ಜಸ್ಟ್‌ 749ರೂ.ಗಳಿಗೆ ಖರೀದಿಸಿ, Samsung Galaxy M32 5G ಫೋನ್!

|

ಪ್ರಸ್ತುತ 5G ಸ್ಮಾರ್ಟ್‌ಫೋನ್‌ ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದ್ದು, ಹೊಸ ಫೋನ್‌ ಖರೀದಿ ಮಾಡುವ ಗ್ರಾಹಕರು 5G ಫೋನ್‌ಗಳತ್ತ ಮನಸ್ಸು ಮಾಡುತ್ತಾರೆ. ಹೀಗೆ ಈ ದೀಪಾವಳಿ ಹಬ್ಬದಂದು ನೀವೇನಾದರೂ 5G ಸ್ಮಾರ್ಟ್‌ಫೋನ್‌ ಖರೀದಿಸುವ ಯೋಚನೆ ಮಾಡಿದ್ದರೇ ಅದಕ್ಕೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ (Amazon Great Indian Festival Sale) ಅತ್ಯುತ್ತಮ ಪ್ಲಾಟ್‌ಫಾರ್ಮ್ ಎನಿಸಿದೆ.

ಸ್ಮಾರ್ಟ್‌ಫೋನ್‌

ಹೌದು, ದೀಪಾವಳಿ ಅಂಗವಾಗಿ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಆಯೋಜಿಸಿದೆ. ಈ ಸೇಲ್‌ನಲ್ಲಿ 5G ಫೋನ್‌ಗಳು ರಿಯಾಯಿತಿ ಪಡೆದಿದ್ದು, ಮುಖ್ಯವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ ಭರ್ಜರಿ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಈ ಸೇಲ್‌ನಲ್ಲಿ ಗ್ರಾಹಕರು ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ ಅನ್ನು ಜಸ್ಟ್‌ 749ರೂ.ಗಳಿಗೆ (ಡಿಸ್ಕೌಂಟ್‌ ಮತ್ತು ಎಕ್ಸ್‌ಚೇಂಜ್ ಕೊಡುಗೆ ಸೇರಿ) ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿ ಮಾಡಿದರೇ, 1,250ರೂ.ಗಳ ತ್ವರಿತ ರಿಯಾಯಿತಿ ಸಿಗಲಿದೆ.

ರಿಯಾಯಿತಿ

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಲ್ಲಿ M32 5G ಸ್ಮಾರ್ಟ್‌ಫೋನ್‌ ಮೇಲೆ 29% ರಿಯಾಯಿತಿ ಇದೆ. 23,999ರೂ.ಗಳ ಈ ಫೋನ್‌ ಹಬ್ಬದ ಸೇಲ್‌ನಲ್ಲಿ 16,999ರೂ. ಲಭ್ಯ ಇದೆ. ಇದರೊಂದಿಗೆ ಗ್ರಾಹಕರು ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿಸಿದರೇ 1,250ರೂ.ಗಳ ಇನ್‌ಸ್ಟಂಟ್‌ ರಿಯಾಯಿತಿ ಸಿಗಲಿದೆ. ಆಗ ಫೋನ್‌ ಬೆಲೆಯು 15,749ರೂ. ಆಗಲಿದೆ.

ಉತ್ತಮ

ಹಾಗೆಯೇ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 15,000ರೂ.ಗಳ ವರೆಗೂ ಎಕ್ಸ್‌ಚೇಂಜ್ ಆಫರ್‌ ಪಡೆದಿದೆ. ಈ ಕೊಡುಗೆಯನ್ನು ಬಳಕೆ ಮಾಡಿ ಖರೀದಿಸಿದರೇ, ಗ್ಯಾಲಕ್ಸಿ M32 5G ಫೋನ್‌ ಬರೀ 749ರೂ.ಗಳಿಗೆ ಸಿಗಲಿದೆ. ಆದರೆ ಎಕ್ಸ್‌ಚೇಂಜ್ ಮಾಡುವ ಫೋನ್‌ ಕಾರ್ಯದ ಸ್ಥಿತಿ ಉತ್ತಮ ಆಗಿರಬೇಕು ಹಾಗೂ ಹೊಸ ಮಾಡೆಲ್‌ ಫೋನ್‌ ಆಗಿದ್ದರೇ ಮಾತ್ರ 15,000ರೂ. ಎಕ್ಸ್‌ಚೇಂಜ್ ಕೊಡುಗೆ ಸಿಗುವ ಸಾಧ್ಯತೆ ಇರುತ್ತದೆ. ಅಂದಹಾಗೇ ಹಬ್ಬದ ಈ ಸೇಲ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ಒನ್‌ಯುಐ 3.1 ನೊಂದಿಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದಕ್ಕೆ ಪೂರಕವಾಗಿ 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರೊಂದಿಗೆ ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, ವೈ-ಫೈ, ಬ್ಲೂಟೂತ್, ಮತ್ತು ಜಿಪಿಎಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್ ಮೌಂಟೆಡ್ ಫಿಂಗರ್‌ ಪ್ರಿಂಟ್ ಸ್ಕ್ಯಾನರ್‌ ಅನ್ನು ಸಹ ಒಳಗೊಂಡಿದೆ.

Most Read Articles
Best Mobiles in India

English summary
Amazon Sale: Buy Samsung Galaxy M32 5G Phone At Rs 749.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X