Home
ಸುದ್ದಿಜಾಲ

ಸ್ಮಾರ್ಟ್‌ಫೋನ್‌ ಬೊನಾಂಜಾ ಸೇಲ್‌: ಈ ಸ್ಯಾಮ್‌ಸಂಗ್‌ ಮೊಬೈಲ್‌ಗಳಿಗೆ ಬಿಗ್ ಡಿಸ್ಕೌಂಟ್‌!

ಪ್ರಮುಖ ಇ ಕಾಮರ್ಸ್‌ ತಾಣ ಅಮೆಜಾನ್‌ ಈಗ 'ಸ್ಮಾರ್ಟ್‌ಫೋನ್‌ ಬೊನಾಂಜಾ' ಮಾರಾಟ ಮೇಳವನ್ನು ಆಯೋಜಸಿದೆ. ಜೂನ 16 ರಿಂದ (ಇಂದಿನಿಂದ) ಪ್ರಾರಂಭವಾಗಿರುವ ಈ ಮಾರಾಟ ಮೇಳವು ಇದೇ ಜೂನ 19, 2023 ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟ ಮೇಳದಲ್ಲಿ ಮುಖ್ಯವಾಗಿ ಸ್ಯಾಮ್‌ಸಂಗ್‌ ಸಂಸ್ಥೆಯ ಮೊಬೈಲ್‌ಗಳು ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿವೆ.

ಹೌದು, ಅಮೆಜಾನ್ ಇ ಕಾಮರ್ಸ್‌ ತಾಣವು ಈಗ ಸ್ಮಾರ್ಟ್‌ಫೋನ್‌ ಬೊನಾಂಜಾ (Smartphone Bonanza) ಮಾರಾಟ ಮೇಳವನ್ನು ಪ್ರಾರಂಭಿಸಿದೆ. ಈ ಸೇಲ್‌ ಮೇಳದಲ್ಲಿ ಸ್ಯಾಮ್‌ಸಂಗ್ ಸಂಸ್ಥೆಯು ಸ್ಯಾಮ್‌ಸಂಗ್ ಗ್ಯಾಲಕ್ಸಿ M13, ಸ್ಯಾಮ್‌ಸಂಗ್ ಗ್ಯಾಲಕ್ಸಿ 14 5G, ಸ್ಯಾಮ್‌ಸಂಗ್ ಗ್ಯಾಲಕ್ಸಿ M04, ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G, ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಫೋನ್ ಸೇರಿದಂತೆ ಕೆಲವು ಫೋನ್‌ಗಳು ಡಿಸ್ಕೌಂಟ್‌ ಪಡೆದಿವೆ.

ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸ್ಮಾರ್ಟ್‌ಫೋನ್‌ ಬೊನಾಂಜಾ ಸೇಲ್‌ನಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M13, ಸ್ಯಾಮ್‌ಸಂಗ್ ಗ್ಯಾಲಕ್ಸಿ 14 5G ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಫೋನ್‌ಗಳ ಆಫರ್‌ ಬೆಲೆ ಹಾಗೂ ಫೀಚರ್ಸ್ ಗಲ ಬಗ್ಗೆ ಈ ಲೇಖನದಲ್ಲಿ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 : ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 480 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇದು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0 ಆಧಾರಿತ ಒನ್‌ UI 4 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ ಈ ಮೊಬೈಲ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಅಮೆಜಾನ್‌ನ ಈ ಸೇಲ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಮೊಬೈಲ್‌ 9,699 ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G : ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಹಾಗೆಯೇ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೇ ಇದು 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಮೆಜಾನ್‌ನ ಈ ಸೇಲ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಮೊಬೈಲ್‌ 12,690 ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಜೊತೆಗೆ ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ.

ಸ್ಮಾರ್ಟ್‌ಫೋನ್‌ ಬೊನಾಂಜಾ ಸೇಲ್‌:ಸ್ಯಾಮ್‌ಸಂಗ್‌ ಮೊಬೈಲ್‌ಗಳಿಗೆ ಬಿಗ್ ಡಿಸ್ಕೌಂಟ್‌
ಅಲ್ಲದೇ ಹಿಂಬದಿಯಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದು ಎಲ್‌ಇಡಿ ಫ್ಲ್ಯಾಷ್‌ ಸೌಲಭ್ಯ ಸಹ ಇದೆ. ಇನ್ನು ಈ ಫೋನಿನ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಅಮೆಜಾನ್ ಸ್ಮಾರ್ಟ್‌ಫೋನ್‌ ಬೊನಾಂಜಾ ಮಾರಾಟದಲ್ಲಿ ಇದರ ಬೆಲೆಯು 7,299 ರೂ. ಆಗಿದೆ.
Best Mobiles in India

English summary
Amazon Smartphone Bonanza Sale: Best Deals on Samsung Galaxy M14 5G, Galaxy M04 and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+