ಅಮೆಜಾನ್ ಸೇಲ್‌ನಲ್ಲಿ ಬಜೆಟ್ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್!
ಜುಲೈ 26 ರಿಂದ ಶುರುವಾಗಿದ್ದ ಅಮೆಜಾನ್ ಪ್ರೈಮ್ ಡೇ ಸೇಲ್ ಇಂದು ಅಂತ್ಯವಾಗಲಿದೆ. ಆನ್‌ಲೈನ್ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಹೊತ್ತು ತಂದಿದ್ದ ಈ ಸೇಲ್ ಇನ್ನು ಕೂಡ ಲೈವ್ ಇದ್ದು, ಗ್ರಾಹಕರು ತಮ್ಮ ನೆಚ್ಚಿನ ಪ್ರಾಡಕ್ಟ್‌ಗಳನ್ನು ಖರೀದಿಸಬಹುದಾಗಿದೆ. ತಡ ರಾತ್ರಿ ಅಂತ್ಯವಾಗುವ ಈ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ನೀವು ಬಯಸಿದ ಪ್ರಾಡಕ್ಟ್ ಖರೀದಿಸಲು ಅವಕಾಶವಿದೆ. ಇನ್ನು ರಿಯಾಯಿತಿ ದರದಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಾದರೆ ಇದಕ್ಕಿಂತ ಉತ್ತಮ ಆಯ್ಕೆ ಮತ್ತೊಂದಿಲ್ಲ.

ಹೌದು, ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್ ನೀಡಲಾಗ್ತಿದೆ. ನಿಮ್ಮ ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಇಂದೇ ಕೊನೆ ಅವಕಾಶವಾಗಿದೆ. ಹಾಗಾದ್ರೆ ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ಯಾವೆಲ್ಲಾ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು ಅನ್ನೊದನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ರೆಡ್ಮಿ ನೋಟ್ 10
ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ ಮೇಲೆ 19% ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೂಲ ಬೆಲೆ 15,999ರೂ ಆಗಿದ್ದು, ರಿಯಾಯಿತಿ ದರದಲ್ಲಿ 12,999ರೂ ಗೆ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸಾಮರ್ಥ್ಯದ 6.43 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ12
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ12 ಸ್ಮಾರ್ಟ್‌ಫೋನ್ ಮೂಲಬೆಲೆ 12,999 ರೂ ಆಗಿದ್ದು ರಿಯಾಯಿತಿ ದರದಲ್ಲಿ 10,999 ರೂ ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.5-ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G
ಇದಲ್ಲದೆ ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ 24,999 ರೂ ಮೂಲ ಬೆಲೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ರಿಯಾಯಿತಿ ದರದಲ್ಲಿ 20,999ರೂ ಬೆಲೆಗೆ ಲಭ್ಯವಾಗಲಿದೆ. ಇದರ ಮೇಲೆ ಒಟ್ಟು 16% ರಿಯಾಯಿತಿ ಸಿಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರೆಡ್ಮಿ 9 ಪ್ರೈಮ್
ಇನ್ನು ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ದೊರೆಯುವ ಸ್ಮಾರ್ಟ್‌ಫೋನ್‌ಗಳಲ್ಲಿ ರೆಡ್ಮಿ 9 ಪ್ರೈಮ್ ಕೂಡ ಒಂದಾಗಿದೆ. 11,999 ರೂ ಮೂಲ ಬೆಲೆಯ ಈ ಸ್ಮಾರ್ಟ್‌ಫೋನ್ ರಿಯಾಯಿತಿ ದರದಲ್ಲಿ 9,999 ರೂ ಗಳಿಗೆ ಖರೀದಿಸಬಹುದಾಗಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5020 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








