Amazon sale: 50MP ಕ್ಯಾಮೆರಾ, 128GBಗೂ ಅಧಿಕ ಸ್ಟೋರೇಜ್... ಇಲ್ಲಿವೆ ಅಗ್ಗದ ಬೆಲೆಯ ಟಾಪ್ ಫೋನ್‌ಗಳು!
ಅಮೆಜಾನ್‌ನಲ್ಲಿ (Amazon) ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳು ಬಳಕೆದಾರರಿಗೆ ವಿವಿಧ ಅಗತ್ಯತೆಗಳನ್ನು ಪೂರೈಸುತ್ತಿವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕೈಗೆಟಕುವ ದರದಲ್ಲಿ ಅತ್ಯುತ್ತಮ ಫೋನ್‌ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಈ ಮೂಲಕ ಗ್ರಾಹಕರು ಭಾರೀ ಹಣ ಉಳಿತಾಯ ಮಾಡಬಹುದಾಗಿದೆ.
ಹೌದು, ಸ್ಮಾರ್ಟ್‌ಫೋನ್ ಖರೀದಿ ವೇಳೆ ಗ್ರಾಹಕರು ಅವರ ಅಗತ್ಯಕ್ಕೆ ತಕ್ಕ ಫೋನ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅದರಲ್ಲೂ ಭಾರತದಲ್ಲಿ ವಿಶೇಷವಾಗಿ ಕ್ಯಾಮೆರಾ ಹಾಗೂ ಬ್ಯಾಟರಿ, ಸ್ಟೋರೇಜ್ (Camera, battery, storage) ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ನೀವೇನಾದರೂ ಈ ಮೂರು ವಿಷಯಗಳನ್ನು ಇಟ್ಟುಕೊಂಡು ಸ್ಮಾರ್ಟ್‌ಫೋನ್ (Smartphone) ಖರೀದಿ ಮಾಡಲು ಮುಂದಾಗಿದ್ರೆ ಇಲ್ಲಿವೆ ನೋಡಿ ಅತ್ಯುತ್ತಮವಾದ ಫೋನ್‌ಗಳು. ಅದೂ ಸಹ ಈ ಫೋನ್‌ಗಳು ನಿಮಗೆ 25,000 ಕ್ಕಿಂತ ಕಡಿಮೆ ಬೆಲೆಗೆ ಲಭ್ಯ ಇವೆ.

ಕ್ಯಾಮೆರಾ ಪ್ರಿಯರಿಗೆ ಬೆಸ್ಟ್ ಆಯ್ಕೆ: ಸ್ಮಾರ್ಟ್‌ಫೋನ್ ಉತ್ಸಾಹಿಗಳಿಗೆ ಕ್ಯಾಮೆರಾ ಕಾರ್ಯಕ್ಷಮತೆಯು ನಿರ್ಣಾಯಕ ಅಂಶವಾಗಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋಟೋಗ್ರಫಿಯ ಜನಪ್ರಿಯತೆ ಹೆಚ್ಚುತ್ತಿದೆ. ಅದರಂತೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2023 ರ (Amazon Great Indian Festival Sale 2023) ಸಮಯದಲ್ಲಿ ನೀವು ಅತ್ಯುತ್ತಮ ಕ್ಯಾಮೆರಾ ಫೀಚರ್ಸ್ ಹೊಂದಿರುವ ಸ್ಮಾರ್ಟ್‌ಫೋನ್‌ಗಾಗಿ ಹುಡುಕುತ್ತಿದ್ದರೆ ಇಲ್ಲಿವೆ ನೋಡಿ.
ಒನ್‌ಪ್ಲಸ್ ನಾರ್ಡ್ N20 SE: ಈ ಫೋನ್ (OnePlus Nord N20 SE) ಅನ್ನು ನೀವು 13,800ರೂ.ಗಳಿಗೆ ಅಮೆಜಾನ್‌ನಲ್ಲಿ ಖರೀದಿ ಮಾಡಬಹುದು. ಇದರ ಸಾಮಾನ್ಯ ದರ 29,999 ರೂ.ಗಳು. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾದೊಂದಿಗೆ ಕಾಣಿಸಿಕೊಂಡಿದ್ದು, ಅದರಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸರ್ ಆಯ್ಕೆ ಹಾಗೂ ಮೀಡಿಯಾಟೆಕ್ ಹಿಲಿಯೋ G35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಉಳಿದಂತೆ ಇದು 6.56 ಇಂಚಿನ HD+ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.
ಒಪ್ಪೋ A78 5G : ಒಪ್ಪೋ ಫೋನ್ (Oppo A78 5G) ಅನ್ನು 18,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದರ ಸಾಮಾನ್ಯ ದರ 21,999ರೂ.ಗಳಾಗಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸರ್ ನೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರೊಂದಿಗೆ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಉಳಿದಂತೆ ಈ ಫೋನ್ 6.56 ಇಂಚಿನ 90Hz ರಿಫ್ರೆಶ್ ರೇಟ್ ಆಯ್ಕೆಯ HD+ IPS LCD ಪ್ಯಾನೆಲ್ ಅನ್ನು ಹೊಂದಿದೆ. ಇದು ಸಹ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G: ಈ ಸ್ಮಾರ್ಟ್‌ಫೋನ್‌ನ (Samsung Galaxy M14 5G) 6GB RAM + 128GB ಸ್ಟೋರೇಜ್ ವೇರಿಯಂಟ್‌ಗೆ 12,990 ರೂ.ಗಳ ಬೆಲೆ ನಿಗದಿ ಮಾಡಲಾಗಿದೆ. ಇಷ್ಟೇ ಅಲ್ಲದೆ ಎಸ್‌ಬಿಐ ಕಾರ್ಡ್ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 1,500 ತ್ವರಿತ ರಿಯಾಯಿತಿ ಸಹ ಸಿಗಲಿದೆ. ಇದರೊಂದಿಗೆ ವಿನಿಮಯ ಆಫರ್ ಸಹ ಇದ್ದು, ಇನ್ನೂ ಕಡಿಮೆ ಬೆಲೆಗೆ ಈ ಫೋನ್ ಖರೀದಿ ಮಾಡಬಹುದು. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, 50-ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸರ್ ಮತ್ತು ಎರಡು 2-ಮೆಗಾಪಿಕ್ಸೆಲ್ ಶೂಟರ್‌ಗಳನ್ನು ಹೊಂದಿದೆ. ಇದರೊಂದಿಗೆ 6000 mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದೆ.
ಲಾವಾ ಬ್ಲೇಜ್ 5G: ಈ ಫೋನ್ (Lava Blaze 5G) ಅನ್ನು 11,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಆಫರ್ ಸಹ ಇದ್ದು, ಈ ಮೂಲಕ ಇನ್ನೂ ಅಗ್ಗದ ಬೆಲೆಗೆ ಈ ಫೋನ್ ಲಭ್ಯ. ಜೊತೆಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲ ಪಡೆದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಸೆನ್ಸರ್ ಹೊಂದಿದೆ. ಈ ಫೋನ್ ಸಹ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ.

ಮೊಟೊ G82 : ಈ ಫೋನ್ (Moto G82) ಅನ್ನು ನೀವು ಈ ವಿಶೇಷ ಸೇಲ್‌ನಲ್ಲಿ 23,999ರೂ.ಗಳಿಗೆ ಖರೀದಿ ಮಾಡಬಹುದು. ಇದರಲ್ಲೂ ಸಹ ಬ್ಯಾಂಕ್ ಆಫರ್ ನೀಡಲಾಗಿದೆ. ಇನ್ನುಳಿದಂತೆ ಈ ಫೋನ್ 120Hz ರಿಫ್ರೆಶ್ ರೇಟ್ ಆಯ್ಕೆ ಇರುವ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಇದರೊಂದಿಗೆ 50 ಮೆಗಾಪಿಕ್ಸೆಲ್‌ನೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಈ ಫೋನ್ G82 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲ ಪಡೆದಿದೆ.


Click it and Unblock the Notifications








