Home
ಸುದ್ದಿಜಾಲ

ಅಮೆಜಾನ್‌ ಅಪ್‌ಗ್ರೇಡ್‌ ಡೇಸ್‌ ಸೇಲ್‌ನಲ್ಲಿ ಈ ಫೋನ್‌ಗಳಿಗೆ ಬಿಗ್‌ ಆಫರ್‌!

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಭಾರತದಲ್ಲಿ ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಡೇಸ್‌ ಸೇಲ್‌ ಅನ್ನು ಘೋಷಿಸಿದೆ. ಇನ್ನು ಈ ಸೇಲ್‌ ಈಗಾಗಲೇ ಲೈವ್‌ ಆಗಿದ್ದು, ಇದೇ ಅಕ್ಟೋಬರ್ 28, 2022 ರವರೆಗೆ ನಡೆಯಲಿದೆ. ಈ ಸಮಯದಲ್ಲಿ ಅಮೆಜಾನ್‌ ಸ್ಮಾರ್ಟ್‌ಫೋನ್‌ಗಳು ಮತ್ತು ಸ್ಮಾರ್ಟ್‌ಫೋನ್‌ ಸಂಬಂಧಿತ ಬಿಡಿ ಭಾಗಗಳ ಮೇಲೆ ವಿಶೇಷ ಡೀಲ್ಸ್‌ ಮತ್ತು ಡಿಸ್ಕೌಂಟ್‌ ನೀಡುತ್ತಿದೆ. ಇದರಲ್ಲಿ ಒನ್‌ಪ್ಲಸ್‌, ಶಿಯೋಮಿ, ಸ್ಯಾಮ್‌ಸಂಗ್‌, ಐಕ್ಯೂ, ರಿಯಲ್‌ಮಿಯಂತಹ ಪ್ರಮುಖ ಬ್ರ್ಯಾಂಡ್‌ಗಳ ಫೋನ್‌ಗಳ ಮೇಲೆ 40% ಡಿಸ್ಕೌಂಟ್‌ ನೀಡಲಿದೆ.

ಅಮೆಜಾನ್‌

ಹೌದು, ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಡೇಸ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ಡಿಸ್ಕೌಂಟ್‌ ನೀಡಲಾಗ್ತಿದೆ. ಇದರಿಂದ ಪ್ರಮುಖ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳ ಮೇಲೆ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2, ರಿಯಲ್‌ಮಿ ನಾರ್ಜೊ 50i, ರೆಡ್ಮಿ 10 ಸರಣಿಯ ಫೋನ್‌ಗಳ ಮೇಲೆ ಡಿಸ್ಕೌಂಟ್‌ ದೊರೆಯಲಿದೆ. ಹಾಗಾದ್ರೆ ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಡೇಸ್‌ ಸೇಲ್‌ನಲ್ಲಿ ನೀವು ಪಡೆದುಕೊಳ್ಳಬಹುದಾದ ಡಿಸ್ಕೌಂಟ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏನೆಲ್ಲಾ ಆಫರ್‌ ಲಭ್ಯ!

ಏನೆಲ್ಲಾ ಆಫರ್‌ ಲಭ್ಯ!

ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಖರೀದಿಯ ಮೇಲೆ ರಿಯಾಯಿತಿಗಳ ಜೊತೆಗೆ ಬ್ಯಾಂಕ್ ಆಫರ್‌ ಕೂಡ ಲಭ್ಯವಿದೆ. ಇದರಲ್ಲಿ AU ಬ್ಯಾಂಕ್, ಫೆಡರಲ್ ಬ್ಯಾಂಕ್, RBL ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಬಳಸಿ ಖರೀದಿ ಮಾಡುವವರಿಗೆ 10% ಡಿಸ್ಕೌಂಟ್‌ ದೊರೆಯಲಿದೆ. ಇದಲ್ಲದೆ ಕನಿಷ್ಠ 5,000ರೂ.ಬೆಲೆಯ ವಹಿವಾಟುಗಳಿಗೆ ಕ್ರೆಡಿಟ್ ಕಾರ್ಡ್‌ಗಳ ಮೇಲೆ 750ರೂ. ಹೆಚ್ಚುವರಿ ರಿಯಾಯಿತಿ ದೊರೆಯಲಿದೆ. ಇದಲ್ಲದೆ ತಮ್ಮ ಆಯ್ಕೆಯ ಸ್ಮಾರ್ಟ್‌ಫೋನ್‌ಗಳ ಮೇಲೆ ಒಂಬತ್ತು ತಿಂಗಳವರೆಗಿನ ಎಕ್ಸ್‌ಚೇಂಜ್‌ ಆಫರ್‌ ಮತ್ತು ನೋ-ಕಾಸ್ಟ್ EMI ಆಯ್ಕೆ ಕೂಡ ಲಭ್ಯವಾಗಲಿದೆ.

ಡಿಸ್ಕೌಂಟ್‌ ಪಡೆದಿರುವ ಸ್ಮಾರ್ಟ್‌ಫೋನ್‌ಗಳು!

ಡಿಸ್ಕೌಂಟ್‌ ಪಡೆದಿರುವ ಸ್ಮಾರ್ಟ್‌ಫೋನ್‌ಗಳು!

ಐಕ್ಯೂ Z6 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಅಪ್‌ಗ್ರೇಡ್‌ ಸೇಲ್‌ ಪ್ರಯುಕ್ತ ರಿಯಾಯಿತಿ ದರದಲ್ಲಿ ಕೇವಲ 14,999ರೂ. ಬೆಲೆಗೆ ದೊರೆಯಲಿದೆ. ಇನ್ನು ಈ ಆಫರ್‌ ಬೆಲೆಯು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ಗಳ ಮೂಲಕ 1,000ರೂ. ವರೆಗೆ ರಿಯಾಯಿತಿಯನ್ನು ಒಳಗೊಂಡಿರಲಿದೆ. ಈ ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

ಐಕ್ಯೂ ನಿಯೋ 6 5G

ಐಕ್ಯೂ ನಿಯೋ 6 5G

ಐಕ್ಯೂ ನಿಯೋ 6 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಕೇವಲ 25,999 ರೂ.ಗಳ ಆರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.62-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನ ಹೊಂದಿದೆ. ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್‌ OS 12 ನಲ್ಲಿ ರನ್ ಆಗಲಿದೆ. ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್‌ GW1P ಸೆನ್ಸಾರ್‌ ಅನ್ನು ಹೊಂದಿದೆ.

ಒನ್‌ಪ್ಲಸ್‌ ನಾರ್ಡ್‌ CE 2

ಒನ್‌ಪ್ಲಸ್‌ ನಾರ್ಡ್‌ CE 2

ಒನ್‌ಪ್ಲಸ್‌ ನಾರ್ಡ್‌ CE 2 ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಸೇಲ್‌ನಲ್ಲಿ 23,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ರೆಡ್ಮಿ ನೋಟ್‌ 11T 5G

ರೆಡ್ಮಿ ನೋಟ್‌ 11T 5G

ಅಮೆಜಾನ್‌ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಸೇಲ್‌ ಪ್ರಯುಕ್ತ ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 14,999 ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.6-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ 810 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ಪ್ರೊ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Amazon Smartphone Upgrade Days sale: Top Deals on Smartphones
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+