ಅಮೆಜಾನ್ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ ಸಿಗಲಿದೆ ಬಿಗ್ ಡಿಸ್ಕೌಂಟ್!
ಅಮೆಜಾನ್ ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಎನಿಸಿಕೊಂಡಿದೆ. ತನ್ನ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ಸದ್ಯ ಇದೀಗ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್ ಅನ್ನು ಹೊತ್ತು ತಂದಿದ್ದು, ಪ್ರೈಮ್ ಸದಸ್ಯರಿಗೆ ಇಂದು ರಾತ್ರಿಯಿಂದಲೇ ಲೈವ್ ಆಗಲಿದೆ. ಇನ್ನು ಈ ಸೇಲ್‌ನಲ್ಲಿ ಬಿಗ್ ಡಿಸ್ಕೌಂಟ್ ನೀಡುವುದಾಗಿ ಅಮೆಜಾನ್ ಈಗಾಗಲೇ ಘೋಷಣೆ ಮಾಡಿದೆ. ಈ ಪೈಕಿ ಸ್ಮಾರ್ಟ್‌ಫೋನ್‌ಗಳನ್ನು ಖರಿದಿಸುವವರಿಗೆ ಇದು ಉತ್ತಮ ಅವಕಾಶವಾಗಿದೆ.

ಹೌದು, ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ 30,000ರೂ ಒಳಗಿನ ಸ್ಮಾರ್ಟ್‌ಫೋನ್‌ಗಳು ಬಿಗ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ಗಳು ಕೈಗೆಟುಕುವ ಸಾಧನಗಳಿಗಿಂತ ಉತ್ತಮವಾದ ಅನುಭವವನ್ನು ನೀಡಲಿದೆ. ಡಿಸ್ಕೌಂಟ್ ಮಾತ್ರವಲ್ಲದೆ ಬ್ಯಾಂಕ್ ಆಫರ್‌ಗಳು ಕೂಡ ಇರುವುದರಿಂದ ನಿಮ್ಮ ನೆಚ್ಚಿನ ಸ್ಮಾರ್ಟ್‌ಫೋನ್‌ಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ. ಹಾಗಾದ್ರೆ ಅಮೆಜಾನ್ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒನ್‌ಪ್ಲಸ್ ನಾರ್ಡ್ 2
ಒನ್‌ಪ್ಲಸ್ ಕಂಪೆನಿಯ ಒನ್‌ಪ್ಲಸ್ ನಾರ್ಡ್ 2 ಸ್ಮಾರ್ಟ್‌ಫೋನ್ ನಿಮಗೆ ಅಮೆಜಾನ್ ಸೇಲ್‌ನಲ್ಲಿ ಕೇವಲ 28,499 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಬೆಂಬಲಿಸುವ 6.43-ಇಂಚಿನ AMOLED ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್ ಡ್ರಾಗನ್ 765G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಮದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ವೈಡ್-ಆಂಗಲ್ ಸೆನ್ಸರ್ ಅನ್ನು ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡುತ್ತದೆ.

ಮಿ 11X
ಅಮೆಜಾನ್ ಸೇಲ್‌ನಲ್ಲಿ ಮಿ 11X ಸ್ಮಾರ್ಟ್‌ಫೋನ್ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಜೊತೆಗೆ HDFC ಬ್ಯಾಂಕ್ ಆಫರ್ ಮೂಲಕ 20,990ರೂ ಒಳಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ E4 AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಿದೆ. ಹಾಗೆಯೇ 8GB RAM ಮತ್ತು 128GB ಸಂಗ್ರಹವನ್ನು ಹೊಂದಿದೆ. ಇದು 48 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಒಳಗೊಂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ 4520mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಐಕ್ಯೂ 7 5G
IQOO 7 5G ಸ್ಮಾರ್ಟ್‌ಫೋನ್ ಅಮೆಜಾನ್ ಸೇಲ್‌ನಲ್ಲಿ ಡಿಸ್ಕೌಂಟ್ ದರದಲ್ಲಿ ಲಭ್ಯವಾಗಲಿದೆ. ಇದು 6.62-ಇಂಚಿನ AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದು 4400mAh ಬ್ಯಾಟರಿಯನ್ನು ಹೊಂದಿದ್ದು, 66W ಚಾರ್ಜಿಂಗ್ ಬೆಂಬಲಿಸಲಿದೆ. ಅಮೆಜಾನ್ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು 26,990ರೂ,ಗಳಿಗೆ ಖರೀದಿಸಬಹುದು.

ಒನ್‌ಪ್ಲಸ್ ನಾರ್ಡ್ ಸಿಇ
ಒನ್‌ಪ್ಲಸ್ ನಾರ್ಡ್ ಸಿಇ ಸ್ಮಾರ್ಟ್‌ಫೋನ್ ಅಮೆಜಾನ್ ಸೇಲ್‌ನಲ್ಲಿ ನಿಮಗೆ ಕೇವಲ 22,999 ರೂ,ಗಳಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್ 6.43-ಇಂಚಿನ AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 750ಜಿ ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ 8GB/128GB ರೂಪಾಂತರವನ್ನು ಅಮೆಜಾನ್ ಸೇಲ್‌ನಲ್ಲಿ 23,499 ರೂ.ಗಳಿಗೆ ಖರೀದಿಸಬಹುದು.

ವಿವೋ V21e 5G
ವಿವೋ V21e 5G ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ AMOLED ಡಿಸ್‌ಪ್ಲೆ ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 720G ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನ್ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದಲ್ಲಿ ಲಭ್ಯವಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಚಾರ್ಜಿಂಗ್ ಬೆಂಬಲಿಸಲಿದೆ. ಅಮೆಜಾನ್ ಸೇಲ್‌ನಲ್ಲಿ ಈ ಫೋನ್ 24,990ರೂ ಬೆಲೆಗೆ ಲಭ್ಯವಾಗಲಿದೆ.


Click it and Unblock the Notifications








