ಒನ್‌ಪ್ಲಸ್‌ನ ಈ ಫೋನ್ ಖರೀದಿಸಿದರೆ, 5,499ರೂ. ಮೌಲ್ಯದ ಇಯರ್‌ಬಡ್ಸ್ ಉಚಿತ!
ಲೀಡಿಂಗ್ ಇ ಕಾಮರ್ಸ್ ಅಮೆಜಾನ್ (Amazon) ವೆಬ್‌ಸೈಟ್ ಇದೀಗ ಪ್ರೈಮ್ ಡೇ ಸೇಲ್ ಅನ್ನು ಆಯೋಜಿಸಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಸೆಳೆದಿದೆ. ಈ ಮಾರಾಟದಲ್ಲಿ ಮುಖ್ಯವಾಗಿ ಸ್ಮಾರ್ಟ್‌ಫೊನ್‌ಗಳಿಗೆ ಭರಪೂರ ಡಿಸ್ಕೌಂಟ್ ಕೊಡುಗೆ ಘೋಷಿಸಿದೆ. ಆ ಪೈಕಿ ಸದ್ಯ ಒನ್‌ಪ್ಲಸ್ ಸಂಸ್ಥೆಯ ಒನ್‌ಪ್ಲಸ್ 12R ( OnePlus 12R ) ಫೋನ್ ಭಾರೀ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪ್ರೊಸೆಸರ್ ಸೌಲಭ್ಯ ಪಡೆದುಕೊಂಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಒನ್‌ಪ್ಲಸ್ 12R ( OnePlus 12R ) ಫೋನ್ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 256GB ಸ್ಟೋರೇಜ್ ವೇರಿಯಂಟ್ 42,999ರೂ. ಗಳ ಆಫರ್ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್ ಖರೀದಿಸಿದ ಗ್ರಾಹಕರಿಗೆ 5,499ರೂ. ಮೌಲ್ಯದ ಒನ್‌ಪ್ಲಸ್ ಬಡ್ಸ್ 3 ಇಯರ್‌ಬಡ್ಸ್ ಡಿವೈಸ್ ಉಚಿತವಾಗಿ ಲಭ್ಯ ಎಂದು ತಿಳಿಸಿದೆ.

ಅಂದಹಾಗೆ ಈ ಒನ್‌ಪ್ಲಸ್ 12R ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇನ್ನುಳಿದಂತೆ ಒನ್‌ಪ್ಲಸ್ 12R ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಒನ್‌ಪ್ಲಸ್ 12R ಫೀಚರ್ಸ್ ಹೀಗಿವೆ
ಒನ್‌ಪ್ಲಸ್ ಸಂಸ್ಥೆಯ ಈ ಫೋನ್ 6.78 ಇಂಚಿನ BOE X1 OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1,264x2,780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಇದು 120Hz ProXDR ರಿಫ್ರೆಶ್ ರೇಟ್ ಪಡೆದಿರುವ ಜೊತೆ LTPO 4.0 ತಂತ್ರಜ್ಞಾನವನ್ನು ಪಡೆದುಕೊಂಡಿದೆ. ಇದು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ನೊಂದಿಗೆ ಲೇಯರ್ಡ್ ಆಗಿದೆ.
ಒನ್‌ಪ್ಲಸ್ 12R ಸ್ಮಾರ್ಟ್ ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ OxygenOS 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ ಈ ಫೋನ್ 8GB RAM + 128GB ಮತ್ತು 16GB RAM + 256GB ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳನ್ನು ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಎನಿಸಿದೆ.
ಒನ್‌ಪ್ಲಸ್ 12R ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾವನ್ನು ಸೆಟ್‌ಅಪ್ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ 112-ಡಿಗ್ರಿ ಫೀಲ್ಡ್-ಆಫ್-ವ್ಯೂ ಆಗಿದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಮೊಬೈಲ್ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.
ಒನ್‌ಪ್ಲಸ್ ಕಂಪನಿಯ ಈ ನೂತನ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 100W SuperVOOC ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್ 5.3, 5G ಬೆಂಬಲ, ವೈ-ಫೈ 6E, ಬ್ಲೂಟೂತ್ 5.3, NFC, USB-C 3.2 ಜೆನ್ 2, ಜಿಪಿಎಸ್ ಅನ್ನು ಸಪೋರ್ಟ್ ಮಾಡಲಿದೆ. ಈ ಫೋನ್ ಅನ್ನು ಐರನ್ ಗ್ರೇ ಮತ್ತು ಕೋಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ.


Click it and Unblock the Notifications








