Home
ಸುದ್ದಿಜಾಲ

ಅಮೆಜಾನ್‌ ಸೇಲ್‌: ಅಗ್ಗದ ಬೆಲೆಯ ಈ ಸ್ಮಾರ್ಟ್‌ಫೋನ್‌ಗಳಿಗೆ ಮತ್ತೆ ಆಫರ್‌!

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ ಸಂಸ್ಥೆಯ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ 2023 (amazon great indian festival sale 2023) ಈಗ ಚಾಲ್ತಿ ಇದೆ. ಈ ಹಬ್ಬದ ಸೇಲ್‌ನಲ್ಲಿ ಫೋನ್‌ಗಳೂ ಸೇರಿದಂತೆ ಇತರೆ ಡಿವೈಸ್‌ಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ಆ ಪೈಕಿ ಕೆಲವು ಮೊಬೈಲ್‌ಗಳು ಸುಮಾರು ಹತ್ತು ಸಾವಿರದೊಳಗೆ ಖರೀದಿಗೆ ಲಭ್ಯ ಇವೆ.

ಹೌದು, ಇ ಕಾಮರ್ಸ್‌ ದೈತ್ಯ ಅಮೆಜಾನ್ ಸಂಸ್ಥೆಯ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2023 ಬೊಂಬಾಟ್‌ ಕೊಡುಗೆಗಳ ಮೂಲಕ ಗ್ರಾಹಕರನ್ನು ಆಕರ್ಷಿಸಿದೆ. ಅದರಲ್ಲಿ ಅಧಿಕ ram ಹಾಗೂ ಬಿಗ್ ಬ್ಯಾಟರಿಯ ಕೆಲವು ಫೋನ್‌ಗಳು ಅತ್ಯುತ್ತಮ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ. ಹಾಗಾದರೆ ಅಮೆಜಾನ್‌ ಸೇಲ್‌ನಲ್ಲಿ 10,000ರೂ. ಒಳಗೆ ಲಭ್ಯ ಇರುವ ಕೆಲವು ಬೆಸ್ಟ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಅಮೆಜಾನ್‌ ಸೇಲ್‌: ಅಗ್ಗದ ಬೆಲೆಯ ಈ ಸ್ಮಾರ್ಟ್‌ಫೋನ್‌ಗಳಿಗೆ ಮತ್ತೆ ಆಫರ್‌!

ಐಟೆಲ್‌ P55 5G

ಈ ಫೋನ್‌ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಅನ್ನು ಪಡೆದಿದೆ. ಜೊತೆಗೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 6nm ಪ್ರೊಸೆಸರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲ ಸಹ ಪಡೆದಿದೆ. ಅಲ್ಲದೇ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಪಡೆದಿದ್ದು, ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಪಡೆದಿದೆ. ಅಮೆಜಾನ್‌ ಆಫರ್‌ ಬೆಲೆಯು 8,999ರೂ. ಆಗಿದೆ.

ಲಾವಾ ಬ್ಲೇಜ್‌ 5G

ಈ ಸ್ಮಾರ್ಟ್‌ಫೋನ್‌ 6.51 ಇಂಚಿನ HD+ IPS ಡಿಸ್‌ಪ್ಲೇ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಅಮೆಜಾನ್‌ ಕೊಡುಗೆ ಬೆಲೆಯು 8,774ರೂ. ಆಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌

ಈ ಮೊಬೈಲ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು ಎಕ್ಸಿನೋಸ್‌ 850 SoC ಪ್ರೊಸೆಸರ್‌ ಪಡೆದುಕೊಂಡಿದೆ. ಇದರ ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಒಳಗೊಂಡಿದ್ದು, 6,000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದುಕೊಂಡಿದೆ. ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಅಮೆಜಾನ್ ಆಫರ್‌ ಬೆಲೆಯು 9,199ರೂ. ಆಗಿದೆ.

ಮೊಟೊ G32 ಸ್ಮಾರ್ಟ್‌ಫೋನ್‌

ಮೊಟೊ ಸಂಸ್ತೆಯ ಈ ಫೋನ್‌ 6.5 ಇಂಚಿನ ಫುಲ್‌ HD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ವನ್ನು ಒಳಗೊಂಡಿದೆ. ಅಲ್ಲದೇ ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಅಮೆಜಾನ್‌ ಆಫರ್‌ ಬೆಲೆಯು 10,887ರೂ. ಆಗಿದ್ದು, ಇತರೆ ಕೊಡುಗೆ ಮೂಲಕ ಮತ್ತಷ್ಟು ಡಿಸ್ಕೌಂಟ್‌ ಪಡೆಯಬಹುದು.

Best Mobiles in India

English summary
amazon great indian festival sale 2023. best smartphones under rs 10,000.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+