ಅಮೆಜಾನ್ ಪ್ರೈಮ್ ಡೇ ಸೇಲ್: ಹೊಸ ಫೋನ್‌ ಖರೀದಿಗೆ ಇದಕ್ಕಿಂತ ಒಳ್ಳೆಯ ಆಫರ್ ಬೇಕಾ?

|

ಬಹುನಿರೀಕ್ಷಿತ ಅಮೆಜಾನ್ ಪ್ರೈಮ್ ಡೇ ಸೇಲ್ ಇದೀಗ ಲೈವ್‌ ಆಗಿದೆ. ಅಮೆಜಾನ್ ತಾಣವು ಕೆಲವು ಆಕರ್ಷಕ ಕೊಡುಗೆಗಳ ಮೂಲಕ ಆನ್‌ಲೈನ್‌ ಶಾಪಿಂಗ್‌ ಪ್ರಿಯರನ್ನು ಸೆಳೆದಿದೆ. ಎರಡು ದಿನಗಳ ಕಾಲ ನಡೆಯುವ ಈ ಮಾರಾಟ ಮೇಳವು ಇಂದಿನಿಂದ ಪ್ರಾರಂಭವಾಗಿದ್ದು, ಇದೇ ಜುಲೈ 24 ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟ ಮೇಳದಲ್ಲಿ ಆಯ್ದ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಉತ್ಪನ್ನಗಳಿಗೆ ಭರ್ಜರಿ ಕೊಡುಗೆ ಲಭ್ಯವಾಗಲಿದೆ.

ಆಯೋಜಿಸಿದೆ

ಹೌದು, ಇ ಕಾಮರ್ಸ್ ದೈತ್ಯ ಅಮೆಜಾನ್ ತಾಣವು ಇದೀಗ ಅಮೆಜಾನ್ ಪ್ರೈಮ್ ಡೇ ಸೇಲ್ (Amazon Prime Day Sale) ಆಯೋಜಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು, ಸ್ಮಾರ್ಟ್ ಟಿವಿಗಳು, ಫ್ಯಾಷನ್ ಮತ್ತು ಸೌಂದರ್ಯ ವಸ್ತುಗಳು ಬೊಂಬಾಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ. ಈ ಸೇಲ್‌ನಲ್ಲಿ ಆಪಲ್‌, ಒನ್‌ಪ್ಲಸ್‌, ಸ್ಯಾಮ್‌ಸಂಗ್‌, ಶಿಯೋಮಿ ಹಾಗೂ ಒಪ್ಪೋ ಸಂಸ್ಥೆಯ ಮೊಬೈಲ್‌ಗಳು ಆಕರ್ಷಕ ರಿಯಾಯಿತಿ ಪಡೆದಿವೆ. ಹಾಗಾದರೇ ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ಅತ್ಯುತ್ತಮ ರಿಯಾಯಿತಿ ಪಡೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ 50A ಪ್ರೈಮ್‌

ರಿಯಲ್‌ಮಿ ನಾರ್ಜೋ 50A ಪ್ರೈಮ್‌

ರಿಯಲ್‌ಮಿ ನಾರ್ಜೋ 50A ಪ್ರೈಮ್‌ ಫೋನ್ ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಫೋನ್ ಅಮೆಜಾನ್‌ನಲ್ಲಿ 11,249ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಅನ್ನು ಒಳಗೊಂಡಿದೆ. ಈ ಫೋನ್ ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G

ರಿಯಲ್‌ಮಿ ನಾರ್ಜೋ 50A ಪ್ರೈಮ್‌ ಫೋನ್ ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಫೋನ್ ಅಮೆಜಾನ್‌ನಲ್ಲಿ 17,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಇನ್ಫಿನಿಟಿ-V ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ಚಾರ್ಜಿಂಗ್‌ ಬೆಂಬಲಿಸುವ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಆಪಲ್‌ ಐಫೋನ್‌ 13

ಆಪಲ್‌ ಐಫೋನ್‌ 13

ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ಐಫೋನ್ 13 ಫೋನ್ 64,900 ರೂ. ಬೆಲೆಯಲ್ಲಿ ಮಾರಾಟವಾಗುತ್ತಿದೆ. ಆಪಲ್‌ ಐಫೋನ್‌ 13 ನಲ್ಲಿ 2000 ರೂ. ಗಳ ನೇರ ರಿಯಾಯಿತಿಯನ್ನು ನೀಡುತ್ತಿದೆ. ಏಕೆಂದರೆ ಫೋನ್‌ನ ಸಾಮಾನ್ಯ ಮಾರಾಟ ಬೆಲೆ 66,900 ರೂ. ಫ್ಲಾಟ್ ಡಿಸ್ಕೌಂಟ್ ಜೊತೆಗೆ, ನೀವು 12, 950 ರೂ. ವರೆಗೆ ಸಹ ಮಾಡಬಹುದು. ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಹೊಂದಿದ್ದು, 1200 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಇದು ಐಆರ್ ಆಧಾರಿತ ಫೇಸ್ ಐಡಿಯನ್ನು ಹೊಂದಿದೆ

ಒನ್‌ಪ್ಲಸ್‌ 10 ಪ್ರೊ 5G ಸ್ಮಾರ್ಟ್‌ಫೋನ್

ಒನ್‌ಪ್ಲಸ್‌ 10 ಪ್ರೊ 5G ಸ್ಮಾರ್ಟ್‌ಫೋನ್

ಅಮೆಜಾನ್ ಪ್ರೈಮ್ ಡೇ ಸೇಲ್ ನಲ್ಲಿ ಒನ್‌ಪ್ಲಸ್‌ 10 ಪ್ರೊ 5G ಸ್ಮಾರ್ಟ್‌ಫೋನ್‌ ಸಹ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಫೋನ್ ಬೆಲೆ 71,999 ರೂ. ಆಗಿದ್ದು, ಬ್ಯಾಂಕ್ ಕೊಡುಗೆಯೊಂದಿಗೆ ಇದು 58,890 ರೂ.ಗೆ ಸಿಗಲಿದೆ. ಇನ್ನು ಈ ಫೊನ್ 120Hz ರಿಫ್ರೆಶ್ ದರಕ್ಕೆ ಬೆಂಬಲದೊಂದಿಗೆ 6.7-ಇಂಚಿನ LTPO ಡಿಸ್ಪ್ಲೇಯನ್ನು ಫೋನ್ ಒಳಗೊಂಡಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 Gen 1 ಪ್ರೊಸೆಸರ್ ಜೊತೆಗೆ 12GB ಯ RAM ಅನ್ನು ಹೊಂದಿದೆ.

ಒಪ್ಪೋ A54 ಸ್ಮಾರ್ಟ್‌ಫೋನ್

ಒಪ್ಪೋ A54 ಸ್ಮಾರ್ಟ್‌ಫೋನ್

ಅಮೆಜಾನ್ ಪ್ರೈಮ್ ಡೇ ಸೇಲ್ ನಲ್ಲಿ ಈ ಫೋನ್ ಬೆಲೆ 13,989 ರೂ. ಆಗಿದೆ. ಇನ್ನು ಈ ಫೋನ್ 6.51 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ 10R ಸ್ಮಾರ್ಟ್‌ಫೋನ್

ಒನ್‌ಪ್ಲಸ್‌ 10R ಸ್ಮಾರ್ಟ್‌ಫೋನ್

ಅಮೆಜಾನ್ ಪ್ರೈಮ್ ಡೇ ಸೇಲ್ ನಲ್ಲಿ ಒನ್‌ಪ್ಲಸ್‌ 10R ಸ್ಮಾರ್ಟ್‌ಫೋನ್‌ ಸಹ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಫೋನ್ ಬೆಲೆ 39,999 ರೂ. ಆಗಿದ್ದು, ಬ್ಯಾಂಕ್ ಕೊಡುಗೆಯೊಂದಿಗೆ ಇದು 33,999 ರೂ.ಗೆ ಸಿಗಲಿದೆ. ಇನ್ನು ಈ ಫೊನ್ ಮೀಡಿಯಾಟೆಕ್ ಡೈಮೆನ್ಸಿಟಿ 8100 ಮ್ಯಾಕ್ಸ್ ಪ್ರೊಸೆಸರ್‌ನಿಂದ ಅದರ ಶಕ್ತಿಯನ್ನು ಸೆಳೆಯುತ್ತದೆ. ಹಾಗೆಯೇ ಈ ಫೋನ್ 50ಎಂಪಿ ಪ್ರಾಥಮಿಕ ಸೆನ್ಸಾರ್‌ ಅನ್ನು ಸಹ ಹೊಂದಿದೆ. ಮುಂಭಾಗದಲ್ಲಿ ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಸೋನಿ ಸಂವೇದಕವಿದೆ.

ಶಿಯೋಮಿ 11T ಪ್ರೊ ಸ್ಮಾರ್ಟ್‌ಫೋನ್

ಶಿಯೋಮಿ 11T ಪ್ರೊ ಸ್ಮಾರ್ಟ್‌ಫೋನ್

ಶಿಯೋಮಿ 11T ಪ್ರೊ ಫೋನ್ ಅಮೆಜಾನ್ ಪ್ರೈಮ್‌ನಲ್ಲಿ ಆಕರ್ಷಕ ಕೊಡುಗೆ ಪಡೆದಿದೆ. ಈ ಫೋನಿನ ಬೆಲೆಯು 35,999 ರೂ. ಆಗಿದ್ದು, ಬ್ಯಾಂಕ್ ಕೊಡುಗೆ ಸೇರಿದಂತೆ ಈ ಫೋನ್ 30,999 ರೂ. ಗಳ ದರದಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ.

Best Mobiles in India

English summary
Amazon Prime Day Sale Live: Best Deals on iPhone 13, Xiaomi 11T Pro and More.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X