50ಎಂಪಿ ಕ್ಯಾಮೆರಾ ಇರುವ ಈ ಮೊಬೈಲ್ ಈಗ ಸಸ್ತಾ ಬೆಲೆಗೆ ಲಭ್ಯ!
ಅಮೆಜಾನ್ ಇ ಕಾಮರ್ಸ್ ತಾಣವು ಗ್ರೇಟ್ ರಿಪಬ್ಲಿಕ್ ಡೇ ಮಾರಾಟ ಮೇಳವನ್ನು ಶುರು ಮಾಡಿಕೊಂಡಿದ್ದು, ಈ ಸೇಲ್ ಇದೇ ಜ. 18 ರ ವರೆಗೂ ಚಾಲ್ತಿ ಇರಲಿದೆ. ಈ ವಿಶೇಷ ಮಾರಾಟದಲ್ಲಿ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇವೆ. ಹಾಗೆಯೇ ಪೊಕೊ ಸಂಸ್ಥೆಯ ಪೊಕೊ C55 ಮೊಬೈಲ್ ಬೊಂಬಾಟ್ ರಿಯಾಯಿತಿ ಪಡೆದಿದೆ.
ಹೌದು, ಅಮೆಜಾನ್ ತಾಣದಲ್ಲಿ ಪೊಕೊ C55 ಫೋನ್ ಶೇ. 46% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್ ವೇರಿಯಂಟ್ 6,499ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಅವಕಾಶ ಇದೆ. ಇದರೊಂದಿಗೆ ಅಮೆಜಾನ್‌ನಲ್ಲಿ ಬ್ಯಾಂಕ್ ಡಿಸ್ಕೌಂಟ್, ನೋ ಕಾಸ್ಟ್ ಇಎಮ್‌ಐ ನಂತಹ ಸೌಲಭ್ಯಗಳು ಕೂಡಾ ದೊರೆಯುತ್ತವೆ.

ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡುವ ಈ ಫೋನ್ ಅಧಿಕ ಸ್ಟೋರೇಜ್ ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಪೊಕೊ C55 ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ C55 - ಫೀಚರ್ಸ್
ಪೊಕೊ C55 ಫೋನ್ 6.71 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 720 x 1650 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಇದರ ಜೊತೆಗೆ 120Hz ಟಚ್ ಸ್ಯಾಂಪಲಿಂಗ್ ರೇಟ್ ಬೆಂಬಲಿದ್ದು, ಪಾಂಡಾ ಗ್ಲಾಸ್ ಲೇಯರ್ ಮೂಲಕ ಹೆಚ್ಚಿನ ರಕ್ಷಣೆ ಒದಗಿಸುತ್ತದೆ.
ಪೊಕೊ C55 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಈ ಫೋನಿನಲ್ಲಿ ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಮ್ ಮೂಲಕ ರನ್ ಮಾಡುತ್ತದೆ.
ಹಾಗೆಯೇ 6GB RAM ನೊಂದಿಗೆ 64GB ಹಾಗೂ 4GB ಯೊಂದಿಗೆ 64GB ಹಾಗೂ 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಪಡೆದುಕೊಂಡಿದೆ. ಜೊತೆಗೆ RAM ಅನ್ನು 11GB ವರೆಗೆ ವಿಸ್ತರಿಸಬಹುದಾದ ಆಯ್ಕೆ ಸಹ ಇದ್ದು, ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ಇದೆ.
ಪೊಕೊ C55 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್ ಮುಖ್ಯ ಸೆನ್ಸರ್ f/1.8 ಅನ್ನು ಪಡೆದುಕೊಂಡಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಡೆಪ್ತ್ ಸೆನ್ಸಾರ್‌ನ f/2.4 ಅನ್ನು ಹೊಂದಿದೆ. ಇದರ ಜೊತೆಗೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.
ಪೊಕೊ C55 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಹೊಂದಿದೆ. ಇನ್ನುಳಿದಂತೆ ಈ ಫೋನ್ ರಿಯರ್ ಪ್ಯಾನಲ್‌ನಲ್ಲಿ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಸೌಲಭ್ಯ ಒಳಗೊಂಡಿದ್ದು, IP52 ರೇಟಿಂಗ್‌ನೊಂದಿಗೆ ಇದು ಧೂಳು ಮತ್ತು ಸ್ಪ್ಲಾಶ್ ನಿರೋಧಕವಾಗಿದೆ.
ಪೊಕೊ C55 ಸ್ಮಾರ್ಟ್‌ಫೋನ್ 4GB + 64GB ವೇರಿಯಂಟ್ ಆಯ್ಕೆ ಮತ್ತು 6GB + 128GB ವೇರಿಯಂಟ್‌ನ ಆಯ್ಕೆ ಗಳನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫಾರೆಸ್ಟ್ ಗ್ರೀನ್, ಪವರ್ ಬ್ಲಾಕ್ ಮತ್ತು ಕೂಲ್ ಬ್ಲೂ ಎಂಬ ಮೂರು ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಅಮೆಜಾನ್ ತಾಣದಲ್ಲಿ ಖರೀದಿ ಮಾಡಬಹುದು.


Click it and Unblock the Notifications








