ರೆಡ್ಮಿ ಕಂಪನಿಯ ಈ ಮೂರು ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!..ಈ ಆಫರ್‌ ಬಿಡಬೇಡಿ!

|

ಜನಪ್ರಿಯ ಇ-ಕಾಮರ್ಸ್‌ ದೈತ್ಯ ಎಂದೇ ಬಿಂಬಿತವಾಗಿರುವ ಅಮೆಜಾನ್‌ ಪ್ಲಾಟ್‌ಫಾರ್ಮ್ ಈಗ ಮತ್ತೊಮ್ಮೆ ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಡೇಸ್‌ (Amazon Smartphone Upgrade Days) ಸೇಲ್‌ ಅನ್ನು ಪ್ರಾರಂಭಿಸಿದೆ. ಇನ್ನು ಈ ಸೇಲ್‌ ಡಿಸೆಂಬರ್‌ 10, 2022 ರಿಂದ (ಇಂದಿನಿಂದ) ಲೈವ್‌ ಆಗಿದ್ದು, ಇದೇ ಡಿಸೆಂಬರ್‌ 14, 2022 ರವರೆಗೆ ಚಾಲ್ತಿ ಇರಲಿದೆ. ಈ ಮಾರಾಟ ಮೇಳದಲ್ಲಿ ಅಮೆಜಾನ್‌ ಇ ಕಾಮರ್ಸ್‌ ತಾಣವು ಕೆಲವು ಆಯ್ದ ಜನಪ್ರಿಯ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳಿಗೆ ಬೊಂಬಾಟ್‌ ಡಿಸ್ಕೌಂಟ್‌ ಘೋಷಿಸಿದೆ.

ಸ್ಮಾರ್ಟ್‌ಫೋನ್‌

ಹೌದು, ಅಮೆಜಾನ್‌ ಆಯೋಜಿಸಿರುವ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಡೇಸ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಆಕರ್ಷಕ ಡಿಸ್ಕೌಂಟ್‌ ಲಭ್ಯ ಮಾಡಿದೆ. ಮುಖ್ಯವಾಗಿ ಶಿಯೋಮಿ, ರಿಯಲ್‌ಮಿ, ಟೆಕ್ನೋ, ಐಕ್ಯೂ, ಒಪ್ಪೋ ಸೇರಿದಂತೆ ಇತರೆ ಕೆಲವು ಕಂಪನಿಗಳ ಫೋನ್‌ಗಳು ರಿಯಾಯಿತಿ ಪಡೆದಿವೆ. ಇದರೊಂದಿಗೆ ಬ್ಯಾಂಕ್‌ ಆಫರ್‌ಗಳು ಸಹ ಲಭ್ಯ ಇವೆ. ಹಾಗಾದರೇ ಭಾರೀ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿರುವ ಶಿಯೋಮಿ ಮೂರು ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 11 ಪ್ರೈಮ್‌ 5G ಸ್ಮಾರ್ಟ್‌ಫೋನ್‌

ರೆಡ್ಮಿ 11 ಪ್ರೈಮ್‌ 5G ಸ್ಮಾರ್ಟ್‌ಫೋನ್‌

ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಡೇಸ್‌ ಮಾರಾಟದಲ್ಲಿ ಈ ಫೋನ್ 11,999ರೂ. ಗಳಿಗೆ (ಬ್ಯಾಂಕ್‌ ರಿಯಾಯಿತಿ ಕೊಡುಗೆ ಸೇರಿ) ಖರೀದಿಸಬಹುದಾಗಿದೆ. ಇನ್ನು ರೆಡ್ಮಿ 11 ಪ್ರೈಮ್‌ 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 20.7:9 ರಚನೆಯ ಅನುಪಾತವನ್ನು ಹೊಂದಿದೆ.

ಮೀಡಿಯಾ

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ A1 ಸ್ಮಾರ್ಟ್‌ಫೋನ್‌

ರೆಡ್ಮಿ A1 ಸ್ಮಾರ್ಟ್‌ಫೋನ್‌

ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಡೇಸ್‌ ಮಾರಾಟದಲ್ಲಿ ಈ ಫೋನ್ 5,579ರೂ. ಗಳಿಗೆ (HDFC ಬ್ಯಾಂಕ್‌ ಕಾರ್ಡ್‌ ಕೊಡುಗೆ ಸೇರಿ) ಖರೀದಿಸಬಹುದಾಗಿದೆ. ರೆಡ್ಮಿ A1 ಸ್ಮಾರ್ಟ್‌ಫೋನ್‌ 1600 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಫುಲ್‌ ಹೆಚ್‌ಡಿ + ಸ್ಕ್ರ್ಯಾಚ್‌ ರೆಸಿಸ್ಟೆನ್ಸ್‌ ಮಾದಿರಯ ಡಿಸ್‌ಪ್ಲೇಯನ್ನು ಹೊಂದಿದೆ.

ಹಿಲಿಯೋ

ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಗೋ ಎಡಿಷನ್ ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಸಿಂಗಲ್‌ ವೇರಿಯಂಟ್ ಮಾದರಿಯನ್ನು ಒಳಗೊಂಡಿದ್ದು, 2 GB RAM + 32 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿವೆ. ಈ ಸ್ಮಾರ್ಟ್‌ಫೋನ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ.

ರೆಡ್ಮಿ 10A ಸ್ಮಾರ್ಟ್‌ಫೋನ್‌

ರೆಡ್ಮಿ 10A ಸ್ಮಾರ್ಟ್‌ಫೋನ್‌

ಅಮೆಜಾನ್‌ ಸೇಲ್‌ನಲ್ಲಿ ಈ ಫೋನ್ 7,469ರೂ. ಬೆಲೆಗೆ (HDFC ಬ್ಯಾಂಕ್‌ ಕಾರ್ಡ್‌ ಕೊಡುಗೆ ಸೇರಿ) ಗ್ರಾಹಕರು ಖರೀದಿಸಬಹುದಾಗಿದೆ. ರೆಡ್ಮಿ 10A ಸ್ಮಾರ್ಟ್‌ಫೋನ್‌ 720 × 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್‌ ಮೀಡಿಯಾಟೆಕ್‌ ಹಿಲಿಯೋ G25SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ ಈ ಫೋನ್ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ.

Best Mobiles in India

English summary
Amazon Smartphone Upgrade Days: Big Discount on Redmi 11 Prime 5G and more.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X