s ಸ್ಮಾರ್ಟ್‌ಫೋನ್‌ 10,641ರೂ.ಬೆಲೆಗೆ ಲಭ್ಯವಾಗಲಿದೆ. ಹಾಗೆಯೇ ರಿಯಲ್‌ಮಿ ನಾರ್ಜೋ 50A ಸ್ಮಾರ್ಟ್‌ಫೋನ್‌ ಬೆಲೆ 10,349ರೂ. ಆಗಿದೆ. ಇನ್ನು ಟೆಕ್ನೋ ಪಾಪ್‌ 5 LTE ಸ್ಮಾರ್ಟ್‌ಫೋನ್‌ ರಿಯಾಯಿತಿ ದರದಲ್ಲಿ 6,699ರೂ.ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಜೊತೆಗೆ ಟೆಕ್ನೋ ಕಂಪೆನಿಯಿಂದ ಈ ಸ್ಮಾರ್ಟ್‌ಫೋನ್‌ಗಳ ಮೇಲೆ ಫೆಡರಲ್ ಬ್ಯಾಂಕ್ ಕಾರ್ಡ್‌ಗಳೊಂದಿಗೆ 10% ರಿಯಾಯಿತಿಯನ್ನು ಒಳಗೊಂಡಿವೆ.

ಸ್ಮಾರ್ಟ್‌ಟಿವಿಗಳ ಮೇಲೆ ಅತ್ಯುತ್ತಮ ಡಿಸ್ಕೌಂಟ್‌

ಸ್ಮಾರ್ಟ್‌ಟಿವಿಗಳ ಮೇಲೆ ಅತ್ಯುತ್ತಮ ಡಿಸ್ಕೌಂಟ್‌

ಅಮೆಜಾನ್ ಮೊಬೈಲ್ ಮತ್ತು ಟಿವಿ ಸೇವಿಂಗ್ಸ್ ಡೇಸ್ ಸೇಲ್‌ನಲ್ಲಿ ಸ್ಮಾರ್ಟ್‌ಟಿವಿಗಳ ಮೇಲೆ ಬಿಗ್‌ ಆಫರ್ ದೊರೆಯುತ್ತಿದೆ. ಇದರಲ್ಲಿ 32-ಇಂಚಿನ ರೆಡ್‌ಮಿ ಟಿವಿ 14,998ರೂ.ಗಳಿಗೆ ದೊರೆಯಲಿದೆ. ಇನ್ನು 50 ಇಂಚಿನ ರೆಡ್ಮಿ ಟಿವಿ ಮಾದರಿಯು 34,998ರೂ.ಗೆ ಖರೀದಿಗೆ ಲಭ್ಯವಿದೆ. ಇದಲ್ಲದೆ 32 ಇಂಚಿನ ಮಿ Horizon ಫುಲ್‌ ಹೆಚ್‌ಡಿ ಟಿವಿ ರಿಯಾಯಿತಿ ದರದಲ್ಲಿ 16,499ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಸ್ಯಾಮ್‌ಸಂಗ್‌ ಕಂಪೆನಿಯ 43 ಇಂಚಿನ ಕ್ರಿಸ್ಟಲ್‌ 4K ಪ್ರೋ UHD TV ಪ್ರಸ್ತುತ 36,990ರೂ.ಗಳಿಗೆ ದೊರೆಯಲಿದೆ. ಇನ್ನು ಒನ್‌ಪ್ಲಸ್‌ ಸ್ಮಾರ್ಟ್ ಟಿವಿ 16,499ರೂ.ಗಳಿಗೆ ಲಭ್ಯವಾಗಲಿದೆ. ಈ ಟಿವಿ 3,500ರೂ.ಗಳ ರಿಯಾಯಿತಿ ಸಿಗಲಿದೆ. ಇದಲ್ಲದೆ 50 ಇಂಚಿನ ಅಮೆಜಾನ್‌ ಬೇಸಿಕ್ಸ್‌ 4K ಟಿವಿ 40% ಡಿಸ್ಕೌಂಟ್‌ ಪಡೆದುಕೊಂಡಿದೆ.

Best Mobiles in India

English summary
Amazon Mobile and TV Savings Days sale offers on smartphones and TVs
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+