128GB ಸ್ಟೋರೇಜ್‌ನ ಈ ಐಟೆಲ್ ಫೋನಿಗೆ ಈಗ ಬಿಗ್ ಡಿಸ್ಕೌಂಟ್!
ಅಮೆಜಾನ್ ಇ ಕಾಮರ್ಸ್ ತಾಣವು ಗ್ರೇಟ್ ರಿಪಬ್ಲಿಕ್ ಡೇ ಮಾರಾಟ ಮೇಳವನ್ನು ಶುರು ಮಾಡಿಕೊಂಡಿದ್ದು, ಈ ಸೇಲ್ ಇದೇ ಜ. 18 ರ ವರೆಗೂ ಲೈವ್ ಆಗಿರಲಿದೆ. ಈ ವಿಶೇಷ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇವೆ. ಹಾಗೆಯೇ ಐಟೆಲ್‌ನ ನೂತನ ಐಟೆಲ್ A70 ಫೋನ್ ಬಿಗ್ ಡಿಸ್ಕೌಂಟ್ ಪಡೆದಿದೆ.
ಹೌದು, ಅಮೆಜಾನ್ ತಾಣದಲ್ಲಿ ಇತ್ತೀಚಿನ ಐಟೆಲ್ A70 ಫೋನ್ ಶೇ. 32% ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 128GB ಸ್ಟೋರೇಜ್ ವೇರಿಯಂಟ್ 6,799 ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ದೊರೆಯುತ್ತದೆ. ಇದರೊಂದಿಗೆ ಅಮೆಜಾನ್‌ನಲ್ಲಿ ಬ್ಯಾಂಕ್ ಡಿಸ್ಕೌಂಟ್, ನೋ ಕಾಸ್ಟ್ ಇಎಮ್‌ಐ ನಂತಹ ಸೌಲಭ್ಯಗಳು ಕೂಡಾ ದೊರೆಯುತ್ತವೆ.

ಆಕ್ಟಾ-ಕೋರ್ Unisoc T603 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡುವ ಈ ಫೋನ್ ಅಧಿಕ ಸ್ಟೋರೇಜ್ ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿದೆ. ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಕೂಡ ಇದೆ. ಇನ್ನುಳಿದಂತೆ ಐಟೆಲ್ A70 ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಟೆಲ್ A70 - ಫೀಚರ್ಸ್
ಐಟೆಲ್ A70 ಫೋನ್ 6.6 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇ 1,612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್ ಸಪೋರ್ಟ್ ಇದ್ದು, 500 ನಿಟ್ಸ್‌ನ ಬ್ರೈಟ್‌ನೆಸ್ ಲೆವೆಲ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಡೈನಾಮಿಕ್ ಬಾರ್ ಫೀಚರ್ಸ್‌ನೊಂದಿದೆ ಕಾಣಿಸಿಕೊಂಡಿದೆ.
ಐಟೆಲ್ A70 ಫೋನ್ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 13 Go ಆವೃತ್ತಿ ಆಧಾರಿತ ಐಟೆಲ್‌ಓಎಸ್ 13 ನಲ್ಲಿ ರನ್ ಆಗುವುದು. ಹಾಗೆಯೇ 4GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಹಾಗೆಯೇ ಫೋನಿನ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 8GB ಯಿಂದ 12GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಕೂಡ ಇದೆ.
ಐಟೆಲ್ ಸಂಸ್ಥೆಯ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮೊದಲ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು ಅನಿರ್ದಿಷ್ಟ AI-ಬೆಂಬಲಿತ ಸೆಕೆಂಡರಿ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಐಟೆಲ್ A70 ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi 802.11, ಬ್ಲೂಟೂತ್ 5.0, GPS/GLONASS, ಮತ್ತು USB ಟೈಪ್-C ಹಾಗೂ ಹೆಡ್‌ಫೋನ್ ಜ್ಯಾಕ್ ಸಂಪರ್ಕವನ್ನು ಬೆಂಬಲಿಸುತ್ತದೆ. ಇದಲ್ಲದೆ ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಸೌಲಭ್ಯ ಪಡೆದಿದೆ.
ಐಟೆಲ್ A70 ಫೋನ್ ಭಾರತದಲ್ಲಿ 4GB + 64GB ಆಯ್ಕೆ ಹಾಗೂ 4GB + 128GB ಸ್ಟೋರೇಜ್ ಜೊತೆಗೆ 4GB + 256GB ರೂಪಾಂತರದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಈ ಫೋನ್ ಅಜೂರ್ ಬ್ಲೂ, ಬ್ರಿಲಿಯಂಟ್ ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








