ನಿಮ್ಮಿಷ್ಟದ ಈ ಹೊಸ ವಿವೋ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
ಇ ಕಾಮರ್ಸ್ ದೈತ್ಯ ಪ್ಲಾಟ್‌ಫಾರ್ಮ್ ಅಮೆಜಾನ್ ನಲ್ಲಿ ಈಗ ಅಮೆಜಾನ್ ಪ್ರೈಮ್ ಡೇ ಮಾರಾಟ ಮೇಳವು ಶುರುವಾಗಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಸೆಳೆಯುತ್ತಿದೆ. ಇನ್ನು ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಬೊಂಬಾಟ್ ಡಿಸ್ಕೌಂಟ್ ಲಭ್ಯ ಇದ್ದು, ವಿವೋ ಸಂಸ್ಥೆಯು ಇತ್ತೀಚಿನ ವಿವೋ Y100 5G ಸ್ಮಾರ್ಟ್‌ಫೋನ್ ಸಹ ಆಕರ್ಷಕ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಗ್ರಾಹಕರು ವಿವೋ Y100 5G ಸ್ಮಾರ್ಟ್‌ಫೋನ್ ಅನ್ನು ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಈಗ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಈ ಫೋನ್ 29,999ರೂ. ಬೆಲೆಯನ್ನು ಪಡೆದಿದ್ದು, ಪ್ರೈಮ್ ಡೇ ಆಫರ್‌ನಲ್ಲಿ 23,999ರೂ. ಗಳ ಬೆಲೆಯಲ್ಲಿ ದೊರೆಯುತ್ತದೆ. ಕೆಲವು ಆಯ್ದ ಬ್ಯಾಂಕ್‌ಗಳ ರಿಯಾಯಿತಿ ಸಹ ಸಿಗಲಿದೆ.

ಇನ್ನು ವಿವೋ Y100 5G ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಈ ಫೋನ್ ಬ್ಲೂ ಮತ್ತು ಟ್ವಿಲೈಟ್ ಗೋಲ್ಡ್ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನುಳಿದಂತೆ ವಿವೋ Y100 5G ಫೋನ್ ಯಾವೆಲ್ಲಾ ಫೀಚರ್ಸ್ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ Y100 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ವಿವೋ Y100 5G ಸ್ಮಾರ್ಟ್‌ಫೋನ್ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒದಗಿಸಲಿದೆ.
ವಿವೋ Y100 5G ಪ್ರೊಸೆಸರ್ ಯಾವುದು : ವಿವೋ Y100 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ನಲ್ಲಿ ಸಪೋರ್ಟ್ ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 8GB RAM + 128GB ಆಂತರೀಕ ಸ್ಟೋರೇಜ್ ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯ ವಿಸ್ತರಿಸಲು ಅವಕಾಶ ನೀಡಿದೆ.
ವಿವೋ Y100 5G ಕ್ಯಾಮೆರಾ ಸೆನ್ಸಾರ್ ರಚನೆ : ವಿವೋ Y100 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಒಳಗೊಂಡಿದೆ.
ವಿವೋ Y100 5G ಬ್ಯಾಟರಿ ಬ್ಯಾಕ್‌ಅಪ್ : ವಿವೋ Y100 5G ಮೊಬೈಲ್ 44W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ, ಜಿಪಿಎಸ್ ಸಪೋರ್ಟ್ ಪಡೆದಿದೆ. ಜೊತೆಗೆ ಹೈ-ರೆಸ್ ಆಡಿಯೊ ಪ್ರಮಾಣೀಕರಣದೊಂದಿಗೆ 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸುತ್ತದೆ.


Click it and Unblock the Notifications








